Categories: ಕೋಲಾರ

ಬಿಜೆಪಿ ತೊಲಗಿಸಿ ದೇಶ ಉಳಿಸಲು ಸಿಪಿಐಎಂ ಪ್ರಚಾರಾಂದೋಲನ ಹಾಗೂ ಪ್ರತಿಭಟನಾ ಸಭೆ

ಕೋಲಾರ: ಕೇಂದ್ರದ ಬಿಜೆಪಿ ಸರಕಾರದ ಜನ ವಿರೋಧಿ ಹಾಗೂ ಕಾರ್ಪೊರೇಟ್ ಸಂಸ್ಥೆಗಳ ಪರವಾದ ನೀತಿಗಳ ವಿರುದ್ಧ ದೇಶದಲ್ಲಿ ಬಿಜೆಪಿಯನ್ನು ತೊಲಗಿಸಿ ದೇಶವನ್ನು ಉಳಿಸಲು ನಗರದ ಹಳೆ ಬಸ್ ನಿಲ್ದಾಣದಲ್ಲಿ ಶುಕ್ರವಾರ ಸಿಪಿಐಎಂ ಪಕ್ಷದ ಜಿಲ್ಲಾ ಸಮಿತಿಯಿಂದ ಪ್ರಚಾರಾಂದೋಲನ ಹಾಗೂ ಪ್ರತಿಭಟನಾ ಸಭೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ಭಾರತದ ಸಂವಿಧಾನದಂತೆ ದೇಶಾದ್ಯಂತ ಒಕ್ಕೂಟವಾದಿ ಸ್ವರೂಪವನ್ನು ಬಲಗೊಳಿಸಬೇಕಿತ್ತು . ಆದರೆ ಒಕ್ಕೂಟ ಸರಕಾರ ರಾಜ್ಯ ಸರಕಾರಗಳ ಮೇಲೆ ತನ್ನ ಅಧಿಕಾರ ದುರುಪಯೋಗ ಹಾಗೂ ಹಸ್ತಕ್ಷೇಪದ ಮೂಲಕ ಒಕ್ಕೂಟವಾದಿ ಸ್ವರೂಪಕ್ಕೆ ಭಂಗ ಉಂಟು ಮಾಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ತಕ್ಕ ಪಾಠವನ್ನು ಕಲಿಸಬೇಕಾಗಿದೆ ಎಂದು ತಿಳಿಸಿದರು.

ಅಸಂಘಟಿತ ಕಾರ್ಮಿಕರ ರಕ್ಷಣೆ ಕಾರ್ಮಿಕರ ಭವಿಷ್ಯ ನಿಧಿ ಯೋಜನೆ ಬಲಗೊಳಿಸಿ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗಬೇಕು. ಬಡ-ಮಧ್ಯಮ ರೈತರ ಸಾಲವನ್ನು ಮನ್ನಾ ಮಾಡಿ ರೈತರ ಬೆಳೆಗೆ ಬೆಂಬಲ ಬೆಲೆ ನಿಗದಿ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಬೇಕು ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರವು ಕಾರ್ಪೋರೇಟ್ ಕಂಪನಿಗಳ ಲೂಟಿಗೆ ನೆರವಾಗುವ ಎಪಿಎಂಸಿ ಕಾಯಿದೆಗೆ ಸುಗ್ರೀವಾಜ್ಞೆ ಮೂಲಕ ಮಾಡಲಾದ ತಿದ್ದುಪಡಿ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು

ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಪಿ.ಆರ್ ಶ್ರೀನಿವಾಸ್ ಮಾತನಾಡಿ, ಕೇಂದ್ರ ಸರಕಾರದ ಆಡಳಿತದಲ್ಲಿ ಪೆಟ್ರೋಲ್‌, ಡಿಸೇಲ್‌, ಅಡುಗೆ ಅನಿಲ, ದಿನನಿತ್ಯದ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಇದರಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ, ಕೇಂದ್ರ ಸರಕಾರ ನಿರ್ಲಕ್ಷಿಸಿ ಕೇವಲ ಜನರನ್ನು ಮೋಡಿ ಮಾಡುವ ಮಾತಿಗೆ ಮಾತ್ರ ಸೀಮಿತವಾಗಿದೆ. ಮೋದಿ ಸರಕಾರ ಕೇವಲ ಘೋಷಣೆ, ಪ್ರಚಾರ, ಕಾರ್ಪೋರೇಟ್ ನೀತಿಗಳನ್ನು ಮುಂದುವರಿಸುವ ನಿಟ್ಟಿನಲ್ಲಿ ವೇಗವಾಗಿ ಸಾಗುತ್ತಿದೆ. ರೈತರು, ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಹಿಂದೆ ಬಿದ್ದಿದೆ. ಒಡೆದು ಆಳುವ ನೀತಿ ಅನುಸರಿಸಲಾಗುತ್ತಿದೆ. ಇದರಿಂದ ಜನರ ಗಮನ ಸೆಳೆಯಲು ಕೋಮು ದ್ವೇಷ ಹುಟ್ಟು ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು

ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಪಿ.ಆರ್ ಸೂರ್ಯನಾರಾಯಣ, ಟಿ.ಎಂ ವೆಂಕಟೇಶ್, ಎ.ಆರ್ ಬಾಬು, ಸದಸ್ಯರಾದ ಪಾತಕೋಟ ನವೀನ್ ಕುಮಾರ್, ಪಿ.ತಂಗರಾಜ್, ಅಶೋಕ್, ವಿಜಯಕೃಷ್ಣ, ಮುಂತಾದವರು ಇದ್ದರು

Ramesh Babu

Journalist

Recent Posts

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

1 hour ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

11 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

11 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

14 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

16 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

17 hours ago