ಲಂಚದ ರೂಪದಲ್ಲಿ 1.25 ಲಕ್ಷ ರೂ. ಹಣವನ್ನು ಪಡೆಯುತ್ತಿದ್ದ ವೇಳೆ ಮಹಿಳಾ ಪಿಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಸಾವಿತ್ರಿ ಬಾಯಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್ಐ. ಕೇಸ್ ಒಂದರಲ್ಲಿ ‘ಬಿ ರಿಪೋರ್ಟ್’ ಹಾಕಲು ಸಾವಿತ್ರಿ ಬಾಯಿ ಹಣಕ್ಕೆ ಬೇಡಿಕೆಯಿಟ್ಟಿದ್ದರಂತೆ. ಈ ಕುರಿತು ಮೊಹಮ್ಮದ್ ಯೂನಸ್ ಎಂಬವರು ನೀಡಿದ ದೂರಿನ ಮೇರೆಗೆ ಸಾವಿತ್ರಿ ಬಾಯಿಯನ್ನು ಟ್ರ್ಯಾಪ್ ಮಾಡಲಾಗಿದೆ.
ಗೊವಿಂದಪುರ ಪೊಲೀಸ್ ಠಾಣೆಯ ಕ್ರೈಂ ನಂಬರ್ 144/25ರ ಕೇಸ್ ಸಂಬಂಧಿಸಿದಂತೆ ಬಿ ರಿಪೋರ್ಟ್ ಸಲ್ಲಿಸಲು ಸಾವಿತ್ರಿ ಬಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ 1.25 ಲಕ್ಷ ರೂ. ಹಣ ಪಡೆಯುವಾಗ ಲೋಕಾ ಬಲೆಗೆ ಬಿದ್ದಿದ್ದಾರೆ. ಸದ್ಯ ಲೋಕಾಯುಕ್ತ ಪೊಲೀಸರು ಸಾವಿತ್ರಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.