ಬಿಬಿಎಂಪಿ ಕಾರ್ಯನಿರತ ಗುತ್ತಿಗೆದಾರರು ಬಿಜೆಪಿ ನಾಯಕರ ಭೇಟಿ: ಕಾಮಗಾರಿಗಳ ಬಾಕಿ ಹಣ ಬಿಡುಗಡೆ ಮಾಡಲು ಸರ್ಕಾರಕ್ಕೆ ಒತ್ತಾಯಿಸಲು ಮನವಿ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯನಿರತ ಗುತ್ತಿಗೆದಾರರ ಸಂಘದ ಸದಸ್ಯರು ಮಾಜಿ ಸಚಿವ ಅಶ್ವಥ್ ನಾರಾಯಣ ಅವರನ್ನು ಭೇಟಿಯಾಗಿ ಪೂರ್ಣಗೊಂಡಿರುವ ಕಾಮಗಾರಿಗಳಿಗೆ ಬಾಕಿ ಹಣ ಬಿಡುಗಡೆ ಮಾಡಲು ಸರ್ಕಾರವನ್ನು ಒತ್ತಾಯಿಸುವಂತೆ ಮನವಿ ಮಾಡಿದರು.

ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಮಾಜಿ ಸಚಿವ ಅಶ್ವಥ್ ನಾರಾಯಣ ಅವರು, ಬಿಬಿಎಂಪಿ ಗುತ್ತಿಗೆದಾರರು ನಿರ್ವಹಿಸಿರುವ ಕಾಮಗಾರಿಗಳ ಬಾಕಿ ಹಣವನ್ನು ಬಿಡುಗಡೆಗೆ ತಡೆ ಹಿಡಿದು ಸಂಕಷ್ಟಕ್ಕೆ ಸಿಲುಕಿಸಿರುವ ಕಾಂಗ್ರೆಸ್‌ ಸರ್ಕಾರದ ಧೋರಣೆಯಿಂದ ನೊಂದಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯನಿರತ ಗುತ್ತಿಗೆದಾರರ ಸಂಘದ ಸದಸ್ಯರು ಭೇಟಿಯಾಗಿ ತಮ್ಮ ಅಳಲನ್ನು ತೋಡಿಕೊಂಡು, ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಲು ಸರ್ಕಾರವನ್ನು ಒತ್ತಾಯಿಸುವಂತೆ ನನಗೆ ಮನವಿ ಪತ್ರ ಸಲ್ಲಿಸಿದ್ದಾರೆ ಎಂದರು.

ಬೆಂಗಳೂರು ನಗರಾಭಿವೃದ್ಧಿ ಸಚಿವರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಈ ವಿಚಾರದಲ್ಲಿ ಕುಂಟು ನೆಪ ಹೇಳಿ ವಿನಾಕಾರಣ ವಿಳಂಬ ಧೋರಣೆ ತೋರದೇ ಕೂಡಲೇ ಗುತ್ತಿಗೆದಾರರ ಹಣವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

ಈ ವಿಷಯವಾಗಿ ನಮ್ಮ ಪಕ್ಷದ ಹಾಲಿ ಹಾಗೂ ಮಾಜಿ ಶಾಸಕರು ಗುತ್ತಿಗೆದಾರರ ಪರವಾಗಿ ಹೋರಾಟ ಮಾಡಲು ಶತಸಿದ್ಧವಾಗಿದೆ ಎಂದೂ ಟ್ವೀಟ್ ಮಾಡುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

4 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

15 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

20 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

23 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

1 day ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

2 days ago