ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ ಗ್ರಾಮದಲ್ಲಿ ಸಮಾಜಮುಖಿ ಕಾರ್ಯಕ್ರಮಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮದ ಆರಾಧ್ಯ ದೈವಗಳಾದ ಉದ್ಭವ ತಿಮ್ಮರಾಯ ಸ್ವಾಮಿ ಹಾಗೂ ಅಭಯ ಆಂಜನೇಯ ಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ, ಕುಟುಂಬದವರು ಮಗುವಿನ ಸುಖ, ಆರೋಗ್ಯ ಮತ್ತು ಉಜ್ವಲ ಭವಿಷ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.
ಕಾರ್ಯಕ್ರಮದ ಅಂಗವಾಗಿ ಬಿಸವನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ 40 ವಿದ್ಯಾರ್ಥಿಗಳಿಗೆ ಅಗತ್ಯವಾದ ಶಾಲಾ ನೋಟ್ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಯಿತು. ಅಲ್ಲದೆ, ಶಾಲಾ ಮಕ್ಕಳಿಗೆ ಅನ್ನದಾನ ಏರ್ಪಡಿಸಿ ಸಿಹಿ ಊಟವನ್ನು ನೀಡಲಾಯಿತು.
ಶಿಕ್ಷಣ ಮತ್ತು ಸೇವೆಗೆ ಪ್ರಾಮುಖ್ಯತೆ ನೀಡುವ ಈ ಸಮಾಜಮುಖಿ ಕಾರ್ಯವನ್ನು ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಭಾಗ್ಯಮ್ಮ ಅವರ ಪುತ್ರ ತಿಮ್ಮರಾಯಪ್ಪ, ಗ್ರಾಮದ ಮುಖಂಡರಾದ ನಾರಾಯಣಸ್ವಾಮಿ ಎಂ, ರಾಮಯ್ಯ, ಪರಶುರಾಮ ಬಿ.ಕೆ, ಯಲ್ಲಪ್ಪ, ಆಂಜಿನಪ್ಪ (ಬೆಟ್ಟ) ಹಾಗೂ ರವಿಕುಮಾರ್ ಎಂ. ಸೇರಿದಂತೆ ಗ್ರಾಮದ ಗಣ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದು, ಅದ್ವಿತಾಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು.
ಜನ್ಮದಿನವನ್ನು ಕೇವಲ ಸಂಭ್ರಮಕ್ಕೆ ಸೀಮಿತಗೊಳಿಸದೆ, ವಿದ್ಯಾರ್ಥಿಗಳಿಗೆ ಅನ್ನದಾನ ಹಾಗೂ ಶಿಕ್ಷಣ ಸಾಮಗ್ರಿಗಳ ವಿತರಣೆಯಂತಹ ಸಮಾಜಮುಖಿ ಸೇವೆಯೊಂದಿಗೆ ಆಚರಿಸಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…