ಬಿಜೆಪಿ ‌ನಾಯಕರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ: ಕಿಡಿಗೇಡಿಗಳ ವಿರುದ್ಧ ಕಿಡಿಕಾರಿದ ಬಿಜೆಪಿ

2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲು ಹಿನ್ನೆಲೆ ಇದನ್ನು ಗುರಿಯಾಗಿಸಿಕೊಂಡು ಕೆಲ ಬಿಜೆಪಿ ನಾಯಕರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಪೋಸ್ಟ್ ಮಾಡಿ ಕುಹಕ ಮಾಡುತ್ತಿರುವವರ ವಿರುದ್ಧ ಕಿಡಿಕಾರಿದ ಬಿಜೆಪಿ ಮುಖಂಡರು.

ನಗರದ ಬಿಜೆಪಿ ಕಾರ್ಯಾಲಯದಲ್ಲಿ ಈ ಕುರಿತು ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ವಕ್ತಾರೆ ಪುಷ್ಪಾ ಶಿವಶಂಕರ್, ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಿ.ಟಿ.ರವಿ ಸೇರಿದಂತೆ ಇತರೆ ಪ್ರಮುಖ ನಾಯಕರ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸಿ, ಅವಹೇಳನ ಪೋಸ್ಟ್ ಮಾಡುವವರ ವಿರುದ್ಧ ಸೈಬರ್ ಕ್ರೈಂ ಠಾಣೆಗೆ ದೂರು ನೀಡುತ್ತೇವೆ ಎಂದು ತಿಳಿಸಿದರು.

ಬಿಜೆಪಿ ಸೋಲಿಗೆ ಯಾವ ನಾಯಕರು ಕಾರಣರಲ್ಲ, ಅದರಲ್ಲೂ ಬಿ.ಎಲ್.ಸಂತೋಷ್ ಪಾತ್ರ ಏನೂ ಇಲ್ಲ, ಅವರು ರಾಜಕೀಯದಿಂದ ಬಹಳ ದೂರ ಇದ್ದಾರೆ ಅವರು ಕೇವಲ ಸಂಘಟನೆಯಲ್ಲಿ‌ ತಮ್ಮನ್ನು ತಾವು ತೊಡಗಿಸಿಕೊಂಡು ಆ ನಿಟ್ಟಿನಲ್ಲಿ ಕೆಲಸ‌‌ ಮಾಡುತ್ತಿದ್ದಾರೆ ಅಂತಹವರ ವಿರುದ್ಧ ಕುಹಕ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಪಕ್ಷ ಕಡೆಗಣಿಸಿರುವುದರಿಂದ ಬಿಜೆಪಿ ಸೋಲಿಗೆ ಕಾರಣ ಎಂಬ ವದಂತಿಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಿ, ಯಡಿಯೂರಪ್ಪ ಅವರನ್ನು ಪಕ್ಷ ಎಂದೂ ಕಡೆಗಣಿಸಿಲ್ಲ, ಕಡೆಗಣಿಸುವುದಿಲ್ಲ ಕೇವಲ ಯಾರೋ ವದಂತಿಗಳನ್ನು ಹರಡುತ್ತಿದ್ದಾರೆ. ಯಡಿಯೂರಪ್ಪ ಅವರು ಸಹ ಎಂದೂ, ಎಲ್ಲೂ ನನ್ನನ್ನು ಕಡೆಗಣಿಸಿದ್ದಾರೆಂದು ಹೇಳಿಕೊಂಡಿಲ್ಲ, ಇನ್ನೂ ನನಗೆ ಪಕ್ಷ ಎಲ್ಲವನ್ನೂ ನೀಡಿದೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ ಎಂದು ತಿಳಿಸಿದರು.

ಹೊಸಕೋಟೆ ಮಿನಿ ಬಿಹಾರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅಲ್ಲಿನ ವಾತಾವರಣ, ನಡೆದಂತಹ ಘಟನೆ ನೋಡಿ ಈ ರೀತಿ ನಮ್ಮ ನಾಯಕರು ಹೇಳಿಕೆ‌ ನೀಡಿದ್ದಾರೆ. ಒಬ್ಬ ಬಿಜೆಪಿ ಕಾರ್ಯಕರ್ತನ ಕೊಲೆ ಆಗಿದೆ, ಇನ್ನೂ ಸಾಮಾನ್ಯ ಜನರ ಗತಿ ಏನು? ಎಂದು ಪಶ್ನೆ ಮಾಡಿದರು. ಎಂಟಿಬಿ ಅಧಿಕಾರದಲ್ಲಿದ್ದಾಗ ಅಲ್ಲಿ ಶಾಂತಿಯಿಂದ ಜನ ಜೀವನ ಮಾಡುತ್ತಿದ್ದರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ನಮ್ಮ ಕಾರ್ಯಕರ್ತನ‌ ಕೊಲೆ ಆಗಿದೆ ಇದನ್ನು ತೀವ್ರವಾಗಿ ಖಂಡಿಸಿ ಕೊಲೆಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವುದು ಎಂದರು.

ಈ ವೇಳೆ ಬಿಜೆಪಿ ಗ್ರಾಮಾಂತರ ಅಧ್ಯಕ್ಷ ನಾಗೇಶ್, ನಗರ ಅಧ್ಯಕ್ಷ ಮುದ್ದಪ್ಪ, ರೇಷ್ಮೆ ಮಾರಾಟ ಮಂಡಳಿ ಮಾಜಿ ಅಧ್ಯಕ್ಷ ಬಿ.ಸಿ.ನಾರಾಯಣ ಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಕೀಲ ಪ್ರತಾಪ್ ಜಮೀನು ವ್ಯಾಜ್ಯಕ್ಕೆ ಬಿಗ್ ಟ್ವಿಸ್ಟ್: ‘ಕಾಂಪೌಂಡ್ ನಿರ್ಮಾಣಕ್ಕೆ ಅಡ್ಡಿಪಡಿಸಲು ಹೇಳಿದ್ದೇ ಶಾಸಕ ಧೀರಜ್ ಮುನಿರಾಜ್’- ವಕೀಲ ಪ್ರತಾಪ್ ಗಂಭೀರ ಆರೋಪ

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

7 minutes ago

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

13 hours ago

Understanding Cheap Emotional Support Animal Letters(6)

Cheap Emotional Support Animal Letter: Your Guide Understanding Cheap Emotional Support Animal Letters In recent…

15 hours ago

The Role of ESA Letters in Mental Health Therapy

Understanding ESA Letters for Mental Health Support The Role of ESA Letters in Mental Health…

15 hours ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

23 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

1 day ago