ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18ನೇ ಆವೃತ್ತಿಯಲ್ಲಿ ಗೆದ್ದು, ಐಪಿಎಲ್ ಚಾಂಪಿಯನ್ ಆಗಿದ್ದು, ಈ ವಿಜಯೋತ್ಸವದ ವೇಳೆ ಚಿನ್ನಾಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ.
ಈ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಹಲವು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.
ಇದಾಗಿ ಕಲವೇ ಗಂಟೆಗಳಲ್ಲಿ ರಾಜ್ಯ ಸರ್ಕಾರ, ಹೊಸ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರನ್ನು ನೇಮಕ ಮಾಡಿದೆ. ಸೀಮಂತ್ ಕುಮಾರ್ ಸಿಂಗ್ ಅವರನ್ನು ಬೆಂಗಳೂರಿಗೆ ನೂತನ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
1996 ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದ ಬಿಹಾರ ಮೂಲದ ಸೀಮಂತ್ ಕುಮಾರ್, ಈ ಹಿಂದೆ ಬೆಂಗಳೂರು ಪೂರ್ವ ವಲಯ ಹೆಚ್ಚುವರಿ ಆಯುಕ್ತರಾಗಿ, ಎಸಿಬಿಯಲ್ಲಿ ಎಡಿಜಿಪಿಯಾಗಿ, ಕೆಎಸ್ಆರ್ ಪಿ ಎಡಿಜಿಪಿಯಾಗಿ ಕಾರ್ಯ ನಿರ್ವಹಿಸಿದ್ದರು. ಸದ್ಯ ಬಿಎಂಟಿಎಫ್ (ಬೆಂಗಳೂರು ಮಹಾನಗರ ಕಾರ್ಯಪಡೆ) ಎಡಿಜಿಪಿಯಾಗಿದ್ದ ಸೀಮಂತ್ ಕುಮಾರ್ ಸಿಂಗ್ ಇದೀಗ ಬೆಂಗಳೂರಿಗೆ 39ನೇ ನೂತನ ಕಮಿಷನರ್ ಆಗಿ ನೇಮಕಗೊಂಡಿದ್ದಾರೆ.
ಸೀಮಂತ್ ಕುಮಾರ್ ಸಿಂಗ್ ಮಂಗಳೂರು ನಗರಕ್ಕೆ ಕಮಿಷನರೇಟ್ ಬಂದ ಬಳಿಕ ಮೊದಲ ಪೊಲೀಸ್ ಕಮಿಷನರ್ ಆಗಿದ್ದರು. 2000ದಿಂದ 2004ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿಯಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಆ ಬಳಿಕ 2014ರಲ್ಲಿ ಪಶ್ಚಿಮ ವಲಯದ ಐಜಿಪಿಯಾಗಿದ್ದರು. ಬೆಂಗಳೂರು ಕೇಂದ್ರ ವಿಭಾಗದ ಐಜಿಪಿಯಾಗಿದ್ದ ಸೀಮಂತ್ ಕುಮಾರ್ ಸಿಂಗ್ ಡಿಐಜಿ ಮತ್ತು ನಕ್ಸಲ್ ನಿಗ್ರಹ ಪಡೆ (ANF)ನ ಕಮಾಂಡರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…