ಬಿರುಗಾಳಿ ಮಳೆಗೆ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಬೇವಿನ ಮರ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಸಮೀಪ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಬೃಹತ್ ಬೇವಿನ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಮರದ ರೆಂಬೆ-ಕೊಂಬೆಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಇದರಿಂದ ಸ್ಥಳೀಯರು ತೊಂದರೆ ಅನುಭವಿಸುವಂತಾಯಿತು. ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದ ವಾಹನಗಳ ಸಂಚಾರಕ್ಕೂ ಅಡಚಣೆ ಉಂಟಾಗಿತ್ತು. ಬಳಿಕ ಮರವನ್ನು ತೆರವುಗೊಳಿಸಲಾಗಿದ್ದು, ವಾಹನ ಸಂಚಾರ ಪುನರಾರಂಭಗೊಂಡಿತು.

Leave a Reply

Your email address will not be published. Required fields are marked *

error: Content is protected !!