ಗಂಭೀರ ಹಲ್ಲೆಗೊಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಎಸ್‍ಸಿ ಮೋರ್ಚಾ ಮುಖಂಡ ಪೃಥ್ವಿ ಸಿಂಗ್ ಅವರನ್ನು ಕಂಡು ಆರೋಗ್ಯ ವಿಚಾರಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ.
ನಂತರ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರ ಮೇಲಿನ ಕಾಂಗ್ರೆಸ್ ಗೂಂಡಾಗಿರಿ ವಿಪರೀತಕ್ಕೆ ಹೋಗುತ್ತಿದ್ದು, ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಹೋದರ ಎಂಎಲ್‍ಸಿ ಚನ್ನರಾಜ್ ಹಟ್ಟಿಹೊಳಿ, ಅವರ ಗನ್‍ಮ್ಯಾನ್ ಮತ್ತು ಇತರ ಸಹಚರರಿಂದ ಬಿಜೆಪಿ ಎಸ್‍ಸಿ ಮೋರ್ಚಾ ಮುಖಂಡ ಪೃಥ್ವಿ ಸಿಂಗ್ ಮೇಲೆ ಹಲ್ಲೆ ಆಗಿದೆ ಎಂದು ಆರೋಪಿಸಿದರು.
ಈ ಪ್ರಕರಣವನ್ನು ಪೋಲಿಸರು ಪ್ರಭಾವಗಳಿಗೆ ಮಣಿಯದೇ ಗಂಭೀರವಾಗಿ ಪರಿಗಣಿಸಿ ಆರೋಪಿತರನ್ನು ಬಂಧಿಸಿ ತನಿಖೆ ನಡೆಸಬೇಕೆಂದು ಒತ್ತಾಯಿಸುತ್ತೇನೆ. ಅಧಿಕಾರ ಬಲದ ಮದದಿಂದ ಬೆಳಗಾವಿ ಭಾಗದಲ್ಲಿ ಗೂಂಡಾಗಿರಿ ಪ್ರಕರಣಗಳು ಪೊಲೀಸ್ ಠಾಣೆಗಳಲ್ಲಿ ದಾಖಲಾಗುತ್ತಿಲ್ಲ ಎಂಬ ಆರೋಪವೂ ಕೇಳಿ ಬರುತ್ತಿದ್ದು, ಈ ಸಂಬಂಧ ಗೃಹ ಸಚಿವರು ಜಾಣ ಕುರುಡು ಪ್ರದರ್ಶಿಸಿದರೆ, ಬಿಜೆಪಿಯ ಹೋರಾಟದ ಬಿಸಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸ ಬಯಸುತ್ತೇನೆ ಎಂದು ತಿಳಿಸಿದರು.
ಕಾಂಗ್ರೆಸ್ ಸರ್ಕಾರದಲ್ಲಿ ರೈತರು, ಹೋರಾಟಗಾರರು, ದಲಿತರು ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಗೂಂಡಾಗಳ ದೌರ್ಜನ್ಯದ ಜತೆಗೇ ಪೊಲೀಸರ ದಬ್ಬಾಳಿಕೆಯೂ ಹೆಚ್ಚುತ್ತಿದ್ದು ಈ ಸಂಬಂಧ ನಮ್ಮ ಪಕ್ಷ ಸದನದ ಒಳಗೆ ಹೊರಗೆ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಹೇಳಿದರು.
ಸದ್ಯ ಹಲ್ಲೆಗೊಳಗಾಗಿರುವ ಪೃಥ್ವಿ ಸಿಂಗ್ ಸ್ಥಳೀಯ ಪೊಲೀಸ್ ವ್ಯವಸ್ಥೆ ಬಗ್ಗೆ ವಿಶ್ವಾಸ ಕಳೆದುಕೊಂಡಿದ್ದು, ಆತಂಕದಲ್ಲಿರುವ ಅವರ ಕುಟುಂಬಕ್ಕೆ ಸೂಕ್ತ ರಕ್ಷಣೆ ಕೊಡಿಸಲು ಗೃಹ ಇಲಾಖೆಯ ಉನ್ನತ ಅಧಿಕಾರಿಗಳು ಮಧ್ಯ ಪ್ರವೇಶಿಸಬೇಕೆಂದು ಒತ್ತಾಯಿಸುವೆ ಎಂದರು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷರಾದ ಶ್ರೀ ಸಂಜಯ್ ಪಾಟೀಲ್, ಶಾಸಕರಾದ ಅಭಯ್ ಪಾಟೀಲ್,ಮಾಜಿ ಶಾಸಕರಾದ ಶ್ರೀ ಅನಿಲ್ ಬೆನಕೆ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಮಹಾಂತೇಶ ಕವಟಗಿಮಠ, ಎಸ್.ಸಿ.ಮೋರ್ಚಾ ರಾಜ್ಯಾಧ್ಯಕ್ಷರಾದ ಶ್ರೀ ಛಲವಾದಿ ನಾರಾಯಣ ಸ್ವಾಮಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…