ಬಿಡಿಸಿಸಿ ಬ್ಯಾಂಕ್ ನಲ್ಲಿ ಕುರಿ, ಮೇಕೆ, ಹಸುಗಳಿಗೆ ಸಾಲ- ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಚುಂಚೇಗೌಡ

ಬಿಡಿಸಿಸಿ ಬ್ಯಾಂಕ್ ನಲ್ಲಿ ಕುರಿ, ಮೇಕೆ, ಹಸುಗಳಿಗೆ ಸಾಲ ನೀಡುತ್ತಿದ್ದೇವೆ. ರೈತರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಚುಂಚೇಗೌಡ ಹೇಳಿದರು.

ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮದಲ್ಲಿ ವಿವಿದ್ದೋದ್ದೇಶ ಪ್ರಾರ್ಥಮಿಕ ಸಹಕಾರ ಸಂಘದ ವಾರ್ಷಿಕ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸಂಘದ ಎಲ್ಲಾ ರೈತರಿಗೂ ಸಾಲ ಸೌಲಭ್ಯ ಇದೆ. ಎಲ್ಲರೂ ಸಾಲವನ್ನು ತೆಗೆದುಕೊಂಡು ಸಕಾಲಕ್ಕೆ ತಿರುಗಿಸಿ ಸಂಘವನ್ನು ಬೆಳೆಸಬೇಕಾಗಿದೆ. ಈ ಸಂಘಕ್ಕೆ ಮೂರು ಲಕ್ಷ ಲಾಭ ಬಂದಿದ್ದು, ಸಂಘವನ್ನು ಇನ್ನು ಚೆನ್ನಾಗಿ ಬೆಳೆಸಬೇಕು ಎಂದು ಹೇಳಿದರು.

ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರಂಗಪ್ಪ ಮಾತನಾಡಿ, ಸಂಘ ಪ್ರಾರಂಭ ಆದಾಗಿನಿಂದ ಅಚ್ಚುಕಟ್ಟಾಗಿ ಬೆಳೆದುಕೊಂಡು ಬಂದಿದೆ. ಅದರಲ್ಲಿ ರೈತರ ಪಾಲು ಹೆಚ್ಚಾಗಿದೆಮ ಅಧ್ಯಕ್ಷರಾಗಲಿ, ಸದಸ್ಯರಾಗಲಿ, ಉಪಾಧ್ಯಕ್ಷರಾಗಲಿ ಸಂಘದಲ್ಲಿ ಉತ್ತಮವಾದ ಕೆಲಸ ಮಾಡಿಕೊಂಡು ಸಂಘವನ್ನು ಉನ್ನತಕ್ಕೆ ಬೆಳೆಸುತ್ತಿದ್ದಾರೆ ಎಂದು ಹೇಳಿದರು.

ಸಂಘದ ಮಾಜಿ ಅಧ್ಯಕ್ಷ ಶ್ರೀಧರ್ ಮಾತನಾಡಿ, ಸಂಘ ಪ್ರಾರಂಭವಾಗಿ ಮೂರು ವರ್ಷಗಳಲ್ಲಿ ಸಂಘವನ್ನು ಅಭಿವೃದ್ಧಿಪಡಿಸಿದ್ದೇವೆ, ಸಂಘಕ್ಕೆ ಮೂರು ಲಕ್ಷ ಲಾಭ ಬಂದಿದ್ದು, ಮುಂದಿನ ವರ್ಷ ಇನ್ನೂ ಲಾಭ ಬರುವ ನಿರೀಕ್ಷೆ ಇದೆ. ಸಂಘಕ್ಕೆ ಸ್ವಂತ ಕಟ್ಟಡ ಬೇಕಾಗಿರುವುದರಿಂದ ನಮಗೆ ಸ್ವಂತ ಕಟ್ಟಡ ಬೇಕೆಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಲ್ಲಿ ಮನವಿ ಮಾಡಿದ್ದೇವೆ, ಆದಷ್ಟು ಬೇಗ ಕಟ್ಟಡ ಆಗುತ್ತದೆ ಎಂಬ ನಿರೀಕ್ಷೆ ಇದೆ ಎಂದು ಹೇಳಿದರು.

2024-25 ನೇ ಜಮ ಖರ್ಚ ವೆಚ್ಚವನ್ನು ವಾರ್ಷಿಕ ಸಭೆಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ಸಂಜಯ್ ಮಂಡಿಸಿದರು.

ಈ ವೇಳೆ ಸಂಘದ ಅಧ್ಯಕ್ಷ ನಂಜೇಗೌಡ, ಮೇಳೆಕೋಟೆ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಚಿದಾನಂದ, ವಿವಿದ್ದೋದ್ದೇಶ ಪ್ರಾರ್ಥಮಿಕ ಸಹಕಾರ ಸಂಘದ ಉಪಾಧ್ಯಕ್ಷ ಅನುಸೂಯ ಶೆಟ್ಟಪ್ಪ, ಮಾಜಿ ಅಧ್ಯಕ್ಷ ಮುನೇಗೌಡ, ಸಂಘದ ನಿರ್ದೇಶಕ ವಿಜಯಕುಮಾರ್, ಪಿಳ್ಳಪ್ಪ ಹನುಮಂತರಾಯಪ್ಪ, ಮುನಿರಾಜು, ರಾಮ ನಾಯ್ಕ್, ಲೋಕನಾಥ್, ಗಂಗಲಕ್ಷ್ಮಮ್ಮ ಮನಿರಾಜು ಹಾಗು ಕಾಂಗ್ರೆಸ್ ಮುಖಂಡರಾದ ಸವಿತಾ ಸೇರಿದಂತೆ‌ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

13 minutes ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

1 hour ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

1 hour ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

5 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

16 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

17 hours ago