ಬಿ.ಜೆ.ಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಅವರು 1,63,460 ಮತಗಳ ಅಂತರದಿಂದ ಗೆಲುವು: ಧ ನ್ಯ ವಾ ದ  ಚಿಕ್ಕಬಳ್ಳಾಪುರ…ಎಂದು ತಿಳಿಸಿದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿ.ಜೆ.ಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಅವರು 1,63,460 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

1) ಡಾ.ಕೆ ಸುಧಾಕರ್ (ಬಿ.ಜೆ.ಪಿ)-8,22,619 ಮತಗಳು

2) ಎಂ.ಎಸ್ ರಕ್ಷಾ ರಾಮಯ್ಯ(ಐ.ಎನ್.ಸಿ)-6,59,159 ಮತಗಳು

3) ನೋಟಾ(NOTA)-6596 (ನೋಟಾ ಗೆ ಮೂರನೇ ಸ್ಥಾನ)

ನನ್ನನ್ನು ದೊಡ್ಡಮಟ್ಟದಲ್ಲಿ ಆಶೀರ್ವದಿಸಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಜನಸೇವಕನಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಮಸ್ತ ಜನತೆಗೆ ನನ್ನ ತುಂಬು ಹೃದಯದ ಧನ್ಯವಾದಗಳು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಜನತೆಗೆ ಧನ್ಯವಾದಗಳನ್ನು ಡಾ.ಕೆ.ಸುಧಾಕರ್ ಅವರು ತಿಳಿಸಿದ್ದಾರೆ.

ಬಿಜೆಪಿ ಮತ್ತು ಎನ್ ಡಿಎ ಮೈತ್ರಿಕೂಟಕ್ಕೆ ದೊರೆತ ಪ್ರತಿಯೊಂದು ಮತವೂ ಪ್ರಧಾನಿ ಶ್ರೀನರೇಂದ್ರ ಮೋದಿ ಅವರ ಹತ್ತು ವರ್ಷಗಳ ರಾಷ್ಟ್ರಸೇವೆಯ ತಪಸ್ಸಿಗೆ ದೊರೆತ ಅಭಿನಂದನೆ ಮತ್ತು ಮುಂದಿನ ಐದು ವರ್ಷಗಳ ವಿಕಾಸ ಪರ್ವಕ್ಕೆ ನೀಡಿರುವ ಜನಾದೇಶ ಎಂದು ಭಾವಿಸುತ್ತೇನೆ ಎಂದು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಮತ್ತು ಎನ್ ಡಿಎ ಮೈತ್ರಿಕೂಟದ ಅಭೂತಪೂರ್ವ ಗೆಲುವಿಗಾಗಿ ನನ್ನನ್ನು ಬಿಂಬಲಿಸಿದ ನಮ್ಮ ಹಿರಿಯ ನಾಯಕರಾದ ಶ್ರೀ ಅಮಿತ್ ಶಾ, ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ.ನಡ್ಡಾ, ಮಾಜಿ ಪ್ರಧಾನಿಗಳಾದ ಶ್ರೀ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಶ್ರೀ ಎಚ್.ಡಿ.ಕುಮಾರಸ್ವಾಮಿ ಹಾಗು ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ.ವಿಜಯೇಂದ್ರ ಅವರಿಗೆ ನನ್ನ ಕೃತಜ್ಞತೆಗಳು ಎಂದು ತಿಳಿಸಿದ್ದಾರೆ.

ಸುಮಾರು 40 ದಿನಗಳ ಕಾಲ ಹಗಲಿರುಳು ಶ್ರಮಿಸಿ ಈ ಐತಿಹಾಸಿಕ ಫಲಿತಾಂಶಕ್ಕೆ ಕಾರಣೀಭೂತರಾದ ನಮ್ಮ ಮೈತ್ರಿಕೂಟದ ಕಾರ್ಯಕರ್ತರು, ಮುಖಂಡರು ಹಾಗೂ ಹಿತೈಷಿಗಳಿಗೆ ಈ ಗೆಲುವನ್ನ ಸಮರ್ಪಿಸುತ್ತೇನೆ ಎಂದು ಹೇಳಿದ್ದಾರೆ.

ವಿಕಸಿತ ಚಿಕ್ಕಬಳ್ಳಾಪುರದ ನಿರ್ಮಾಣದ ಕನಸನ್ನು ನನಸು ಮಾಡಲು ಹಾಗೂ ನಿಮ್ಮೆಲ್ಲರ ಆಕಾಂಕ್ಷೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮುಂದಿನ 5 ವರ್ಷಗಳ ಕಾಲ ಸಮರ್ಪಣಾ ಮನೋಭಾವದಿಂದ ಶ್ರಮಿಸುತ್ತೇನೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *