Categories: ಕೋಲಾರ

ಬಿಜೆಪಿ ರೈತ ಪರ, ಕಾಂಗ್ರೆಸ್ ರೈತ ವಿರೋಧಿ ಸರಕಾರದ ವಿರುದ್ದ ಕೊಮ್ಮನಹಳ್ಳಿ ಆನಂದ್ ವಾಗ್ದಾಳಿ

ಕೋಲಾರ: ರಾಜ್ಯದಲ್ಲಿ ಹಿಂದೆ ಅಧಿಕಾರ ನಡೆಸಿದ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರವು ರೈತಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರೈತರ ಹಿತ ಕಾಪಾಡಿದೆ. ಇವತ್ತಿನ ಕಾಂಗ್ರೆಸ್ ಸರಕಾರವು ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಕೊಮ್ಮನಹಳ್ಳಿ ಆನಂದ್ ವಾಗ್ದಾಳಿ ನಡೆಸಿದರು.

ನಗರದ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಶನಿವಾರ ಬಿಜೆಪಿ ರೈತ ಮೋರ್ಚಾ ನಗರ ಘಟಕದ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರೈತ ಪರವಾದ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅಲ್ಲದೇ, ರೈತರ ಪ್ರತ್ಯೇಕ ಬಜೆಟ್‌ ಸಹ ಮಂಡಿಸಿದ್ದರು. ಆದರೆ ಆ ನಂತರದ ಬಂದ ಕಾಂಗ್ರೆಸ್ ಸರಕಾರವು ಹೆಜ್ಜೆ ಹೆಜ್ಜೆಗೂ ಹಗರಣಗಳಲ್ಲಿ ಭಾಗಿಯಾಗಿದ್ದಾರೆ. ರಾಜ್ಯದಲ್ಲಿ ಪ್ರಮುಖವಾಗಿ ರೈತರ ಹಿತ ಕಾಯುವಲ್ಲಿ ವಿಫಲವಾಗಿದೆ. ರೈತರು ಸಂಕಷ್ಟಕ್ಕೆ ಸಿಲುಕಲು ಕಾರಣವಾಗಿದೆ. ಆ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಕ್ರಮ ಹಾಗೂ ಜನಪರ ಯೋಜನೆಗಳನ್ನು ಜನರಿಗೆ ತಿಳಿಸುವ ಮೂಲಕ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ಜತೆಗೆ ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು ಎಂದು ತಿಳಿಸಿದರು.

ದೇಶದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅನೇಕ ಉತ್ತಮ ಕೆಲಸಗಳನ್ನು ರೈತರ ಏಳಿಗೆಗಾಗಿ ರೂಪಿಸಿದ್ದಾರೆ. ಆದರೆ, ಕಾಂಗ್ರೆಸ್ ಸರಕಾರವು ಪ್ರತಿ ಹಂತದಲ್ಲೂ ರಾಜಕಾರಣವನ್ನು ಮಾಡತ್ತಿದೆ ಅಭಿವೃದ್ಧಿಯ ಬಗ್ಗೆ ಕಾಳಜಿಯಿಲ್ಲವಾಗಿದೆ. ವಿರೋಧ ಪಕ್ಷಗಳು ಪ್ರಶ್ನೆ ಮಾಡಿದರೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಗತ್ಯವಾಗಿ ಕೇಂದ್ರ ಸತಕಾರದ ಮೇಲೆ ಗೂಬೆ ಕೂರಿಸುಲು ಹೊರಟಿದ್ದಾರೆ ಎಂದು ಆರೋಪಿಸಿದರು.

ಸಭೆಯಲ್ಲಿ ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿಜೆಪಿ ಶಿವಣ್ಣ ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಹಾಲು ಉತ್ಪಾದಕರ ಖರೀದಿ ಧರ ಕಡಿಮೆ, ಗೃಹ ಜ್ಯೋತಿ ಹೆಸರಿನಲ್ಲಿ ವಿದ್ಯುತ್‌ ಧರ ಏರಿಕೆ ಸೇರಿದಂತೆ ನಿಗಮಗಳಲ್ಲಿ ದಲಿತರ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ರೈತರ ಪಂಪ್ ಸೆಟ್ ಗಳ ಹೊಸ ಸಂಪರ್ಕಕ್ಕಾಗಿ 2.50 ಲಕ್ಷ ಲಂಚ ಕೊಡಬೇಕಾಗಿದೆ. ನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ. ಇವತ್ತು ರಾಜ್ಯದಲ್ಲಿ ಸಾಮಾನ್ಯ ಜನತೆಯ ಸರಕಾರವಾಗಿ ಕಾಂಗ್ರೆಸ್ ಉಳಿದಿಲ್ಲ ವಾಲ್ಮೀಕಿ ಮತ್ತು ಮುಡಾ ಹಗರಣದ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಮೈಸೂರಿನ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಗುತ್ತದೆ ಇದರಲ್ಲಿ ಜಿಲ್ಲೆಯಿಂದ ಹೆಚ್ಚಿನ ಕಾರ್ಯಕರ್ತರು ಭಾಗವಹಿಸಬೇಕು ಎಂದರು

ಸಭೆಯಲ್ಲಿ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಲಕ್ಷ್ಮಣಗೌಡ, ನಾರಾಯಣಶೆಟ್ಟಿ, ನಗರ ಅಧ್ಯಕ್ಷ ನಟರಾಜ್ ಪ್ರಧಾನ ಕಾರ್ಯದರ್ಶಿ ಮಂಜುನಾಥಗೌಡ ಸೇರಿದಂತೆ ಮುಂತಾದವರು ಸಭೆಯಲ್ಲಿ ಇದ್ದರು.

Ramesh Babu

Journalist

Recent Posts

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

3 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

5 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

5 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

7 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

11 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

23 hours ago