ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹಾಗೂ MLC ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ ಲಕ್ಷ್ಮಣ ಸವದಿ

ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್‌ ಕೈ ತಪ್ಪಿದ್ದರಿಂದ ಬೇಸರಗೊಂಡ ವಿಧಾನ ಪರಿಷತ್‌ ಸದಸ್ಯ ಲಕ್ಷ್ಮಣ ಸವದಿ, ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹಾಗೂ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್‌ ಕೈ ತಪ್ಪಿದ್ದರಿಂದ ಬೇಸರಗೊಂಡ ವಿಧಾನ ಪರಿಷತ್‌ ಸದಸ್ಯ ಲಕ್ಷ್ಮಣ ಸವದಿ, ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹಾಗೂ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

ಪಟ್ಟಣದಲ್ಲಿ ಬುಧವಾರ ಮಧ್ಯಮದವರೊಂದಿಗೆ ಮಾತನಾಡಿದ ಅವರು, ಗುರುವಾರ ಸಂಜೆಗೆ ಮುರುಘೇಂದ್ರ ಶಿವಯೋಗಿಗಳ ಮಠದಲ್ಲಿ ಸಭೆ ಕರೆದಿದ್ದೇನೆ. ನನ್ನ ಜನರಿಂದ ಮಾರ್ಗದರ್ಶನ ಪಡೆದು ಮುಂದಿನ ಹೆಜ್ಜೆ ಇಡುತ್ತೇನೆ. ಈವರೆಗೂ ನನ್ನ ಕ್ಷೇತ್ರದ ಜನರೇ ನನ್ನ ಹೈಕಮಾಂಡ್‌. ಈ ಹೈಕಮಾಂಡ್‌ ಏನು ತೀರ್ಮಾನ ಕೊಡುತ್ತದೆಯೋ ಅದರ ಮೇಲೆ ನನ್ನ ಭವಿಷ್ಯ ನಿಂತಿದೆ. ಅಲ್ಲಿಯವರೆಗೂ ಯಾವುದೇ ತೀರ್ಮಾನ ಮಾಡಿಲ್ಲ ಎಂದರು.

Leave a Reply

Your email address will not be published. Required fields are marked *