ಯುಟಿಲಿಟಿ ಬಿಲ್ಡಿಂಗ್ ನಲ್ಲಿರುವ ದೊಂಬ್ಲೂರು ARO, ಶಾಂತಿನಗರ ARO ಮತ್ತು ಟೌನ್ ಪ್ಲಾನಿಂಗ್ ಕಚೇರಿ ಮೇಲೆ ಲೋಕಾಯುಕ್ತ ರೇಡ್ ನಡೆಸಲಾಗಿದೆ.
ಇನ್ಸ್ಪೆಕ್ಟರ್ ಅಂಜನ್ ಮೂರ್ತಿ ಸೇರಿ ಹಲವು ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ. ARO ಕಚೇರಿಯಲ್ಲಿ ಕಡತಗಳ ಪರಿಶೀಲನೆ ನಡೆಸಿದ ಅಧಿಕಾರಿಗಳು.
ಖುದ್ದಾಗಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ರಿಂದ ರಾಜಾಜಿನಗರ ರೆವಿನ್ಯೂ ಆಫೀಸ್ ನಲ್ಲಿ ಕಡತಗಳ ಪರಿಶೀಲನೆ ನಡೆದಿದೆ.
ಫೈಲ್ ಗಳು ಏಕೆ ಕ್ಲಿಯರ್ ಆಗಿಲ್ಲ ಎಂದು ಎಆರ್ ಓ ಭಾರತಿ ಹಾಗೂ ಮ್ಯಾನೇಜರ್ ರುಕ್ಮಿಣಿಗೆ ತರಾಟೆಗೆ ತೆಗೆದುಕೊಳ್ಳಲಾಗಿದೆ.
ಎಷ್ಟು ಅಪ್ಲಿಕೇಷನ್ ಪೆಂಡಿಂಗ್ ಇದೆ ಏಕೆ ಕೆಲಸಗಳು ಬಾಕಿ ಇವೆ ಎಂದು ಅಧಿಕಾರಿಗಳಿಗೆ ವರದಿ ಕೇಳಿದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್. ಅದೇರೀತಿ ಕಚೇರಿಯಲ್ಲಿ ನಗದು ಇಡಲಾಗಿದಿಯೇ ಎಂದು ಪರಿಶೀಲನೆ ನಡೆಸುವಂತೆ ಲೋಕಾಯುಕ್ತ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.
ಇಂದು ಬಿಬಿಎಂಪಿಯ 45 ಕಂದಾಯ ಕಚೇರಿಗಳ ಮೇಲೆ ಸರ್ಪ್ರೈಸ್ ಇನ್ಸ್ಪೆಕ್ಷನ್ ನಡೆಸಲಾಗಿದೆ. 100 ಕ್ಕೂ ಹೆಚ್ಚು ಅಧಿಕಾರಿಗಳಿಗಳನ್ನ ಇದಕ್ಕೆ ನಿಯೋಜನೆ ಮಾಡಿದ್ದೇವೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹೇಳಿದ್ದಾರೆ.
ಕಾನೂನಿನ ಉಲ್ಲಂಘನೆ ಎಲ್ಲಿ ಆಗುತ್ತಿದೆ,ಎಲ್ಲಿಲ್ಲಿ ತಡವಾಗಿ ಕೆಲಸ ಆಗುತ್ತಿದೆ, ಸಾರ್ವಜನಿಕರಿಗೆ ಯಾವ ರೀತಿ ತೊಂದರೆ ಆಗುತ್ತಿದೆ ಎಂಬುದರ ಬಗ್ಗೆ ಪರಿಶೀಲನೆ ಮಾಡಲಾಗಿದೆ ನಮಗೆ ದೂರು ಬಂದ ಕಾರಣದಿಂದ ನಾವು ರೈಡ್ ಮಾಡುತ್ತಿದ್ದೇವೆ ಎಂದರು.
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…