ಕೋಲಾರ: ಬಿಜೆಪಿ ಪಕ್ಷದ ನೂತನ ಜಿಲ್ಲಾ ಅಧ್ಯಕ್ಷರನ್ನು ಪಕ್ಷದ ರಾಜ್ಯ ಮತ್ತು ಕೇಂದ್ರದ ವರಿಷ್ಠರು ನೇಮಕ ಮಾಡಿದ್ದು ವರಿಷ್ಠರ ತೀರ್ಮಾನಕ್ಕೆ ಬದ್ದರಾಗಿರಬೇಕು ಎಲ್ಲೂ ಸಹ ಏಕಪಕ್ಷೀಯ ತೀರ್ಮಾನ ನಡೆದಿಲ್ಲ ಚುನಾವಣಾ ಪ್ರಕ್ರಿಯೆಗಳ ಮೂಲಕವೇ ಆಯ್ಕೆ ಮಾಡಲಾಗಿದೆ ಎಂದು ಮಾಜಿ ಸಂಸದ ಎಸ್ ಮುನಿಸ್ವಾಮಿ ತಿಳಿಸಿದರು.
ನಗರದ ಜಿಲ್ಲಾ ಬಿಜೆಪಿ ಪಕ್ಷದ ಕಛೇರಿಯಲ್ಲಿ ನೂತನ ಜಿಲ್ಲಾ ಅಧ್ಯಕ್ಷ ಓಂಶಕ್ತಿ ಚಲಪತಿ ಅವರಿಂದ ಅಭಿನಂದನೆ ಸ್ವೀಕರಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಪಕ್ಷದ ಬೆಳವಣಿಗೆ ಪಕ್ಷಕ್ಕಾಗಿ ದುಡಿದಿರುವ ಮುಖಂಡರು ಹಾಗೂ ಕಾರ್ಯಕರ್ತರ ಮಾರ್ಗದರ್ಶನದಲ್ಲಿ ಅವರ ಸಲಹೆ ಸೂಚನೆಗಳನ್ನು ಪಡೆದು ಪಕ್ಷವನ್ನು ಬಲಪಡಿಸಬೇಕಾಗಿದೆ ವರಿಷ್ಠರು ಸಹ ಪಕ್ಷದಲ್ಲಿ ಹೇಗೆ ಕಾರ್ಯನಿರ್ವಹಿಸುತ್ತಾರೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಆಯ್ಕೆ ಮಾಡಿದ್ದು ಅವರಿಗೆ ಇದು ಅಧಿಕಾರ ಅನ್ನುವುದು ಬಿಟ್ಟು ಜವಾಬ್ದಾರಿ ರೀತಿಯಲ್ಲಿ ಕೆಲಸ ಮಾಡಬೇಕಾಗಿದೆ ಎಂದರು
ಬಿಜೆಪಿ ಪಕ್ಷದಲ್ಲಿ ಚುನಾವಣಾ ಪ್ರಕ್ರಿಯೆ ಪ್ರಕಾರವೇ ಬೂತ್ ಮಟ್ಟದಿಂದ ರಾಷ್ಟ್ರೀಯ ಮಟ್ಟದವರೆಗೂ ಅಧ್ಯಕ್ಷರ ಆಯ್ಕೆ ನಡೆಯಲಿದೆ ಕೋಲಾರ ಜಿಲ್ಲೆಯಲ್ಲಿ ಮೂವರು ಹೆಸರನ್ನು ವರಿಷ್ಠರಿಗೆ ಕಳುಹಿಸಲಾಯಿತು ಅದರಲ್ಲಿ ಒಬ್ಬರನ್ನು ಆಯ್ಕೆ ಮಾಡಲಾಗಿದೆ ವರಿಷ್ಠರ ತೀರ್ಮಾನಕ್ಕೆ ಬದ್ದರಾಗಿ ಪಕ್ಷದಲ್ಲಿ ಕೆಲಸ ಮಾಡಬೇಕು ಸಣ್ಣಪುಟ್ಟ ವ್ಯತ್ಯಾಸಗಳು ಇದ್ದರೆ ಸರಿಪಡಿಸಿಕೊಂಡು ಹೋಗತ್ತೇವೆ ದೇವರು ಸಹ ಎಲ್ಲರಿಗೂ ಒಳ್ಳೆಯವರಾಗಿ ಇರಲು ಸಾಧ್ಯವಿಲ್ಲ ಅಸಮಾಧಾನ ವ್ಯಕ್ತಪಡಿಸಿದವರಿಗೂ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದರು.
