ಕೋಲಾರ: ನಗರದ ಕೀಲುಕೋಟೆಯ ಬೀರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ತಾಲ್ಲೂಕಿನ ಹುತ್ತೂರು ಹೋಬಳಿಯ ಅಜ್ಜಪನಹಳ್ಳಿ ಗ್ರಾಮದಲ್ಲಿ ಭಾನುವಾರ ಬೀರೇಶ್ವರ ಸ್ವಾಮಿಯ ಮೆರವಣಿಗೆ ಪರ್ವ ನಡೆಯಿತು.
ಈ ಸಂದರ್ಭದಲ್ಲಿ ಸ್ವಾಮಿಯ ಕುಲಸ್ಥರಾದ ಗ್ರಾಮ್ ಶಂಕರಪ್ಪ, ಚಿಕ್ಕಣ್ಣ, ನವೀನ್, ನಾಗರಾಜ್ (ಎಸ್‌ಎಂಟಿ) ಅವರು ಪರ್ವಕ್ಕೆ ಸ್ವಾಗತ ಕೋರಿದರು ಗ್ರಾಮದ ಚನ್ನರಾಯಸ್ವಾಮಿ ದೇವಾಲಯದ ಬಳಿ ಮೆರವಣಿಗೆ ಪರ್ವ ಬಂದಾಗ ತಲೆಯ ಮೇಲೆ ತೆಂಗಿನ ಕಾಯಿ ಇಟ್ಟು ಒಡೆಯುವ ಪವಾಡ ಗಮನ ಸೆಳೆಯಿತು. ಗ್ರಾಮದಲ್ಲಿರುವ ಕುರುಬ ಸಮುದಾಯದ ಹಾಲುಮತಸ್ಥ ಕುಟುಂಬದವರು ಸೇರಿ ಭಕ್ತಭಾವದಿಂದ ಕಾರ್ಯಕ್ರಮ ನಡೆಸಿಕೊಟ್ಟರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ನೂರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
ಇದೇ ತಿಂಗಳು 21, 22 ಹಾಗೂ 23ರಂದು ಮೂರು ದಿನಗಳ ಕಾಲ ಬೀರೇಶ್ವರ ಜಾತ್ರಾ ಮಹೋತ್ಸವ ನಡೆಯಲಿದೆ. ಸುಮಾರು 9 ವರ್ಷಗಳಲ್ಲಿ ನಡೆಯುತ್ತಿರುವ ಜಾತ್ರೆ ಇದಾಗಿದೆ. 3 ವರ್ಷಗಳ ಹಿಂದೆ ಜಾತ್ರೆಗೆ ಸಿದ್ಧತೆ ಮಾಡಿಕೊಂಡಿದ್ದಾಗ ಕೋವಿಡ್ ಬಂದ ಕಾರಣ ನಿಲ್ಲಿಸಿದೆ. ಈಗ ಮತ್ತೆ ಸಿದ್ಧತೆ ನಡೆಯುತ್ತಿದ್ದು, ಪರ್ವವು ಎಲ್ಲಾ ಕುಲಸ್ಥರ ಮನೆಗೆ ತೆರಳಲಿದೆ ಎಂದು ಗ್ರಾಮದ ಮುಖಂಡರು ತಿಳಿಸಿದರು.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…