ಚನ್ನಪಟ್ಟಣದ ಹಿರಿಯ ನಾಯಕ ಸಿ.ಪಿ.ಯೋಗೇಶ್ವರ್ ಅವರು ಇಂದು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ ಮೂಲಕವೇ ತಮ್ಮ ರಾಜಕೀಯ ಜೀವನ ಆರಂಭಿಸಿದ್ದ ಅವರು ಪಕ್ಷದ ತತ್ವ ಸಿದ್ಧಾಂತದ ಮೇಲೆ ನಂಬಿಕೆ ಇಟ್ಟು ಮರಳಿ ಕಾಂಗ್ರೆಸ್ ಸೇರಿದ್ದಾರೆ.
ವಾಟ್ಸಪ್ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ವಿಜಯೇಂದ್ರ ಅವರಿಗೆ ರಾಜೀನಾಮೆ ನೀಡಿರುವ ಸಿ.ಪಿ. ಯೋಗೇಶ್ವರ ಕಾಂಗ್ರೆಸ್ ಸೇರಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಪಿ ಯೋಗೇಶ್ವರ್ ಅವರಿಗೆ ಡಿ.ಕೆ ಶಿವಕುಮಾರ್ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಗುರುವಾರ ನಾಮಪತ್ರ ಸಲ್ಲಿಕೆ ಮಾಡಲು ತಯಾರಿಯನ್ನು ಸಹ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.