ಚಿಕ್ಕಬಳ್ಳಾಪುರ ಸಂಸದ ಡಾ ಕೆ ಸುಧಾಕರ್ ಬಗ್ಗೆ ಮಾತನಾಡಿ ಅವರು ದೊಡ್ಡವರು ಸಚಿವರಾಗಿ ಸಂಸದರು ಆಗಿದ್ದಾರೆ ಯಾರು ಪೋನ್ ರಿಸಿವ್ ಮಾಡಲ್ಲ ಅಂತ ಜನತೆಗೆ ಗೊತ್ತಿದೆ ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ ಅವರ ತೀರ್ಮಾನದಂತೆ ಜಿಲ್ಲಾ ಅಧ್ಯಕ್ಷರ ಆಯ್ಕೆ ನಡೆದಿಲ್ಲ ವರಿಷ್ಠರು ಆಯ್ಕೆ ಮಾಡಿರೋದು ಅವರಿಗೆ ಬಿಜೆಪಿ ಪಕ್ಷದ ತತ್ವ ಸಿದ್ದಾಂತದ ಅನುಭವ ಕಡಿಮೆ ಇದೆ ರಾಜ್ಯ ಅಧ್ಯಕ್ಷರ ಹುದ್ದೆಗೆ ಗೌರವ ಕೊಡುವುದನ್ನು ಕಲಿಯಲಿ ಎಂದರು.
ಕುಂಭಮೇಳದ ಕಾಲ್ತುಳಿದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಮಾತಿಗೆ ಪ್ರತಿಕ್ರಿಯಿಸಿ ಅವರ ಕಾಂಗ್ರೆಸ್ ನವರಿಗೆ ಹಿಂದುತ್ವ ಮರೆತಿದ್ದಾರೆ ಹಿಂದೆ ಮಾಡಿದ ಹೋಮಗಳು ಪೂಜೆಗಳು ನೆನಪು ಇಲ್ಲವಾಗಿದೆ ಅವರಿಗೆ ಬರಿ ಮಸೀದಿಗಳ ಪೂಜೆಗೆ ಮಾತ್ರ ಸೀಮಿತವಾಗಿದ್ದು ಸುಮಾರು 140 ವರ್ಷಗಳಿಗೆ ಒಮ್ಮೆ ಬರುವ ಈ ಮೇಳದಲ್ಲಿ ಭವ್ಯ ವ್ಯವಸ್ಥೆ ಮಾಡಿದ್ದಾರೆ ಮೊಸರಲ್ಲಿ ಕಲ್ಲು ಹುಡುಕುವುದು ಕಾಂಗ್ರೆಸ್ ಕೆಲಸವಾಗಿದೆ ಭಕ್ತಾದಿಗಳು ಸಹ ಸಮಾಧಾನದಿಂದ ಹೋಗಲಿ ಎಲ್ಲರಿಗೂ ವ್ಯವಸ್ಥೆ ಮಾಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ನೂತನ ಜಿಲ್ಲಾ ಅಧ್ಯಕ್ಷ ಓಂಶಕ್ತಿ ಚಲಪತಿ, ಮುಖಂಡರಾದ ಸಾ.ಮಾ ಬಾಬು ಬಾಲಾಜಿ, ಅಪ್ಪಿ ನಾರಾಯಣಸ್ವಾಮಿ, ಮಹೇಶ್ ಮುಂತಾದವರು ಇದ್ದರು
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…