
ಕೋಲಾರ: ರಾಜ್ಯದಲ್ಲಿ ಹಿಂದೆ ಅಧಿಕಾರ ನಡೆಸಿದ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರವು ರೈತಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರೈತರ ಹಿತ ಕಾಪಾಡಿದೆ. ಇವತ್ತಿನ ಕಾಂಗ್ರೆಸ್ ಸರಕಾರವು ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಕೊಮ್ಮನಹಳ್ಳಿ ಆನಂದ್ ವಾಗ್ದಾಳಿ ನಡೆಸಿದರು.
ನಗರದ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಶನಿವಾರ ಬಿಜೆಪಿ ರೈತ ಮೋರ್ಚಾ ನಗರ ಘಟಕದ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರೈತ ಪರವಾದ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅಲ್ಲದೇ, ರೈತರ ಪ್ರತ್ಯೇಕ ಬಜೆಟ್ ಸಹ ಮಂಡಿಸಿದ್ದರು. ಆದರೆ ಆ ನಂತರದ ಬಂದ ಕಾಂಗ್ರೆಸ್ ಸರಕಾರವು ಹೆಜ್ಜೆ ಹೆಜ್ಜೆಗೂ ಹಗರಣಗಳಲ್ಲಿ ಭಾಗಿಯಾಗಿದ್ದಾರೆ. ರಾಜ್ಯದಲ್ಲಿ ಪ್ರಮುಖವಾಗಿ ರೈತರ ಹಿತ ಕಾಯುವಲ್ಲಿ ವಿಫಲವಾಗಿದೆ. ರೈತರು ಸಂಕಷ್ಟಕ್ಕೆ ಸಿಲುಕಲು ಕಾರಣವಾಗಿದೆ. ಆ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಕ್ರಮ ಹಾಗೂ ಜನಪರ ಯೋಜನೆಗಳನ್ನು ಜನರಿಗೆ ತಿಳಿಸುವ ಮೂಲಕ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ಜತೆಗೆ ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು ಎಂದು ತಿಳಿಸಿದರು.
ದೇಶದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅನೇಕ ಉತ್ತಮ ಕೆಲಸಗಳನ್ನು ರೈತರ ಏಳಿಗೆಗಾಗಿ ರೂಪಿಸಿದ್ದಾರೆ. ಆದರೆ, ಕಾಂಗ್ರೆಸ್ ಸರಕಾರವು ಪ್ರತಿ ಹಂತದಲ್ಲೂ ರಾಜಕಾರಣವನ್ನು ಮಾಡತ್ತಿದೆ ಅಭಿವೃದ್ಧಿಯ ಬಗ್ಗೆ ಕಾಳಜಿಯಿಲ್ಲವಾಗಿದೆ. ವಿರೋಧ ಪಕ್ಷಗಳು ಪ್ರಶ್ನೆ ಮಾಡಿದರೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಗತ್ಯವಾಗಿ ಕೇಂದ್ರ ಸತಕಾರದ ಮೇಲೆ ಗೂಬೆ ಕೂರಿಸುಲು ಹೊರಟಿದ್ದಾರೆ ಎಂದು ಆರೋಪಿಸಿದರು.
ಸಭೆಯಲ್ಲಿ ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿಜೆಪಿ ಶಿವಣ್ಣ ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಹಾಲು ಉತ್ಪಾದಕರ ಖರೀದಿ ಧರ ಕಡಿಮೆ, ಗೃಹ ಜ್ಯೋತಿ ಹೆಸರಿನಲ್ಲಿ ವಿದ್ಯುತ್ ಧರ ಏರಿಕೆ ಸೇರಿದಂತೆ ನಿಗಮಗಳಲ್ಲಿ ದಲಿತರ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ರೈತರ ಪಂಪ್ ಸೆಟ್ ಗಳ ಹೊಸ ಸಂಪರ್ಕಕ್ಕಾಗಿ 2.50 ಲಕ್ಷ ಲಂಚ ಕೊಡಬೇಕಾಗಿದೆ. ನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ. ಇವತ್ತು ರಾಜ್ಯದಲ್ಲಿ ಸಾಮಾನ್ಯ ಜನತೆಯ ಸರಕಾರವಾಗಿ ಕಾಂಗ್ರೆಸ್ ಉಳಿದಿಲ್ಲ ವಾಲ್ಮೀಕಿ ಮತ್ತು ಮುಡಾ ಹಗರಣದ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಮೈಸೂರಿನ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಗುತ್ತದೆ ಇದರಲ್ಲಿ ಜಿಲ್ಲೆಯಿಂದ ಹೆಚ್ಚಿನ ಕಾರ್ಯಕರ್ತರು ಭಾಗವಹಿಸಬೇಕು ಎಂದರು
ಸಭೆಯಲ್ಲಿ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಲಕ್ಷ್ಮಣಗೌಡ, ನಾರಾಯಣಶೆಟ್ಟಿ, ನಗರ ಅಧ್ಯಕ್ಷ ನಟರಾಜ್ ಪ್ರಧಾನ ಕಾರ್ಯದರ್ಶಿ ಮಂಜುನಾಥಗೌಡ ಸೇರಿದಂತೆ ಮುಂತಾದವರು ಸಭೆಯಲ್ಲಿ ಇದ್ದರು.