
ಮಹಾತ್ಮ ಗಾಂಧಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಹಲವಾರು ವಿದ್ಯಾರ್ಥಿಗಳು ಹೈದರಾಬಾದ್‌ನಲ್ಲಿ ಬಿಸಿಲಿನ ವಾತಾವರಣದ ಕಾರಣ ರಜೆ ಘೋಷಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಕಳೆದ ಕೆಲವು ದಿನಗಳಿಂದ ಬಿಸಿಲಿನ ತಾಪ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ರಜೆ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸಿಟ್ಟಿಗೆದ್ದ ವಿದ್ಯಾರ್ಥಿಗಳನ್ನು ಸಿಬ್ಬಂದಿ ಸಮಾಧಾನಪಡಿಸಲು ಯತ್ನಿಸಿದರೂ ಪಟ್ಟು ಬಿಡದೇ ಪ್ರತಿಭಟನೆ ನಡೆಸಿದ್ದಾರೆ.
ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ವಿಡಿಯೋಗಳು ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹಲವಾರು ಜನರ ಗಮನ ಸೆಳೆದಿವೆ.