ಕೋಲಾರ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಹುಟ್ಟುಹಬ್ಬವನ್ನು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಕುಡಾ ಅಧ್ಯಕ್ಷ ಓಂ ಶಕ್ತಿ ಚಲಪತಿ ನೇತೃತ್ವದಲ್ಲಿ ಮಂಗಳವಾರ ನಗರದ ಶಕ್ತಿ ದೇವತೆ ಶ್ರೀ ಕೋಲಾರಮ್ಮ ದೇವಾಲಯ ಆವರಣದಲ್ಲಿ 101 ಇಡುಗಾಯಿ ಒಡೆಯುವ ಮೂಲಕ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಆಚರಿಸಿದರು.
ಈ ವೇಳೆ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಕುಡಾ ಅಧ್ಯಕ್ಷ ಓಂ ಶಕ್ತಿ ಚಲಪತಿ ಮಾತನಾಡಿ, ಕರ್ನಾಟಕ ಬಿಜೆಪಿಯು ದಕ್ಷಿಣ ಭಾರತದ ಹೆಬ್ಬಾಗಿಲು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಸಂಘಟನೆ ಉತ್ತಮವಾಗಿ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ತರುತ್ತಾರೆ. ಈ ನಿಟ್ಟಿನಲ್ಲಿ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುವುದು ಖಚಿತ ಎಂದರು.
ತಮ್ಮ ಮಾತಿನಿಂದ ಜನರನ್ನು ಹಾಗೂ ಕಾರ್ಯಕರ್ತರನ್ನು ಸೆಳೆಯುವ ಛಾಪು ರೂಪಿಸಿಕೊಂಡಿದ್ದಾರೆ. ಇವರ ಅನುಭವ, ಸಂಘಟನೆ, ರಾಜಕಾರಣ ಮಾಡುವ ಕಾರ್ಯತಂತ್ರದಿಂದ ಉತ್ತಮ ಪದವಿಯ ಚುಕ್ಕಾಣಿ ಹಿಡಿಯುವುದರಲ್ಲಿ ಸಂಶಯವಿಲ್ಲ. ವಿಜಯೇಂದ್ರ ಅವರ ಸಂಘಟನೆಯಿಂದಾಗಿ ಮೂರೂ ಕ್ಷೇತ್ರ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸುತ್ತದೆ. ನಿಸ್ವಾರ್ಥದಿಂದ ಜನರ ಸೇವೆ ಮಾಡುತ್ತಿರುವ ವಿಜಯೇಂದ್ರ ಅವರಿಗೆ ಕೋಲಾರಮ್ಮ ತಾಯಿ ಆರೋಗ್ಯ ಹಾಗೂ ಜನರ ಸೇವೆ ಕೈಗೊಳ್ಳಲು ಇನ್ನೂ ಹೆಚ್ಚಿನ ಶಕ್ತಿ ನೀಡಲಿ ಎಂದು ಶುಭ ಕೋರಿದರು.
ಕುಡಾ ನಿಕಟ ಪೂರ್ವ ಅಧ್ಯಕ್ಷ ವಿಜಯಕುಮಾರ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಗುಡುಗಿದರೆ ವಿಧಾನಸೌಧ ನಡುಗುತ್ತಿತ್ತು. ಈಗ ಪುನರಾವರ್ತಿಯಂತೆ ವಿಜಯೇಂದ್ರ ಗುಡುಗಿದರೆ ವಿಧಾನಸೌಧ ನಡುಗುತ್ತದೆ. ಆಡಳಿತ ಪಕ್ಷ ಕಾಂಗ್ರೆಸ್ ಮಾಡುವ ಪ್ರತಿಯೊಂದು ತಪ್ಪನ್ನು ನಮ್ಮ ರಾಜ್ಯಾಧ್ಯಕ್ಷರು ಎತ್ತಿ ಹಿಡಿದು ನಾಡಿನ ಜನತೆಗೆ ತೋರಿಸುವ ಮೂಲಕ ಪ್ರಶ್ನಿಸುತ್ತಿದ್ದಾರೆ. ಜನತೆಗೆ ಯಾವುದೇ ರೀತಿ ಮೋಸ ಆಗದಂತೆ ಕಾಂಗ್ರೆಸ್ ಸರ್ಕಾರದ ಕಿವಿ ಹಿಂಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲೇ ಒಗ್ಗಟ್ಟಿಲ್ಲದೆ ಅಧಿಕಾರಕ್ಕೆ ಕಿತ್ತಾಡುತ್ತಿದ್ದು, ಸರ್ಕಾರ ಯಾವ ಸಮಯದಲ್ಲಾದರೂ ಬೀಳಬಹುದು. ಆಗ ಬಿ.ವೈ.ವಿಜಯೇಂದ್ರ ಮುಖ್ಯಮಂತ್ರಿ ಆಗುವುದು ಶತಸಿದ್ಧ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರಾದ ಸಾಮ ಬಾಬು, ನಾಮಲ್ ಮಂಜುನಾಥ್, ಎವಿವಿಪಿ ಹರೀಶ್, ಹೊಗರಿ ರವಿ, ಸಿದ್ದಾರ್ಥ್, ವಿನಯ್, ಮಹೇಶ್, ರೂಪೇಶ್, ಆನಂದ್, ಮುರಳಿ, ಶ್ರೀನಿವಾಸ್, ಅನಿಲ್ ಮತ್ತಿತರರು ಹಾಜರಿದ್ದರು.
ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ…
ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…
ಯಾವುದು ನ್ಯಾಯ...... ಅಕ್ರಮ ವಲಸಿಗರು, ಬುಲ್ಡೋಜರ್ ಸಂಸ್ಕೃತಿ, ಭ್ರಷ್ಟ ಆಡಳಿತ ವ್ಯವಸ್ಥೆ, ಕೆಟ್ಟ ರಾಜಕೀಯ, ತಲೆಬುಡವಿಲ್ಲದ ಗಾಳಿ ಸುದ್ದಿಗಳು, ವಿವೇಚನೆಯಿಲ್ಲದ…
ಒರಿಸ್ಸಾದಿಂದ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯಲ್ಲಿ ಕೆಲಸಕ್ಕೆಂದು ಬಂದು ಹೊಸ ವರ್ಷ ದಿನದಂದೇ ತನ್ನ ಸ್ನೇಹಿತನಿಂದಲೇ ಕೊಲೆಯಾದ್ನಾ ಯುವಕ....? 2025ರ ಡಿಸೆಂಬರ್ 31…
ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ 2025ನೇ ಸಾಲಿನಲ್ಲಿ 300ಕ್ಕೂ ಹೆಚ್ಚು ಉಚಿತವಾಗಿ ಕಣ್ಣಿನ ಶಸ್ತ್ರಚಿಕಿತ್ಸೆಗಳನ್ನು ಪೂರ್ಣಗೊಳಿಸುವ ಮೂಲಕ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಳಲ್ಲಿ…
ಇಂದು ಹೊಸ ವರ್ಷ ಹಿನ್ನೆಲೆ 800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ…