ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ ಗ್ರಾಮದಲ್ಲಿ ಸಮಾಜಮುಖಿ ಕಾರ್ಯಕ್ರಮಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮದ ಆರಾಧ್ಯ ದೈವಗಳಾದ ಉದ್ಭವ ತಿಮ್ಮರಾಯ ಸ್ವಾಮಿ ಹಾಗೂ ಅಭಯ ಆಂಜನೇಯ ಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ, ಕುಟುಂಬದವರು ಮಗುವಿನ ಸುಖ, ಆರೋಗ್ಯ ಮತ್ತು ಉಜ್ವಲ ಭವಿಷ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.

ಕಾರ್ಯಕ್ರಮದ ಅಂಗವಾಗಿ ಬಿಸವನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ 40 ವಿದ್ಯಾರ್ಥಿಗಳಿಗೆ ಅಗತ್ಯವಾದ ಶಾಲಾ ನೋಟ್‌ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಯಿತು. ಅಲ್ಲದೆ, ಶಾಲಾ ಮಕ್ಕಳಿಗೆ ಅನ್ನದಾನ ಏರ್ಪಡಿಸಿ ಸಿಹಿ ಊಟವನ್ನು ನೀಡಲಾಯಿತು.

ಶಿಕ್ಷಣ ಮತ್ತು ಸೇವೆಗೆ ಪ್ರಾಮುಖ್ಯತೆ ನೀಡುವ ಈ ಸಮಾಜಮುಖಿ ಕಾರ್ಯವನ್ನು ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಭಾಗ್ಯಮ್ಮ ಅವರ ಪುತ್ರ ತಿಮ್ಮರಾಯಪ್ಪ, ಗ್ರಾಮದ ಮುಖಂಡರಾದ ನಾರಾಯಣಸ್ವಾಮಿ ಎಂ, ರಾಮಯ್ಯ, ಪರಶುರಾಮ ಬಿ.ಕೆ, ಯಲ್ಲಪ್ಪ, ಆಂಜಿನಪ್ಪ (ಬೆಟ್ಟ) ಹಾಗೂ ರವಿಕುಮಾರ್ ಎಂ. ಸೇರಿದಂತೆ ಗ್ರಾಮದ ಗಣ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದು, ಅದ್ವಿತಾಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು.

ಜನ್ಮದಿನವನ್ನು ಕೇವಲ ಸಂಭ್ರಮಕ್ಕೆ ಸೀಮಿತಗೊಳಿಸದೆ, ವಿದ್ಯಾರ್ಥಿಗಳಿಗೆ ಅನ್ನದಾನ ಹಾಗೂ ಶಿಕ್ಷಣ ಸಾಮಗ್ರಿಗಳ ವಿತರಣೆಯಂತಹ ಸಮಾಜಮುಖಿ ಸೇವೆಯೊಂದಿಗೆ ಆಚರಿಸಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

Leave a Reply

Your email address will not be published. Required fields are marked *

error: Content is protected !!