Categories: ಕೋಲಾರ

ಬಿಜೆಪಿ ಯುವ ಮೋರ್ಚಾದಿಂದ ಸೋಮೇಶ್ವರ ದೇವಾಲಯದಲ್ಲಿ ಅನ್ನಸಂತರ್ಪಣೆ

ಕೋಲಾರ: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತವಾಗಿ ನಗರದಲ್ಲಿರುವ ಸೋಮೇಶ್ವರ ದೇವಾಲಯದಲ್ಲಿ ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಘಟಕದ ವತಿಯಿಂದ ಬುಧವಾರ ಅನ್ನಸಂತರ್ಪಣೆ ಹಾಗೂ ಸಂಜೆ ನಾಗರಕುಂಟೆಯಲ್ಲಿ ದೀಪೋತ್ಸವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಓಂ ಶಕ್ತಿ ಚಲಪತಿ ಮಾತನಾಡಿ, ಹಿಂದುಗಳ ಪವಿತ್ರ ಹಬ್ಬವಾಗಿರುವ ಮಹಾಶಿವರಾತ್ರಿ ಪ್ರಯುಕ್ತ ಬಿಜೆಪಿ ಯುವ ಮೋರ್ಚಾ ವತಿಯಿಂದ ದೇಶಾದ್ಯಂತ ವಿಶೇಷ ಮತ್ತು ವಿಭಿನ್ನವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಅದರ ಭಾಗವಾಗಿ ನಗರದಲ್ಲಿರುವ ಶಿವನ ದೇವಾಲಯದಲ್ಲಿ ವಿಶೇಷ ಪೂಜೆ ಮಾಡಿ ರೈತರಿಗೆ ಒಳ್ಳೆಯ ಮಳೆಯಾಗಿ ಬೆಳೆ ತಂದು ಜನತೆಗೆ ನೆಮ್ಮದಿ ಪಾಲಿಸುವಂತೆ ಮಾಡಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ತೇಜಸ್ ರಾಜ್ ಮಾತನಾಡಿ ಬಿಜೆಪಿ ಪಕ್ಷವು ಹಬ್ಬದ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಶಿವನ ದೇವಾಲಯಗಳಲ್ಲಿ ಪ್ರಸಾದ ವಿತರಣೆ ಅನ್ನಸಂತರ್ಪಣೆಯ ಜೊತೆಗೆ ಸುಮಾರು 10 ಸಾವಿರ ದೀಪೋತ್ಸವನ್ನು ಯುವಕ ನೇತೃತ್ವದಲ್ಲಿ ನಡೆಯಲಿದೆ ಎಂದು ವಿವರಿಸಿದರು.

ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಅಧ್ಯಕ್ಷ ಅಭಿಭಾರದ್ವಾಜ್ ನಾಯ್ಡು ಮಾತನಾಡಿ ಬಿಜೆಪಿ ಪಕ್ಷದಲ್ಲಿ ಯುವಕರ ಸಹಕಾರದಿಂದ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಮುಂದೆಯೂ ಸಂಘಟನೆ ಮತ್ತ ಧಾರ್ಮಿಕ ಚಟುವಟಿಕೆಗಳಿಗೆ ಹೆಚ್ಚಿನ ಸಹಕಾರ ನೀಡಲಾಗುತ್ತದೆ ಸ್ವಚ್ಚತೆ ಪರಿಸರ ಸ್ನೇಹಿ ಚಟುವಟಿಕೆಗಳಿಗೆ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದರು.

ಅನ್ನಸಂತರ್ಪಣೆಯ ನಂತರ ದೇವಾಲಯಗಳ ಸುತ್ತ ಸ್ವಚ್ಚತೆ ಮಾಡಿದರು ಬಿಜೆಪಿ ಎಸ್ಸಿ ಮೋರ್ಚಾ ನಗರ ಅಧ್ಯಕ್ಷ ಆನಂದ್, ಯುವ ಮೋರ್ಚಾ ಅಧ್ಯಕ್ಷ ಬಿ.ಸಾಯಿಮೌಳಿ, ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ನವೀನ ಕುಮಾರ್. ಮುಂತಾದವರು ಇದ್ದರು

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

8 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

13 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

13 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

18 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago