ಬಿಜೆಪಿಯ 18 ಶಾಸಕರ ಅಮಾನತು ವಾಪಸ್ ಪಡೆಯಲಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಹನಿಟ್ರ್ಯಾಪ್ ಮತ್ತು ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ವಿಚಾರವಾಗಿ ವಿಧಾನಸಭೆಯಲ್ಲಿ ಚರ್ಚೆ ವೇಳೆ ಭಾರೀ ಗಲಾಟೆ ನಡೆದಿತ್ತು. ಆ ವೇಳೆ ಬಿಜೆಪಿ ಶಾಸಕರು ಸ್ಪೀಕರ್ ಯು.ಟಿ ಖಾದರ್ ಅವರ ಮೇಲೆ ಪೇಪರ್ ತೂರಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಮೂಲಕ ಪೀಠಕ್ಕೆ ಅಗೌರವ ತೋರಿದ ಆರೋಪದ ಮೇಲೆ ಬಿಜೆಪಿಯ 18 ಶಾಸಕರನ್ನು 6 ತಿಂಗಳು ಕಾಲ ಅಮಾನತು ಮಾಡಿ ಖಾದರ್ ಆದೇಶಿಸಿದ್ದರು. ಆದರೆ, ಇದೀಗ ಶಾಸಕ ಅಮಾನತು ಆದೇಶವನ್ನು ಹಿಂಪಡೆಯಲು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ಬಿಜೆಪಿ ಶಾಸಕರ ಅಮಾನತು ಸಂಬಂಧ ಚರ್ಚಿಸಲು ವಿಧಾನಸಭೆ ಅಧ್ಯಕ್ಷರಾದ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾನೂನು ಸಚಿವ ಎಚ್.ಕೆ. ಪಾಟೀಲ್, ಪ್ರತಿಪಕ್ಷ ನಾಯಕ ಆರ್.ಅಶೋಕ್, ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಜರಿದ್ದರು.
ಅಮಾನತು ಆಗಿದ್ದವರು ಯಾರು?
ಶಾಸಕರಾದ ದೊಡ್ಡನಗೌಡ ಪಾಟೀಲ್, ಡಾ. ಅಶ್ವಥ್ ನಾರಾಯಣ, ಬೈರತಿ ಬಸವರಾಜ, ಡಾ. ಶೈಲೇಂದ್ರ ಬೆಲ್ದಾಳೆ, ಮುನಿರತ್ನ, ಧೀರಜ್ ಮುನಿರಾಜು, ಬಿ.ಪಿ. ಹರೀಶ್, ಡಾ. ಭರತ್ ಶೆಟ್ಟಿ, ಚಂದ್ರು ಲಮಾಣಿ, ಉಮಾನಾಥ ಕೋಟ್ಯಾನ್, ಸಿ.ಕೆ. ರಾಮಮೂರ್ತಿ, ಯಶಪಾಲ್ ಸುವರ್ಣ, ಬಿ. ಸುರೇಶ್ ಗೌಡ, ಶರಣು ಸಲಗಾರ್, ಚನ್ನಬಸಪ್ಪ, ಬಸವರಾಜ ಮತ್ತಿಮೂಡ, ಎಸ್. ಆರ್. ವಿಶ್ವನಾಥ್, ಎಂ.ಆರ್. ಪಾಟೀಲ್ ಅವರನ್ನು ವಿಧಾನಸಭೆ ಕಲಾಪದಿಂದ ಆರು ತಿಂಗಳುಗಳ ಕಾಲ ಅಮಾನತು ಮಾಡಿ ಸ್ಪೀಕರ್ ಯುಟಿ ಖಾದರ್ ರೂಲಿಂಗ್ ಹೊರಡಿಸಿದ್ದರು.
ರಾಜಕೀಯ ಪಕ್ಷಗಳ ಭಿನ್ನಮತದ ಸುತ್ತ, ಅಧಿಕಾರ ಕುರ್ಚಿಯ ಹಾವು ಏಣಿ ಆಟದ ಸುತ್ತ, ಸ್ವಾಮೀಜಿಗಳ ಪೀಠದ ಸುತ್ತ, ಧರ್ಮಸ್ಥಳದ ನಿಗೂಢ…
ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…
ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…
ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…
ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…
ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…