
ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ ಪೆರಮಗೊಂಡನಹಳ್ಳಿ ಗ್ರಾಮದಲ್ಲಿ ಫಸಲಿಗೆ ಬಂದಿದ್ದ ಬಾಳೆ ತೋಟಕ್ಕೂ ಹಾನಿಯಾಗಿರುವ ಘಟನೆ ನಡೆದಿದೆ…
ಪೆರಮಗೊಂಡನಹಳ್ಳಿ ಗ್ರಾಮದ ರೈತ ಮುನೇಗೌಡರವರು ತಮ್ಮ ಎರಡು ಎಕರೆ ಭೂಮಿಯಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬಾಳೆ ತೋಟ ಮಾಡಿದ್ದರು.

ಇದೀಗ ನಿನ್ನೆ ರಾತ್ರಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ಎರಡು ಎಕರೆಯಲ್ಲಿ ಬೆಳೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆ ಬೆಳೆ ನೆಲಕಚ್ಚಿದೆ.
ನೆಲಕ್ಕೆ ಉರುಳಿದ ಬಾಳೆ ಗೊನೆಗಳು ಸಂಪೂರ್ಣ ಕಟಾವಿಗೆ ಬಂದಿದ್ದವು. ಒಂದು ಕೆಜಿಗೆ 30-40 ರೂ. ಬಾಳೆ ಮಾರಾಟ ಮಾಡುತ್ತಿದ್ದ ರೈತನೀಗಿಗ ದೊಡ್ಡ ಪ್ರಮಾಣದಲ್ಲಿ ಅಂದರೆ ಸುಮಾರು 5-6ಲಕ್ಷ ರೂ. ನಷ್ಟವಾಗಿದೆ ಎಂದು ರೈತ ತಿಳಿಸಿದ್ದಾರೆ.

ಸ್ಥಳಕ್ಕೆ ಸಂಬಂಧಿಸಿದ ಅಧಿಕಾರಿಗಳು, ಶಾಸಕರು ಭೇಟಿ ನೀಡಿ. ಹಾನಿಗೊಳಗಾದ ಬೆಳೆಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ರೈತ ಮುನೇಗೌಡ ಮನವಿ ಮಾಡಿದ್ದಾರೆ..