ಬಿಜೆಪಿ ಮಾಡಿದ್ದ ಸ್ಮಾರ್ಟ್ ಮೀಟರ್ ಟೆಂಡರ್​​ ಹಗರಣ ಆರೋಪ: ಇಂಧನ ಸಚಿವ ಕೆ.ಜೆ ಜಾರ್ಜ್ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ರದ್ದುಪಡಿಸಿದ ಹೈಕೋರ್ಟ್​​

ಬಿಜೆಪಿ ಮಾಡಿದ್ದ ಸ್ಮಾರ್ಟ್ ಮೀಟರ್ ಟೆಂಡರ್​​ ಹಗರಣ ಆರೋಪ ವಿಚಾರವಾಗಿ ಸಚಿವ ಕೆ.ಜೆ.ಜಾರ್ಜ್​​ಗೆ ರಿಲೀಫ್​​ ಸಿಕ್ಕಿದೆ. ಸಚಿವ ಜಾರ್ಜ್ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್​​ ರದ್ದುಪಡಿಸಿದೆ.

ಬಿಜೆಪಿ ನಾಯಕರು ದಾಖಲಿಸಿದ್ದ ಪ್ರಕರಣ ರದ್ದುಪಡಿಸಿ ನ್ಯಾ.ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ಪೀಠ ಆದೇಶಿಸಿದೆ. ಆ ಮೂಲಕ ಅಧಿಕಾರಿಗಳಾದ ಗೌರವ್ ಗುಪ್ತಾ, ಮಹಾಂತೇಶ ಬೀಳಗಿ, ಹೆಚ್.ಜೆ.ರಮೇಶ್ ವಿರುದ್ಧದ ಕೇಸ್ ಕೂಡ ರದ್ದಾಗಿದೆ.

ಸ್ಮಾರ್ಟ್ ವಿದ್ಯುತ್ ಮೀಟರ್ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಇಂಧನ ಇಲಾಖೆ ವಿರುದ್ಧ ಬಿಜೆಪಿ ಸಮರ ಸಾರಿತ್ತು. ಸ್ಮಾರ್ಟ್ ಮೀಟರ್ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ. ಇತರೆ ಕಂಪೆನಿಗಳನ್ನು ಕೈಬಿಟ್ಟು ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್​ಗೆ ಗುತ್ತಿಗೆ ನೀಡಲಾಗಿದೆ. ಈ ಕಂಪೆನಿಗಾಗಿ ಇತರೆ ಕಂಪೆನಿಗಳು ಟೆಂಡರ್​ನಲ್ಲಿ ಭಾಗವಹಿಸದಂತೆ ನೋಡಿಕೊಳ್ಳಲಾಗಿದೆ ಎಂದು ಬಿಜೆಪಿ ಆರೋಪಿಸಿತ್ತು.

ಬೇರೆ ರಾಜ್ಯಗಳಲ್ಲಿ 900 ರೂಪಾಯಿಗಳಿಗೆ ಸಿಗುವ ಸ್ಮಾರ್ಟ್ ಮೀಟರ್ ಅನ್ನು 5 ಸಾವಿರದಿಂದ 10 ಸಾವಿರ ರೂಪಾಯಿಗಳಿಗೆ ಗ್ರಾಹಕರಿಗೆ ನೀಡಲಾಗುತ್ತಿದೆ. ಹೀಗಾಗಿ ಇದೊಂದು ದೊಡ್ಡ ಹಗರಣ ಎಂದು ಬಿಜೆಪಿ ಆರೋಪಿಸಲಾಗಿತ್ತು.

ಸ್ಮಾರ್ಟ್ ಮೀಟರ್ ಟೆಂಡರ್ ಸುಮಾರ್ 10 ಸಾವಿರ ಕೋಟಿ ರೂಪಾಯಿ ಮೊತ್ತದ್ದಾಗಿರುವ ಕಾರಣ ಜಾಗತಿಕ ಟೆಂಡರ್ ಕರೆಯಬೇಕಿತ್ತು. ಆದರೆ ಕೇವಲ 354 ಕೋಟಿ ರೂ. ವ್ಯವಹಾರ ನಡೆಸುವ ರಾಜಶ್ರೀ ಎಲೆಕ್ಟ್ರಿಕಲ್ಸ್​​ಗೆ ಟೆಂಡರ್ ನೀಡಲಾಗಿದೆ. 10 ವರ್ಷಕ್ಕೆ 5296 ಕೋಟಿ ರೂಪಾಯಿಗೆ ನೀಡಲಾಗಿರುವ ಟೆಂಡರ್ ಅನ್ನು ಬೇಕೆಂದೇ 997 ಕೋಟಿ ರೂ. ಟೆಂಡರ್ ಎಂಬಂತೆ ಬಿಂಬಿಸಲಾಗಿದೆ. ಬೆಸ್ಕಾಂ ವ್ಯಾಪ್ತಿಗೆ ಮಾತ್ರ ಈ ಟೆಂಡರ್ ಅನ್ವಯವಾದರೂ ಇತರೆ ಎಸ್ಕಾಂಗಳಿಗೂ ಇದೇ ಸ್ಮಾರ್ಟ್ ಮೀಟರ್ ಖರೀದಿಸಿರುವಂತೆ ಸೂಚಿಸಲಾಗಿದೆ. ಇದು ಸಂಪೂರ್ಣ ಕಾನೂನು ಬಾಹಿರ. ಕೇಂದ್ರದ ಆರ್‌ಡಿಎಸ್‌ಎಸ್‌ ಯೋಜನೆಯಡಿ 900 ರೂ.ಗೆ ಸಿಗುವ ಮೀಟರ್ ಅನ್ನು 5 ಸಾವಿರದಿಂದ 8,800 ರೂಪಾಯಿಗಳಿಗೆ ಗ್ರಾಹಕರು ಖರೀದಿಸಬೇಕಾಗಿದೆ. ಇದಕ್ಕೆ ಇದಕ್ಕೆಲ್ಲಾ ಬೆಸ್ಕಾಂ ಅಧ್ಯಕ್ಷ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಹಾಗೂ ಇತರೆ ಅಧಿಕಾರಿಗಳೇ ಹೊಣೆ ಎಂದು ಬಿಜೆಪಿ ಆರೋಪ ಮಾಡಿತ್ತು. ಆದರೆ, ಬಿಜೆಪಿ ನಾಯಕರು ದಾಖಲಿಸಿದ್ದ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

17 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

1 day ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

2 days ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

2 days ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago