ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಿರುವುದರಿಂದ, ಬಿಸಿಲಿನ ಬೇಗೆಯಿಂದ ತತ್ತರಿಸಿರುವ ಕಾರಣದಿಂದ ರಾಜ್ಯ ಉಚ್ಚ ನ್ಯಾಯಾಲಯವು ಮಾರ್ಚ್ 15ರಿಂದ ಮೇ 31ರವರೆಗೆ ನ್ಯಾಯಾಲಯದ ಕಲಾಪಗಳಲ್ಲಿ ವಕೀಲರು ಕಪ್ಪು ಕೋಟು ಧರಿಸಲು ವಿನಾಯತಿ ನೀಡಿದೆ.
ಆದರೆ, ಈ ವಿನಾಯಿತಿಯು ಬಿಳಿ ಶರ್ಟ್ ಮತ್ತು ನೆಕ್ ಬ್ಯಾಂಡ್ ಧರಿಸುವುದಕ್ಕೆ ಅನ್ವಯಿಸುವುದಿಲ್ಲ.
ರಾಜ್ಯ ಉಚ್ಚ ನ್ಯಾಯಾಲಯದ ತೀರ್ಮಾನವನ್ನು ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಸ್ವಾಗತಿಸಿದೆ.