Categories: Crime

ಬೃಹತ್ ಇಸ್ಪೀಟ್ ಅಡ್ಡೆ ಭೇದಿಸಿದ ಪೊಲೀಸರು: ₹49.50 ಲಕ್ಷ ನಗದು ವಶಕ್ಕೆ ,19 ಮಂದಿ ಅಂದರ್

ಶಿರಸಿ ಪಟ್ಟಣದ ಹೊರವಲಯದಲ್ಲಿರುವ ಭೈರುಂಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಗಸಾಲ ಗ್ರಾಮದ ವಿ.ಆರ್.ಆರ್ ಹೋಂ ಸ್ಟೇ ಬಳಿ ಅಕ್ರಮವಾಗಿ ನಡೆಯುತ್ತಿದ್ದ ಬೃಹತ್ ಇಸ್ಪೀಟ್ ಅಡ್ಡದ ಮೇಲೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ದಾಳಿ ನಡೆಸಿ, 19 ಜನರನ್ನು ಬಂಧಿಸಿ, 49 ಲಕ್ಷದ 50 ಸಾವಿರ ನಗದು ಸೇರಿದಂತೆ ಲಕ್ಷಂತಾರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಜುಲೈ 23ರ ರಾತ್ರಿ 8:45ರ ಸುಮಾರಿಗೆ ಅಕ್ರಮವಾಗಿ ಜುಗಾರಿ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಶಿರಸಿ ಗ್ರಾಮೀಣ ಠಾಣಾ ಪೊಲೀಸರು, ರಾತ್ರಿ 9:45ಕ್ಕೆ ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿ 19 ಮಂದಿ ಇಸ್ಪೀಟ್ ಜುಗಾರಾಟದಲ್ಲಿ ತೊಡಗಿದ್ದರು.

ದಾಳಿಯ ವೇಳೆ, ಪೊಲೀಸರು ಇಸ್ಪೀಟ್ ಅಡ್ಡೆಯಿಂದ ₹49,50,436 ನಗದು ಹಣ, ಜಮಖಾನಗಳು, 52 ಇಸ್ಪೀಟ್ ಎಲೆಗಳು, ಲಕ್ಷಾಂತರ ಮೌಲ್ಯದ ನಾಲ್ಕು ಕಾರುಗಳು ಹಾಗೂ 15ಕ್ಕೂ ಹೆಚ್ಚಿನ ಮೊಬೈಲ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

ಬಂಧಿತ ಆಪಾದಿತರನ್ನು ದಾವಣಗೆರೆ, ಹಾವೇರಿ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಸೇರಿದವರಾದ ಅನಿಲಕುಮಾರ್ ಜಿ.ಆರ್ (30), ಭೀರಪ್ಪ (42), ಬೀರೇಶ್ (26), ಶಂಕರಗೌಡ ಪಾಟೀಲ್ (48), ನಾಗರಾಜ (44), ಪ್ರದೀಪ (48), ಪ್ರಶಾಂತ (35), ಜಬಿವುಲ್ಲಾ (38), ರೇವಣಸಿದ್ದಯ್ಯ (45), ಈಶಪ್ಪ (40), ಪ್ರಕಾಶ (44), ಮಲ್ಲಿಕಾರ್ಜುನ (40), ಬಸವರಾಜ ಜಿ.ಆರ್ (41), ಚಮನಸಾಬ್ (39), ಬಸವರಾಜ (35), ಈರಣ್ಣ (38), ಸಂತೋಷ (31), ವೀರಬಸಪ್ಪ (45), ಮತ್ತು ಚೇತನ ಎನ್ (36) ಎಂದು ಗುರುತಿಸಲಾಗಿದೆ.

ಈ ಕುರಿತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ

ಕಾರ್ಯಾಚರಣೆಯನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್. ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ. ಕೃಷ್ಣಮೂರ್ತಿ ಕೆ.ಎಸ್.ಪಿ.ಎಸ್, ಜಗದೀಶ ಎಂ. ಕೆ.ಎಸ್.ಪಿ.ಎಸ್ ಅವರ ಮಾರ್ಗದರ್ಶನದಲ್ಲಿ, ಶಿರಸಿ ಉಪವಿಭಾಗದ ಡಿ.ವೈ.ಎಸ್.ಪಿ ಗೀತಾ ಪಾಟೀಲ್ ಅವರ ನೇತೃತ್ವದಲ್ಲಿ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಪಿ.ಎಸ್.ಐ ಅಶೋಕ ಆರ್ ರಾಠೋಡ ಮತ್ತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂಧಿಗಳಾದ ಎ.ಎಸ್.ಐ ಪ್ರದೀಪ ರೇವಣಕರ, ಸಂತೋಷ ಕಮಟಗೇರಿ, ರಾಘವೇಂದ್ರ ಜಿ, ಗಣಪತಿ ಪಟಗಾರ, ಷಣ್ಮುಖ ಮಿರಾಶಿ, ರವಿ ಉಕ್ಕಡಗಾತ್ರಿ. ಭರತಕುಮಾರ, ಮಾರುತಿ ಗೌಡ ಹಾಗೂ ಮುಂಡಗೋಡ ಪೊಲೀಸ್ ಠಾಣೆಯ ಕೋಟ್ರೇಶ ನಾಗರವಳ್ಳಿ. ಅಣ್ಣಪ್ಪ ಬುಡಗೇರಿ ಹಾಗೂ ಚಾಲಕರಾದ ಕೃಷ್ಣ ರೇವಣಕರ, ಮೌಲಾಲಿ ಮರಗಡಿ ಇವರುಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂಧಿಯವರಿಗೆ ಪೊಲೀಸ್ ಅಧೀಕ್ಷಕರಾದ ದೀಪನ್, ಎಂ.ಎನ್. ಐ.ಪಿ.ಎಸ್ ರವರು ಪ್ರಶಂಸೆ ವ್ಯಕ್ತ ಪಡಿಸಿ ಬಹುಮಾನ ಘೋಷಿಸಿರುತ್ತಾರೆ.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

4 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

9 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

9 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

17 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago