ತಂದೆ ಮಗನ ನಡುವೆ ಜಗಳ ಬೀದಿಗೆ ಬಿದ್ದಿದ್ದು, ಬೀದಿಯಲ್ಲಿ ಅಪ್ಪ ಮಗನ ಜಗಳ ಅತಿರೇಕಕ್ಕೆ ಹೋಗಿದೆ. ಸಿಟ್ಟಿಗೆದ್ದ ಮಗನು ತನ್ನ ಕಾರಿಂದ ಅಪ್ಪನ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ತಂದೆ-ಮಗನ ಬೀದಿ ಜಗಳಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಪ್ಪನ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಆ ಇಬ್ಬರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.
ತಂದೆ ಸತೀಶ್ ಶರ್ಮಾ ನಿವೃತ್ತ ಹಿರಿಯ ರಕ್ಷಣಾ ಅಧಿಕಾರಿ. ಇವರು ಮುಂಬೈನಲ್ಲಿ ನೆಲೆಸಿದ್ದಾರೆ. ಮಗ ಮತ್ತು ಸೊಸೆಯ ನಡುವಿನ ಜಗಳ ಬಗೆಹರಿಸಲು ಪತ್ನಿ ಹಾಗೂ ಕಿರಿಯ ಪುತ್ರನೊಂದಿಗೆ ಅಂಬರನಾಥಕ್ಕೆ ಬಂದಿದ್ದರು. ಮಗ ಬಿಂದೇಶ್ವರ್ ಶರ್ಮಾ ಅವರ ಮನೆಗೆ ಬಂದಾಗ ಅವರು ಇರಲಿಲ್ಲ. ಸೊಸೆಯನ್ನು ಸಮಾಧಾನಪಡಿಸಿ ಮುಂಬೈಗೆ ವಾಪಸಾಗುತ್ತಿದ್ದಾಗ ಈ ಘಟನೆ ನಡೆದಿದೆ.
ಮನೆಯಲ್ಲಿ ಕೌಟುಂಬಿಕ ಕಲಹ ಬಗೆಹರಿಯದೆ ಸಾರ್ವಜನಿಕ ಪ್ರದೇಶದಲ್ಲಿ ತೊಂದರೆ ಕೊಟ್ಟಿದ್ದಕ್ಕೆ ಕೆಲ ಸಾರ್ವಜನಿಕರು ಸಫಾರಿ ಕಾರನ್ನು ಧ್ವಂಸಗೊಳಿಸಿ ಆಕ್ರೋಶ ಹೊರಹಾಕಿದರು.
ಕೋಲಾರ: ಮೈಸೂರು ಮಹಾರಾಜರ ಕಾಲದಿಂದಲೂ ಸಕ್ಷಮ ಪ್ರಾಧಿಕಾರದಿಂದ ಕಾನೂನುಬದ್ಧವಾಗಿ ರೈತರಿಗೆ ಹಂಚಿಕೆಯಾಗಿರುವ ಸರ್ಕಾರಿ ಗೋಮಾಳ ಹಾಗೂ ಕಂದಾಯ ಭೂಮಿಯಲ್ಲಿನ ರೈತರನ್ನು…
ದೊಡ್ಡಬಳ್ಳಾಪುರ: ಅಳಿಯನ ವರ್ಗಾವಣೆ ಸೇರಿದಂತೆ ವೈಯಕ್ತಿಕ ವಿಚಾರಗಳಿಗಾಗಿ ಮಾಜಿ ಶಾಸಕ ಟಿ. ವೆಂಕಟರಮಣಯ್ಯ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು…
ದೊಡ್ಡಬಳ್ಳಾಪುರ: 2026ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಯಿಂದ ಕೈಬಿಟ್ಟ ಹಿನ್ನೆಲೆಯಲ್ಲಿ, ಮರು ಜಂಟಿ ಬೆಳೆ…
ದೊಡ್ಡಬಳ್ಳಾಪುರ: 2026ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಯಿಂದ ಕೈಬಿಟ್ಟ ಹಿನ್ನೆಲೆಯಲ್ಲಿ, ಮರು ಜಂಟಿ ಬೆಳೆ…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಕೃಷಿ ಭೂಮಿಯ ಮೇಲೆ ಮತ್ತೊಮ್ಮೆ ಭೂಸ್ವಾಧೀನದ ಆತಂಕ ಆವರಿಸಿದೆ. ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕುಗಳ ವ್ಯಾಪ್ತಿಯಲ್ಲಿ…
ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕರು ಹಾಗೂ ಅವರ ಬೆಂಬಲಿಗರು ವೈಯಕ್ತಿಕ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದು…