ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ನೀರಿಗೆ ಹಾಹಾಕಾರ ಉಂಟಾಗಿದೆ. ಮನುಷ್ಯರು ಮಾತ್ರವಲ್ಲ, ಪ್ರಾಣಿ-ಪಕ್ಷಿ ಸೇರಿದಂತೆ ಜೀವ ಸಂಕುಲಗಳು ಜೀವಜಲಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಅಲ್ಲಲ್ಲಿ ಜಲಮೂಲಗಳು, ಕೆರೆ ಕಟ್ಟೆಗಳು ಬರಿದಾಗುತ್ತಿದ್ದು, ಪ್ರಾಣಿ, ಪಕ್ಷಿಗಳು ಬಿಸಿಲಿನ ಬೇಗೆ ತಾಳಲಾರದೆ, ಸರಿಯಾಗಿ ನೀರು ಸಿಗದೆ ನಿತ್ರಾಣಗೊಳ್ಳುತ್ತಿವೆ.
ಪ್ರಾಣಿ ಪಕ್ಷಿಗಳ ದಾಹ ನೀಗಿಸಲು ತಾಲೂಕಿನ ತೂಬಗೆರೆ ಹೋಬಳಿ ದೇವರಬೆಟ್ಟ ಅರಣ್ಯ ಪ್ರದೇಶದಲ್ಲಿ ಪರಿಸರ ಸಂರಕ್ಷಣಾ ಸಮಿತಿ ಹಾಗು ಅರಣ್ಯ ಇಲಾಖೆಯ ಸಹಕಾರದೊಂದಿಗೆ ಕಾಡು ಪ್ರಾಣಿಗಳಿಗೆ ನೀರುಣಿಸುವ ಉದ್ದೇಶದಿಂದ ತೊಟ್ಟಿಗಳಿಗೆ ಟ್ಯಾಂಕರ್ ಮುಖಾಂತರ ತೊಟ್ಟಿಗಳಿಗೆ ನೀರು ತುಂಬಿಸಲಾಯಿತು.
ದೇವರ ಬೆಟ್ಟ ಅರಣ್ಯದಲ್ಲಿ ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಅರಣ್ಯದಲ್ಲಿ ನೀರಿನ ಅಂಶ ಕಡಿಮೆಯಾಗಿ ಹಳ್ಳ ಕೊಳ್ಳಗಳು ನೀರಿಲ್ಲದೆ ಬತ್ತಿ ಹೋಗಿವೆ. ದಿನದಿಂದ ದಿನಕ್ಕೆ ಉಷ್ಣಾಂಶ ಏರಿಕೆಯಾಗಿ ಕಿಲೋ ಮೀಟರ್ ಗಟ್ಟಲೆ ನಡೆದು ಹೋಗಿ ನೀರು ಕುಡಿಯಲು ಕಾಡುಪ್ರಾಣಿಗಳಿಗೆ ಅಸಾಧ್ಯ. ಇದನ್ನ ತಪ್ಪಿಸಲು ಕಾಡಿನ ಒಳಗೆ ಸಿಮೆಂಟ್ ತೊಟ್ಟಿಗಳಿಗೆ ನೀರು ತುಂಬಿಸಲಾಯಿತು.
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…