ಬಿಸಿಲ ಬೇಗೆಯ ಎಫೆಕ್ಟ್: 2 ತಿಂಗಳಲ್ಲಿ 2.82 ಲಕ್ಷ ಲೀಟರ್ ಬಿಯರ್ ಮಾರಾಟ!: ಕಳೆದ ವರ್ಷಕ್ಕಿಂತ ಶೇ.33ರಷ್ಟು ಏರಿಕೆ

ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ. ಏಪ್ರಿಲ್ ಮತ್ತು ಮೇ ತಿಂಗಳ ಅವಧಿಯಲ್ಲಿ ಜಿಲ್ಲೆಯಾದ್ಯಂತ 2,82,554 ಲೀಟರ್ ಬಿಯರ್ ಮಾರಾಟವಾಗಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ 70,582 ಲೀಟರ್ ಹೆಚ್ಚುವರಿ ಮಾರಾಟ ದಾಖಲಾಗಿದೆ.

ಅಬಕಾರಿ ಇಲಾಖೆಯ ಅಂಕಿ-ಅಂಶಗಳ ಪ್ರಕಾರ, ಬಿಯರ್ ಮಾರಾಟದಲ್ಲಿ ಶೇ.33.30ರಷ್ಟು ಏರಿಕೆ ಕಂಡುಬಂದಿದೆ.
ರಾಜ್ಯಾದ್ಯಂತ ತಾಪಮಾನ ಏರಿಕೆಯಿಂದ ಜನರು ತಂಪು ಪಾನೀಯಗಳತ್ತ ಮುಖ ಮಾಡಿದರೆ, ಮದ್ಯಪ್ರಿಯರು ಕೋಲ್ಡ್ ಬಿಯರ್‌ಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಜಿಲ್ಲೆಯಲ್ಲೂ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಸಮೀಪ ದಾಖಲಾಗಿದ್ದರಿಂದ ಬಿಯರ್ ಬೇಡಿಕೆ ಗಮನಾರ್ಹವಾಗಿ ಹೆಚ್ಚಾಗಿದೆ.

ಕಳೆದ ವರ್ಷಕ್ಕಿಂತ ಭಾರೀ ಜಿಗಿತ

2025-26ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಒಟ್ಟು 2,11,972 ಲೀಟರ್ ಬಿಯರ್ ಮಾರಾಟವಾಗಿತ್ತು. ಆದರೆ 2026-27ನೇ ಸಾಲಿನ ಇದೇ ಅವಧಿಯಲ್ಲಿ ಅದು 2,82,554 ಲೀಟರ್‌ಗೆ ಏರಿಕೆಯಾಗಿದೆ.

ಏಪ್ರಿಲ್ ತಿಂಗಳಲ್ಲೇ ಕಳೆದ ವರ್ಷದ 1,06,844 ಲೀಟರ್‌ಗಳ ಮಾರಾಟವಾಗಿತ್ತು. ಈ ಬಾರಿ 1,44,251 ಲೀಟರ್‌ಗೆ ಏರಿಕೆಯಾಗಿದೆ. ಮೇ ತಿಂಗಳಲ್ಲೂ 1,05,128 ಲೀಟರ್‌ನಿಂದ 1,38,303 ಲೀಟರ್‌ಗೆ ಏರಿಕೆ ಕಂಡಿದೆ.

ಮಳೆಗಾಲ ಆರಂಭವಾದರೂ ಬೇಡಿಕೆ ಕುಸಿತವಿಲ್ಲ

ಸಾಮಾನ್ಯವಾಗಿ ಮಳೆಗಾಲ ಆರಂಭವಾದ ಬಳಿಕ ಬಿಯರ್ ಮಾರಾಟದಲ್ಲಿ ಇಳಿಕೆ ಕಂಡುಬರುತ್ತದೆ. ಆದರೆ ಈ ಬಾರಿ ಜೂನ್ ಮೊದಲ ವಾರದವರೆಗೂ ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದ ಮಳೆಯಾಗದೇ ಬಿಸಿಲಿನ ತಾಪ ಮುಂದುವರಿದ ಹಿನ್ನೆಲೆಯಲ್ಲಿ ಬಿಯರ್ ಬೇಡಿಕೆ ಕಡಿಮೆಯಾಗಿಲ್ಲ. ಮಳೆಗಾಲದಲ್ಲೂ ಬಿಯರ್ ಮಾರಾಟ ಸ್ಥಿರವಾಗಿದೆ.

ಹೊಸಕೋಟೆ ನಂ.1, ದೊಡ್ಡಬಳ್ಳಾಪುರದಲ್ಲಿ ಅತಿ‌ ಹೆಚ್ಚು ಬೆಳವಣಿಗೆ

ತಾಲೂಕುಗಳವಾರು ಮಾರಾಟದ ಅಂಕಿ-ಅಂಶಗಳನ್ನು ಗಮನಿಸಿದರೆ ಹೊಸಕೋಟೆ ತಾಲೂಕು ಮೊದಲ ಸ್ಥಾನದಲ್ಲಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೊಸಕೋಟೆಯಲ್ಲಿ 85,418 ಲೀಟರ್ ಬಿಯರ್ ಮಾರಾಟವಾಗಿದೆ. ಅದರ ನಂತರ
ದೊಡ್ಡಬಳ್ಳಾಪುರ – 72,536 ಲೀಟರ್
ದೇವನಹಳ್ಳಿ – 63,542 ಲೀಟರ್
ನೆಲಮಂಗಲ – 61,058 ಲೀಟರ್ ಮಾರಾಟವಾಗಿದೆ.

