ಲೋಕಸಭೆ ಚುನಾವಣೆ ಹಿನ್ನೆಲೆ ಕರ್ನಾಟಕ ರಾಜ್ಯದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಹೊಸದಿಲ್ಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ ಅವರರನ್ನು ಭೇಟಿಯಾಗಿ ಮಹತ್ವದ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತ ಸುದೀರ್ಘ ಮಾತುಕತೆ ನಡೆಸಿದರು.
ಈ ವೇಳೆ ನಿಖಿಲ್ ಕುಮಾರ ಸ್ವಾಮಿ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹಾಜರಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವ ಹಾಗೂ ಅಭಿವೃದ್ಧಿ ಆಧಾರಿತ ರಾಜಕಾರಣವನ್ನು ಮೆಚ್ಚಿ ಎನ್‌ಡಿಎ ಮೈತ್ರಿಕೂಟದ ಭಾಗವಾಗಲಿರುವ ಜೆಡಿಎಸ್ ಪಕ್ಷಕ್ಕೆ ತುಂಬು ಹೃದಯದ ಸ್ವಾಗತ ಮತ್ತು ಅಭಿನಂದನೆಗಳು.
ಇದರಿಂದ ಎನ್‌ಡಿಎ ಮೈತ್ರಿಕೂಟದ ಶಕ್ತಿ ಮತ್ತಷ್ಟು ವೃದ್ಧಿಸಿದೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನವ ಭಾರತದ ಕನಸನ್ನು ಸಾಕಾರಗೊಳಿಸುವಲ್ಲಿ ಮತ್ತಷ್ಟು ಶಕ್ತಿ ತುಂಬಲಿದೆ ಎಂದು ಬಿಜೆಪಿ ಹಾಗೂ ಜೆ.ಪಿ ನಡ್ಡಾ ಅವರು ಸಾಮಾಜಿಕ ಜಾಲಾತಾಣದಲ್ಲಿ ಬರೆದುಕೊಂಡಿದ್ದಾರೆ.