ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ


ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ ವಾಗ್ವಾದ ತೀವ್ರಗೊಂಡಿದ್ದು, ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ತೀವ್ರ ವಾಗ್ದಾಳಿ ನಡೆಸಿದರು.

ದೊಡ್ಡಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, SIR ವಿಚಾರದಲ್ಲಿ ಕಾಂಗ್ರೆಸ್ ನಾಯಕರು ದುರುದ್ದೇಶಪೂರಿತ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಮುಂದಿನ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಲೇ ಕಾಂಗ್ರೆಸ್ ನಾಯಕರು ಈಗಿನಿಂದಲೇ ಕಾರಣ ಹುಡುಕುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಟೀಕಿಸಿದರು.

“ಮತದಾರರ ಮತವನ್ನು ಯಾರೂ ಕಣ್ಣುಮುಚ್ಚಿ ತೆಗೆದುಕೊಂಡು ಹೋಗಲು ಸಾಧ್ಯವಿಲ್ಲ. ಪ್ರತಿಯೊಂದು ಪಕ್ಷದಲ್ಲಿಯೂ ಬಿಎಲ್‌ಎ-2 ಪ್ರತಿನಿಧಿಗಳು ಇರುತ್ತಾರೆ. ಜೊತೆಗೆ ಅಧಿಕಾರಿಗಳಾಗಿ ಬಿಎಲ್‌ಒಗಳು ಕಾರ್ಯನಿರ್ವಹಿಸುತ್ತಾರೆ. ಮತದಾರರ ಪಟ್ಟಿಯಲ್ಲಿ ಸಾವನ್ನಪ್ಪಿದವರ ಹೆಸರು ಇದ್ದರೆ ಅದನ್ನು ತೆಗೆದುಹಾಕಲಾಗುತ್ತದೆ,” ಎಂದು ಹೇಳಿದರು.

ಬೇರೆ ದೇಶಗಳಲ್ಲಿ ಅಥವಾ ಬೇರೆ ಊರುಗಳಲ್ಲಿ ನೆಲೆಸಿರುವವರ ಹೆಸರು ಮತದಾರರ ಪಟ್ಟಿಯಲ್ಲಿ ಉಳಿಯಬೇಕೇ ಎಂಬ ಪ್ರಶ್ನೆಯೂ ಇದೆ. ಆದರೆ ಗ್ರಾಮದಲ್ಲಿ ವಾಸವಾಗಿರುವ ವ್ಯಕ್ತಿಗಳ ಹೆಸರನ್ನು ಯಾವುದೇ ಕಾರಣಕ್ಕೂ ಪಟ್ಟಿಯಿಂದ ತೆಗೆದುಹಾಕಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಮತದಾರರಿಗೆ ಯಾವುದೇ ರೀತಿಯ ಅನ್ಯಾಯವಾಗಿದ್ರೆ ಸಂಬಂಧಪಟ್ಟ ಸ್ಥಳೀಯ ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಿಕೊಳ್ಳಲು ಅವಕಾಶವಿದೆ ಎಂದು ತಿಳಿಸಿದರು. ಕಾಂಗ್ರೆಸ್ ನಾಯಕರು ರಾಜಕೀಯ ದುರುದ್ದೇಶದಿಂದಲೇ ಜನರಲ್ಲಿ ಗೊಂದಲ ಸೃಷ್ಟಿಸುವ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.

ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿಲ್ಲ. ಕೇಂದ್ರದಲ್ಲಿ ಯಾವುದೇ ಸರ್ಕಾರ ಇದ್ದರೂ ಈ ಪ್ರಕ್ರಿಯೆ ನಡೆಯುತ್ತದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು. ತಪ್ಪಿದ್ದಲ್ಲಿ ಕೋರ್ಟ್ ಮೊರೆ ಹೋಗಿ ನ್ಯಾಯ ಪಡೆದುಕೊಳ್ಳಬಹುದು ಎಂದು ಹೇಳಿದರು.

ಪೆಟ್ರೋಲ್, ಡೀಸೆಲ್ ದರ ಏರಿಕೆ ಕುರಿತು ಪ್ರತಿಕ್ರಿಯೆ

ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಕುರಿತು ಪ್ರತಿಕ್ರಿಯಿಸಿದ ಸಂಸದ ಡಾ.ಕೆ.ಸುಧಾಕರ್, “ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಇರಾನ್ ಮೂಲಕ ನಮಗೆ ಕಚ್ಚಾ ತೈಲ ಬರುತ್ತಿತ್ತು. ಯುದ್ಧದ ಪರಿಣಾಮ ಕೆಲವು ದೇಶಗಳಲ್ಲಿ ತೈಲದ ಬೆಲೆ ಲೀಟರ್‌ಗೆ 300 ರಿಂದ 400 ರೂ.ವರೆಗೆ ಏರಿಕೆಯಾಗಿದೆ,” ಎಂದರು.

“ದೇಶದಲ್ಲಿ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ತೈಲದ ಬೆಲೆ ಕಡಿಮೆ ಇದೆ. ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಬೆಲೆ ಹೆಚ್ಚು ಇದೆ. ತೈಲ ಉತ್ಪಾದಕ ರಾಷ್ಟ್ರಗಳಲ್ಲಿಯೂ ಆಯಿಲ್ ಕಂಪನಿಗಳು ನಷ್ಟದಲ್ಲಿವೆ. ಆದರೂ ಪ್ರಧಾನಿ ನರೇಂದ್ರ ಮೋದಿ ವಿಶೇಷ ಮುತುವರ್ಜಿ ವಹಿಸಿ ಜನರ ಮೇಲೆ ಹೆಚ್ಚಿನ ಹೊರೆ ಬೀಳದಂತೆ ನೋಡಿಕೊಳ್ಳುತ್ತಿದ್ದಾರೆ,” ಎಂದು ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಕುರಿತು ಪ್ರತಿಕ್ರಿಯೆ

ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, “ಈಗ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ರಾಜ್ಯ ಪ್ರವಾಸದಲ್ಲಿದ್ದಾರೆ. ಈ ಪ್ರಶ್ನೆಯನ್ನು ಅವರ ಮುಂದಿಟ್ಟರೆ ಸೂಕ್ತ ಉತ್ತರ ನೀಡುತ್ತಾರೆ. ಯಾರೇ ಅಧ್ಯಕ್ಷರಾದರೂ ಅವರು ನಮ್ಮ ಕುಟುಂಬದವರೇ,” ಎಂದು ಹೇಳಿದರು.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

11 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

14 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

17 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

19 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

20 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

2 days ago