ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಕೊಳೆತ ಹಣ್ಣಿನಂತೆ, ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಒಳ್ಳೆಯ ಹಣ್ಣಿನಂತಿದ್ದಾರೆ, ಮಾರುಕಟ್ಟೆಯಲ್ಲಿ ಒಳ್ಳೆಯ ಹಣ್ಣನ್ನು ಆಯ್ದುಕೊಳ್ಳುವಂತೆ ಕ್ಷೇತ್ರಕ್ಕೆ ಒಳ್ಳೆಯ ಅಭ್ಯರ್ಥಿಯನ್ನು ಆಯ್ಕೆಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು.
ತಾಲ್ಲೂಕಿನ ಮದುರೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಬಿಜೆಪಿಯ ಅಭ್ಯರ್ಥಿ ಧೀರಜ್ ಮುನಿರಾಜು ಪರ ರೋಡ್ ಶೋ ನಡೆಸಿ ಮಾತನಾಡಿದರು. ಪಕ್ಕದ ಕ್ಷೆತ್ರದ ಶಾಸಕರಾದ ಎಸ್ ಆರ್ ವಿಶ್ವನಾಥ್ ಅವರು ಯಲಹಂಕವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸಿದ್ದಾರೆ ಅದು ಅವರಿಂದ ಸಾಧ್ಯವಾಗುವುದಾದರೇ ದೊಡ್ಡಬಳ್ಳಾಪುರ ಕ್ಷೇತ್ರ ಏಕೆ ಅಭಿವೃದ್ದಿ ಹೊಂದಿಲ್ಲ ಎಂದು ಪ್ರಶ್ನಿಸುವ ಮೂಲಕ ಶಾಸಕರ ಕಾರ್ಯ ವೈಖರಿಯನ್ನು ಟೀಕಿಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಶಾಸಕರು ಯಾವ ಅಭಿವೃದ್ಧಿ ಕೆಲಸ ಮಾಡಿದ್ದಾರೆ, ಬರಿ ಹಣ ಮಾಡುವುದಷ್ಟೆ ಕೆಲಸ ಅಲ್ಲಾ, ಅಭಿವೃದ್ದಿ ಕೆಲಸ ಮಾಡಿ ತೋರಿಸಬೇಕು, ಬರಿ ಬಾಯಿ ಮಾತಿಗೆ ಎಲ್ಲವನ್ನು ನಾನೇ ಮಾಡಿದ್ದು ಎಂದು ಹೇಳಿದ್ದಕ್ಕಿಂತ ಏನು ಮಾಡಿದ್ದಾರೆ ಎಂದು ತೋರಿಸಲಿ ಎಂದು ಸವಾಲ್ ಹಾಕಿದರು.
ದೊಡ್ಡತುಮಕೂರು ಕೆರೆ ಸಂರಕ್ಷಣೆ ಕುರಿತು ಈಗಾಗಲೇ ಮುಖ್ಯಮಂತ್ರಿ ಮಾತುಕೊಟ್ಟಿದ್ದಾರೆ ಸ್ಥಳೀಯ ಶಾಸಕರು ಕೆರೆ ಉಳಿಸುವ ಕೆಲಸ ಮಾಡಬೇಕಾಗಿತ್ತು ಆದರೇ ಹತ್ತು ವರ್ಷಗಳಲ್ಲಿ ಏನು ಮಾಡಿಲ್ಲ.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಒಂದು ತಿಂಗಳಿನಲ್ಲೆ ನಗರದ ನಾಗರಕೆರೆ ಸೇರಿದಂತೆ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.
ಬಳಿಕ ಮಾತನಾಡಿದ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್, ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಅವರನ್ನು ನನ್ನ ಜೊತೆಯಲ್ಲೇ ಶಾಸನಸಭೆಗೆ ಕಳುಹಿಸಿಕೊಟ್ಟರೆ ದೊಡ್ಡಬಳ್ಳಾಪುರ ಅಭಿವೃದ್ದಿಗೆ ಇಬ್ಬರೂ ಸೇರಿ ಶ್ರಮಿಸುತ್ತೇವೆ, ನಮ್ಮ ಕ್ಷೇತ್ರದ ಗಡಿಭಾಗದ ಎಲ್ಲಾ ರಸ್ತೆಗಳನ್ನು ಅಭಿವೃದ್ದಿ ಪಡಿಸಿದ್ದೇನೆ ಆದರೇ ದೊಡ್ಡಬಳ್ಳಾಪುರ ಕ್ಷೇತ್ರದ ರಸ್ತೆಗಳು ಹದಗೆಟ್ಟಿವೆ ಮಧುರೆ ವರೆಗಿನ ರಸ್ತೆ ಕಾಮಗಾರಿಗೆ ಸರ್ಕಾರದೊಂದಿಗೆ ಮಾತನಾಡಿ ಚಾಲನೆ ಕೊಡಿಸಿದ್ದೇನೆ ಎಂದರು.
ಈ ವೇಳೆ ಬಿಜೆಪಿ ಮುಖಂಡ ಕೆ.ಹೆಚ್ ಹನುಂಮತರಾಯಪ್ಪ, ಬಿಜೆಪಿ ಅಭ್ಯರ್ಥಿ ಧೀರಜ್‌ಮುನಿರಾಜ್, ಬಿ.ಸಿ.ನಾರಾಯಣಸ್ವಾಮಿ, ತಿ.ರಂಗರಾಜು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಮತಯಾಚನೆ ಮಾಡಿದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…