ಬಿಜೆಪಿ ಅಭ್ಯರ್ಥಿ ಪರ ಕ್ಯೂಆರ್ ಕೋಡ್ ನವ ದೊಡ್ಡಬಳ್ಳಾಪುರ ಹೆಸರಿನ ಕೂಪನ್ ವಿತರಣೆ ಆರೋಪ: ಮೂವರು ಎಫ್ ಎಸ್ ಟಿ ತಂಡದ ವಶಕ್ಕೆ

2023ರ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಕ್ಯೂಆರ್ ಕೋಡ್ ಉಳ್ಳ ನವ ದೊಡ್ಡಬಳ್ಳಾಪುರ ಹೆಸರಿರುವ ಕೂಪನ್ ವಿತರಣೆ.

ಕೂಪನ್ ವಿತರಣೆ ಮಾಡುತ್ತಿದ್ದಾರೆಂದು ಗ್ರಾಮಸ್ಥರು ಆರೋಪಿಸಿ ಮೂವರನ್ನು ತಡೆದ ಗ್ರಾಮಸ್ಥರು ಎಫ್.ಎಸ್.ಟಿ ತಂಡದ ವಶಕ್ಕೆ ನೀಡಿರುವ ಘಟನೆ ತಾಲೂಕಿನ ಹೊಸಹಳ್ಳಿ ಗ್ರಾಮದ ಬಸ್ ನಿಲ್ದಾಣ ಬಳಿ ನಡೆದಿದೆ.

ವಶಕ್ಕೆ ಪಡೆದ ಮೂರು ಮಂದಿಯನ್ನು ಮಂಗಳೂರು ಮೂಲದವರು ಎಂದು ಗುರುತಿಸಲಾಗಿದೆ, ಹಲವು ತಂಡಗಳಾಗಿ, ತಾಲೂಕಿನಾದ್ಯಂತ ಗ್ರಾಮಗಳಿಗೆ ತೆರಳಿ RSS ವತಿಯಿಂದ ಬಂದಿದ್ದೇವೆ, ಬಿಜೆಪಿ ಅಭ್ಯರ್ಥಿ ಕಡೆಯವರು ಎನ್ನುತ್ತ, ಮತ ಚೀಟಿಯಲ್ಲಿನ ಮಾಹಿತಿಯುಳ್ಳ ಹಾಗೂ ಕ್ಯೂಆರ್ ಕೋಡ್ ಹೊಂದಿರುವ ನವ ದೊಡ್ಡಬಳ್ಳಾಪುರ ಹೆಸರಿನ ಕೂಪನ್ ವಿತರಿಸುತ್ತಿದ್ದರೆಂದು‌ ಗ್ರಾಮಸ್ಥರು ಆರೋಪಿಸಿದ್ದಾರೆ.

ಸ್ಥಳಕ್ಕೆ ದೌಡಾಯಿಸಿದ ಡಿ.ರಾಜೇಶ್ವರಿ ನೇತೃತ್ವದ ಎಫ್.ಎಸ್.ಟಿ ತಂಡದ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು ಹೊಸಹಳ್ಳಿ ಪೊಲೀಸ್ ಠಾಣೆಗೆ ಕರೆದೊಯ್ತಿದ್ದಾರೆ.

ಬಂಧಿತರಿಂದ ಮತದಾರ ಪಟ್ಟಿ, ಹಾಗೂ ತಾಲೂಕಿನಾಧ್ಯಂತ ಕ್ಯೂಆರ್ ಕೋಡ್ ಕೂಪನ್ ವಶಕ್ಕೆ ಪಡೆಯಲಾಗಿದೆ.

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

3 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

5 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

6 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

19 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

23 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago