ಬಿಜೆಪಿ ಅಸಂಘಟಿತ ಕಾರ್ಮಿಕರ ಪ್ರಕೋಷ್ಠದಿಂದ ಪೂರ್ವಭಾವಿ ಸಭೆ

ಅತಿ ಹೆಚ್ಚು ಯುವಕರನ್ನು ಹೊಂದಿರುವ ದೇಶ ಎಂದರೆ ಭಾರತ, ಇಲ್ಲಿನ ಯುವಕರು ಬಿಜೆಪಿ ಪಕ್ಷದ ಸಿದ್ಧಾಂತ ಒಪ್ಪಿಕೊಂಡು ಶೇ 70 ರಷ್ಟು ಬಿಜೆಪಿಗೆ ಮತ ಹಾಕುತ್ತಿದ್ದಾರೆ. ನಮ್ಮ ದೇಶ ಜಿಡಿಪಿಯಲ್ಲಿ ಬ್ರಿಟನ್ ದೇಶವನ್ನು ಹಿಂದಿಕ್ಕಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯಿಂದ ಇದು ಸಾಧ್ಯವಾಗಿದೆ ಎಂದು ಬಿಜೆಪಿ ಅಸಂಘಟಿತ ಕಾರ್ಮಿಕರ ಪ್ರಕೋಷ್ಠದ ಸಂಚಾಲಕ ಅಂಬರೀಶ್ ಗೌಡ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಜೆಪಿ ಅಸಂಘಟಿತ ಕಾರ್ಮಿಕರ ಪ್ರಕೋಷ್ಠ ಉತ್ತಮ ಸ್ಥಾನದಲ್ಲಿದೆ, ಅಸಂಘಟಿತ ಕಾರ್ಮಿಕರ ಸಮಸ್ಯೆ, ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದೆ ಎಂದರು. ಕಾರ್ಮಿಕ ವಲಯದಲ್ಲಿ ಕಾರ್ಮಿಕರು ಸಾಕಷ್ಟು ಸಮಸ್ಯೆಗಳಿಗೆ ಗುರಿಯಾಗುತ್ತಿದ್ದು, ಅವರಿಗೆ ಸಿಗಬೇಕಾದ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ..ಮುಂದಿನ ದಿನಗಳಲ್ಲಿ ಬಿಜೆಪಿ ಅಸಂಘಟಿತ ಕಾರ್ಮಿಕಪ್ರಕೋಷ್ಠದಿಂದ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನ ಮಾಡುತ್ತೇವೆ, ಇದರ ಜೊತೆ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ತಿಳಿಸಿದರು..

ಇದೆ ವೇಳೆ ದೇವನಹಳ್ಳಿ ನಗರ ಅಸಂಘಟಿತ ಕಾರ್ಮಿಕರ ಪ್ರಕೋಷ್ಠ ಸಂಚಾಲಕ ಸುರೇಶ್ ಆಚಾರ್, ಬೆ.ಗ್ರಾ. ಅಸಂಗಟಿತ ಕಾರ್ಮಿಕರ ಪ್ರಕೋಷ್ಟ ಸಮಿತಿ ಸದಸ್ಯ ಗಜೇಂದ್ರ ಎಸ್ ಎಸ್ , ಲಿಕಿತ್ ಕುಮಾರ್, ಸಂತೋಷ್ ಎಸ್ , ಉಲ್ಲಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *