ಬಿರುಕುಗೊಂಡಿದ್ದ ದಾಂಪತ್ಯ ಜೀವನಕ್ಕೆ ಮತ್ತೆ ಜೀವ ತುಂಬಿದ ಲೋಕ ಅದಾಲತ್: ಪುನಃ ತಮ್ಮ ದಾಂಪತ್ಯ ಜೀವನಕ್ಕೆ ಮರಳಿದ ಎರಡು ಜೋಡಿ

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನಡೆದ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ದೊಡ್ಡಬಳ್ಳಾಪುರ ನ್ಯಾಯಾಲಯದಲ್ಲಿಂದು ರಾಷ್ಟ್ರೀಯ ಲೋಕ ಅದಾಲತ್‌ ನಡೆಯಿತು, ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ದೂರವಾಗಿದ್ದ ಗಂಡ ಹೆಂಡತಿ ರಾಜೀ ಸಂಧಾನದ ಮೂಲಕ ನ್ಯಾಯಾಧೀಶರ ಮುಂದೆ ಒಂದಾದರು.

ಬಿರುಕುಗೊಂಡು ದೂರವಾಗಿದ್ದ ದಂಪತಿ ಮತ್ತೆ ಒಂದಾದರು, ವಿವಾಹ ವಿಚ್ಛೇದನಕ್ಕೆ ಮುಂದಾಗಿದ್ದ ಎರಡು ಜೋಡಿಗಳ ಮನಸ್ಸುನ್ನು ಬದಲಾಯಿಸಿ ನೂತನ ಜೀವನಕ್ಕೆ ಕಾಲಿಡುವಂತೆ ನ್ಯಾಯಾಧೀಶರು ಮನಮೋಲಿಸಿದರು.

ನೂತನ ವಧು- ವರರಂತೆ ಹೂಮಾಲೆಗಳನ್ನು ಪರಸ್ಪರ ಹಾಕಿಕೊಳ್ಳುವ ಮೂಲಕ ಸತಿ-ಪತಿ ಒಂದಾದರು, ಒಂದಾದ ಎರಡು ಜೋಡಿಗಳಿಗೆ ಪರಸ್ಪರ ಸಿಹಿ ತಿನ್ನಿಸುವ ಮೂಲಕ ಸಂಭ್ರಮಿಸಿದ ಘಟನೆ ಕೋರ್ಟ್ ನಲ್ಲಿ ನಡೆದಿದೆ.

ಈ ದಂಪತಿ ಹಿರಿಯ ಪ್ರಧಾನ ನ್ಯಾಯಾಧೀಶರಾದ ಶಿಲ್ಪಾ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್, 2ನೇ ಸಿವಿಲ್ ನ್ಯಾಯಾಧೀಶರಾದ ರವಿ ಬೇಟೆಗಾರ್ ರವರ ಉಪಸ್ಥಿತಿಯಲ್ಲಿ ಪುನಃ ತಮ್ಮ ದಾಂಪತ್ಯ ಜೀವನಕ್ಕೆ ಮರಳಿದರು.

ಈ ವೇಳೆ ವಕೀಲರು ಹಾಗೂ ಇತರರು ಮತ್ತೆ ಒಂದಾದ ಜೋಡಿಗಳಿಗೆ ಶುಭ ಹಾರೈಸಿದರು.

Ramesh Babu

Journalist

Recent Posts

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

6 minutes ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

3 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

5 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

16 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

20 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

22 hours ago