ಇತ್ತೀಚೆಗೆ ನಗರದ ಪ್ರಮುಖ ರಸ್ತೆ ಇಕ್ಕೆಲಗಳಲ್ಲಿ ಇದ್ದಂತಹ ಅಂಗಡಿಗಳನ್ನು ನಗರಸಭೆ ವತಿಯಿಂದ ತೆರವುಗೊಳಿಸಲಾಗಿತ್ತು.
ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಬೀದಿಬದಿ ವ್ಯಾಪಾರಸ್ಥರು. ಪರ್ಯಾಯ ವ್ಯವಸ್ಥೆ ಮಾಡಿ ವ್ಯಾಪಾರ ಮಾಡಲು ಅನುವು ಮಾಡಿಕೊಡಬೇಕು ಎಂದು ನಗರಸಭೆ ಎದುರು ಪ್ರತಿಭಟನೆ ನಡೆಸಿದ್ದ ರಸ್ತೆಬದಿ ವ್ಯಾಪಾರಸ್ಥರು.
ಈ ಹಿನ್ನೆಲೆ ಇಂದು ನಗರಸಭೆ ಸದಸ್ಯರು, ಲೋಕೋಪಯೋಗಿ ಇಲಾಖೆ, ಪೊಲೀಸ್ ಇಲಾಖಾಧಿಕಾರಿಗಳ ಜೊತೆ ನಗರದ ನಗರಸಭೆ ಸಭಾಂಗಣದಲ್ಲಿ ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮಿನಾರಾಯಣ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಬೀದಿಬದಿ ವ್ಯಾಪಾರಸ್ಥರಿಂದಲೇ ಅಪಘಾತಗಳು ಆಗುತ್ತವೆ ಎಂಬುದು ಸರಿಯಲ್ಲ. ಮೊದಲು ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚಬೇಕು, ಅವೈಜ್ಞಾನಿಕ ರಸ್ತೆಗಳನ್ನು ಸರಿಪಡಿಸಬೇಕು, ಬೀದಿಬದಿಯಲ್ಲಿ ವಿದ್ಯುತ್ ದೀಪಗಳನ್ನು ಅವಳಡಿಸಬೇಕು, ಬೀದಿಬದಿ ವ್ಯಾಪಾರಸ್ಥರ ಜೀವನದ ಹಿತದೃಷ್ಟಿಯಿಂದ ಶಾಶ್ವತ ಪರಿಹಾರ ಒದಗಿಸಬೇಕು ಎಂದು ನಗರಸಭೆ ಸದಸ್ಯ ಎ.ಜಿ.ಶ್ರೀನಿವಾಸ್ ತಿಳಿಸಿದರು.
ನಗರದೊಳಗಡೆ ಭಾರೀ ವಾಹನಗಳು ಸಂಚರಿಸದಂತೆ ನಿರ್ಬಂಧ ಹೇರಿ ಅಪಘಾತ ತಪ್ಪಿಸಬೇಕು ಎಂದು ನಗರಸಭೆ ಸದಸ್ಯರು ಪೊಲೀಸ್ ಇಲಾಖೆಗೆ ಮನವಿ ಮಾಡಿದರು.
ನಗರದಲ್ಲಿ ಆರು ವ್ಯಾಪಾರ ವಲಯಗಳನ್ನು ಸ್ಥಾಪಿಸಲು ಕೂಡಲೇ ಸರ್ಕಾರಿ ಜಾಗ ಗುರುತಿಸಿ ತಹಶೀಲ್ದಾರ್ ಅವರಿಗೆ ವರದಿ ನೀಡಲಾಗುವುದು, ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೌರಾಯುಕ್ತ ಪರಮೇಶ್ ಅವರು ಸಭೆಯಲ್ಲಿ ತಿಳಿಸಿದರು.
ವಾಹನದಟ್ಟಣೆ ಆಗುವ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ವ್ಯಾಪಾರ ಮಾಡಲು ಅನುಮತಿ ನೀಡಲಾಗುವುದಿಲ್ಲ ಎಂದು ಲೋಕೋಪಯೋಗಿ ಇಲಾಖೆ ವ್ಯಾಪಾರಸ್ಥರಿಗೆ ತಿಳಿಸಿದರು.
ಗೌರಿ ಗಣೇಶ ಹಬ್ಬದ ಪ್ರಯುಕ್ತ ಹಬ್ಬ ಮುಗಿಯುವವರೆಗೂ ವ್ಯಾಪಾರ ಮಾಡಲು ಅವಕಾಶ ಮಾಡಿಕೊಟ್ಟ ನಗರಸಭೆ
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…