ಬಿಜೆಪಿ ಪಕ್ಷದ ಅಭ್ಯರ್ಥಿ ಸ್ಥಾನಕ್ಕೆ ನಾನು ಸಹ ಪ್ರಬಲ ಆಕಾಂಕ್ಷಿಯಾಗಿದ್ದೇನೆ-ಟಿ.ವಿ.ಲಕ್ಷ್ಮೀನಾರಾಯಣ್

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ರಂಗೇರಿದ ಚುನಾವಣಾ ಚದುರಂಗದ ಆಟ. ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ದಿನೇದಿನೆ ಹೆಚ್ಚುತ್ತಿದೆ.

ಇಂದು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್ ಅವರು, ನನಗೂ ಬಿಜೆಪಿಯಿಂದ ಟಿಕೆಟ್ ನೀಡಿ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಹೊಸ ಬಾಣ ಬಿಟ್ಟಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷದ ಅಭ್ಯರ್ಥಿ ಸ್ಥಾನಕ್ಕೆ ನಾನು ಸಹ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಕಳೆದ 40 ವರ್ಷಗಳಿಂದ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ್ದೇನೆ. ಹಿರಿಯರಾದ ಜಾಲಪ್ಪ. ರಾಮೇಗೌಡ, ಆರ್.ಜಿ.ವೆಂಕಟಾಚಲಯ್ಯ, ನರಸಿಂಹಸ್ವಾಮಿ ಅವರೊಂದಿಗೆ ವಿದ್ಯಾರ್ಥಿ ಜೀವನದಿದಂದಲೂ ರಾಜಕೀಯ ಸೇವೆ ಸಲ್ಲಿಸಿ, ತಾಲೂಕಿನ ಪ್ರತಿ ಗ್ರಾಮದ ಜನರ ಅಭಿಮಾನ ಪಡೆದಿದ್ದೇನೆ ಎಂದರು.

ತಾಲೂಕು ಸೊಸೈಟಿ, ಪಿಎಲ್ ಡಿ ಬ್ಯಾಂಕ್, ಎಪಿಎಂಸಿ, ಜಿಲ್ಲಾಪಂಚಾಯಿತಿ ಅಧ್ಯಕ್ಷನಾಗಿ, ಕೇಂದ್ರ ರೇಷ್ಮೆ ಮಂಡಲಿ ಸದಸ್ಯನಾಗಿ, ರಾಜ್ಯ ಕೃಷಿ ಮಾರುಕಟ್ಟೆ ನಿರ್ದೇಶಕನಾಗಿ, ಸಹಕಾರಿ ಯೂನಿಯನ್ ನಿರ್ದೇಶಕನಾಗಿ ಸೇವೆ ಸಲ್ಲಿಸಿದ್ದೇನೆ. ಈ ನಿಟ್ಟಿನಲ್ಲಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ನನಗೂ ಅವಕಾಶ ನೀಡಿ ಎಂದು ವರಿಷ್ಠರು, ಮುಖಂಡರು, ಕಾರ್ಯಕರ್ತರಲ್ಲಿ ಮನವಿ ಮಾಡುತ್ತಿದ್ದೇನೆ.

ವರಿಷ್ಠರು ಟಿಕೆಟ್ ನೀಡಿದರೆ ಪ್ರತಿ ಹಳ್ಳಿಯಲ್ಲಿ ಪಕ್ಷದ ಸಂಘಟನೆ, ಶಿಸ್ತಿನ ಅನ್ವಯ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ. ಇಲ್ಲವಾದರೆ ಯಾರಿಗೆ ಟಿಕೆಟ್ ನೀಡಿದರು ಬೆಂಬಲ ನೀಡುತ್ತೇನೆ ಎಂದಿದ್ದಾರೆ.

ತಾಲೂಕಿನಲ್ಲಿ ಹೊರಗಿನವರು ಬಂದು ಟಿಕೆಟ್ ಕೇಳುತ್ತಿದ್ದಾರೆ. ಅವರಿಗೆ ಎಂಪಿ, ಎಂಎಲ್ಸಿ ಸೇರಿದಂತೆ ಬೇರೆ ಬೇರೆ ಅವಕಾಶಗಳಿವೆ. ಹೊರಗಿನವರಿಗೆ ಅವಕಾಶ ನೀಡುವ ಬದಲು ನನಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ.

ಜಿಲ್ಲಾ ಬಿಜೆಪಿ ಪ್ರಕೋಷ್ಠದ ಸಂಚಾಲಕ ಧೀರಜ್ ಮುನಿರಾಜು ಅವರಿಗೆ ಲೋಕಸಭೆ ಟಿಕೆಟ್ ನೀಡಲಿ ಅಥವಾ ಈ ವಿಧಾನಸಭಾ ಚುನಾವಣೆಯಲ್ಲಿ ನನನ್ನು ಗೆಲ್ಲಿಸಿ, ಮುಂದಿನ ವಿಧಾನಸಭಾ ಚುನಾವಣೆಗೆ ಬೇಕಾದರೆ ಅವರಿಗೆ ಟಿಕೆಟ್ ನೀಡಲಿ. ಅವರು ತಾಲೂಕಿಗೆ ಬಂದು ಎರಡು ಮೂರು ವರ್ಷವಾಗಿದೆ ಅಷ್ಟೇ. ನಾನು ರಾಜಕೀಯಕ್ಕೆ ಬಂದು ಸುಮಾರು ನಲವತ್ತು ವರ್ಷವಾಗಿದೆ. ನನಗೆ ವಯಸ್ಸಾಗಿದೆ  ಆದ್ದರಿಂದ ನನಗೆ ಮೊದಲು ಅವಕಾಶ ನೀಡಬೇಕು, ಅವರಿನ್ನು ವಯಸ್ಸಿನಲ್ಲಿ ಚಿಕ್ಕವರು ಅವಕಾಶ ಇದೆ ಎಂದರು.

ಇತ್ತೀಚೆಗೆ ವಸಂತ್ ಕುಮಾರ್ ಗೌಡ ಅವರ ಕಚೇರಿ ಪೂಜೆಗೆ ತಾಲೂಕು ಅಧ್ಯಕ್ಷರ ಕರೆಯ ಮೇಲೆ ತೆರಳಿದ್ದೆ ಅಷ್ಟೆ. ಆ ವೇಳೆ ವಸಂತ್ ಕುಮಾರ್ ಗೌಡ ತಾಲೂಕಿನಲ್ಲಿ ಪಕ್ಷ ಸಂಘಟನೆಗೆ ಬಂದಿರುವೆ ಎಂದರು. ತಾಲೂಕಿನಲ್ಲಿ ಬಿಜೆಪಿ ಸಂಘಟನೆ ಚೆನ್ನಾಗಿದೆ ಎಂದು ಅಲ್ಲಿಯೇ ಹೇಳಿದ್ದೆ ಎಂದರು.

ಈ ವೇಳೆ ಮುಖಂಡರಾದ ಅಶ್ವಥ್ ನಾರಯಣಗೌಡ, ವೆಂಕಟಾಚಲಯ್ಯ, ರುದ್ರಪ್ಪ, ವೇಣುಕುಮಾರ್, ಪ್ರಕಾಶ್ ಕುಮಾರ್, ಗೋಪಾಲ್ ನಾಯಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

1 hour ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

1 hour ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

2 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

9 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

10 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

13 hours ago