ಆದರೆ ಬೆಳವಣಿಗೆಯ ದೃಷ್ಟಿಯಿಂದ ನೋಡಿದರೆ ದೊಡ್ಡಬಳ್ಳಾಪುರ ತಾಲೂಕು ಅಚ್ಚರಿ ಮೂಡಿಸಿದ್ದು, ಕಳೆದ ವರ್ಷಕ್ಕಿಂತ ಶೇ.43.19ರಷ್ಟು ಮಾರಾಟ ಹೆಚ್ಚಳ ದಾಖಲಿಸಿದೆ.

ವಲಸೆ ಕಾರ್ಮಿಕರ ಸಂಖ್ಯೆಯೂ ಕಾರಣ?

ಜಿಲ್ಲೆಯ ಕೈಗಾರಿಕಾ ಪ್ರದೇಶಗಳಲ್ಲಿ ಸಾವಿರಾರು ವಲಸೆ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಅಬಕಾರಿ ಇಲಾಖೆ ಮೂಲಗಳ ಪ್ರಕಾರ, ಈ ವರ್ಗದ ಗ್ರಾಹಕರಿಂದಲೂ ಬಿಯರ್‌ಗೆ ಹೆಚ್ಚಿನ ಬೇಡಿಕೆ ಕಂಡುಬಂದಿದೆ. ಬೇಸಿಗೆಯ ತಾಪಮಾನ, ಕೈಗಾರಿಕಾ ವಲಯಗಳ ವಿಸ್ತರಣೆ ಹಾಗೂ ಜನರ ಖರೀದಿ ಸಾಮರ್ಥ್ಯ ಹೆಚ್ಚಳವು ಮಾರಾಟ ಏರಿಕೆಗೆ ಕಾರಣಗಳಾಗಿವೆ.

ತಾಲೂಕುವಾರು ಬಿಯರ್ ಮಾರಾಟ (ಏಪ್ರಿಲ್-ಮೇ)

ತಾಲೂಕು            2025-26              2026-27

ನೆಲಮಂಗಲ       46,713 ಲೀ           61,058 ಲೀ

ದೊಡ್ಡಬಳ್ಳಾಪುರ  50,658 ಲೀ           72,536 ಲೀ

ದೇವನಹಳ್ಳಿ         49,237 ಲೀ           63,542 ಲೀ

ಹೊಸಕೋಟೆ       65,364 ಲೀ           85,418 ಲೀ

ಒಟ್ಟು                  2,11,972 ಲೀ        2,82,554 ಲೀ

ತಜ್ಞರ ಅಭಿಪ್ರಾಯ

ಬೇಸಿಗೆಯ ತೀವ್ರತೆ ಹೆಚ್ಚಾದಂತೆ ಬಿಯರ್ ಸೇರಿದಂತೆ ತಂಪು ಪಾನೀಯಗಳ ಬಳಕೆ ಹೆಚ್ಚಾಗುವುದು ಸಹಜ. ಆದರೆ ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಮದ್ಯ ಸೇವನೆ ಮಿತವಾಗಿರಬೇಕು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಳೆದ ವರ್ಷದ ಏಪ್ರಿಲ್-ಮೇ ತಿಂಗಳಿಗೆ ಹೋಲಿಸಿದರೆ ಈ ಬಾರಿ ಬಿಯರ್ ಮಾರಾಟದಲ್ಲಿ ಗಮನಾರ್ಹ ಏರಿಕೆ ಕಂಡಿದೆ ಎಂದು ಹೆಸರನ್ನು ಬಹಿರಂಗಪಡಿಸಲು ಇಚ್ಛಿಸದ ಅಬಕಾರಿ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

ಬೇಸಿಗೆ ಸಯಮಯದಲ್ಲಿ ಬಿಯರ್ ವ್ಯಾಪಾರದಲ್ಲಿ ಗಣನೀಯವಾಗಿ ಏರಿಕೆ ಕಂಡಿತ್ತು. ಈಗಲೂ ಬೇಡಿಕೆ ಹಾಗೇ ಇದೆ ಎಂದು ರಾಹುಲ್, ಮದ್ಯದಂಗಡಿ ಮಾಲೀಕ ದೊಡ್ಡಬಳ್ಳಾಪುರ ತಿಳಿಸಿದ್ದಾರೆ.

Ramesh Babu

Journalist

Recent Posts

3.75 ಲಕ್ಷ ಪಡಿತರ ಚೀಟಿದಾರರ ಇ-ಕೆವೈಸಿ ಬಾಕಿ: ಇ-ಕೆವೈಸಿಗೆ ಅ.20ರ ಗಡುವು: ಗಡುವು ವಿಸ್ತರಣೆಯಿಂದ ಫಲಾನುಭವಿಗಳಿಗೆ ಕೊಂಚ ನಿರಾಳ

ಬೆಂಗಳೂರು ಗ್ರಾಮಾಂತರ: ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಗೆ ಸರ್ಕಾರ ಅ.20ರವರೆಗೆ ಗಡುವು ವಿಸ್ತರಿಸಿದ್ದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೆ ಶೇ.26.65ರಷ್ಟು…

3 hours ago

ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ: ದಂಪತಿ ಸಾವು

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

12 hours ago

ಬಿಗ್ ಬಾಸ್ ಮತ್ತು ಏಷ್ಯನ್ ಗೇಮ್ಸ್……

ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…

14 hours ago

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ- ಆರ್.ವಿ. ಮಹೇಶ್

ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…

1 day ago

ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ 18ರ ಹರೆಯದ ವಿದ್ಯಾರ್ಥಿ

ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…

1 day ago

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತೇಜಸ್ವಿನಿ.ಸಿ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…

1 day ago