ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನಡೆದ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ದೊಡ್ಡಬಳ್ಳಾಪುರ ನ್ಯಾಯಾಲಯದಲ್ಲಿಂದು ರಾಷ್ಟ್ರೀಯ ಲೋಕ ಆದಾಲತ್ ನಡೆಯಿತು, ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ದೂರವಾಗಿದ್ದ ಗಂಡ ಹೆಂಡತಿ ರಾಜೀ ಸಂಧಾನದ ಮೂಲಕ ನ್ಯಾಯಾಧೀಶರ ಮುಂದೆ ಒಂದಾದರು,
ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಸುಮಾರು ವರ್ಷಗಳಿಂದ ನಡೆಯುತ್ತಿದ್ದ ಕೌಟುಂಬಿಕ ಪ್ರಕರಣಗಳನ್ನ ಇತ್ಯರ್ಥ ಮಾಡುವ ಮೂಲಕ ಬಿರುಕುಗೊಂಡು ದೂರವಾಗಿದ್ದ ದಂಪತಿ ಮತ್ತೆ ಒಂದಾದರು, ಇಬ್ಬರ ಮನಸ್ಸುನ್ನು ಬದಲಾಯಿಸಿ ನೂತನ ಜೀವನಕ್ಕೆ ಕಾಲಿಡುವಂತೆ ನ್ಯಾಯಾಧೀಶರು ಮನಮೋಲಿಸಿದರು, ನೂತನ ವಧು- ವರರಂತೆ ಹೂಮಾಲೆಗಳನ್ನು ಪರಸ್ಪರ ಹಾಕುವ ಮೂಲಕ ಸತಿ-ಪತಿ ಒಂದಾದರು, ಒಂದಾದ ಜೋಡಿಗಳಿಗೆ ಪರಸ್ಪರ ಸಿಹಿ ತಿನ್ನಿಸುವ ಮೂಲಕ ಸಂಭ್ರಮಿಸಿದ ಘಟನೆ ನಗರದಲ್ಲಿ ನಡೆದಿದೆ.
ಈ ವಿಚಾರವಾಗಿ ನ್ಯಾಯಾಧೀಶರು ಪರಿಶೀಲಿಸಿ ಮನವೊಲಿಸಿದ ನಂತರ ಎರಡು ವರ್ಷಗಳ ಬಳಿಕ ತಮ್ಮ ಮನಸ್ಸು ಬದಲಾಯಿಸಿ ಮತ್ತೆ ಒಂದಾದ ಘಟನೆ ಶನಿವಾರ ನಡೆದ ಲೋಕ್ ಅದಾಲತ್ ನಲ್ಲಿ ಸಾಕ್ಷಿಯಾಯಿತು.
ಈ ವೇಳೆ 4ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಮೇಶ್ ದುರುಗಪ್ಪ ಏಕಬೋಟೆ, ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ. ಎಫ್.ಸಿ ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿ ಸಹ ಕಾರ್ಯದರ್ಶಿ ಪ್ರೇಮ್ ಕುಮಾರ್, ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ದೊಡ್ಡಬಳ್ಳಾಪುರ ಮತ್ತು ವಕೀಲರು ಮತ್ತೆ ಒಂದಾದ ಇವರಿಗೆ ಶುಭ ಹಾರೈಸಿದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…