ಬೃಹತ್ ಘನ ತ್ಯಾಜ್ಯ ವಿಲೇವಾರಿ ಹಾಗೂ ಸಂಗ್ರಹಣಾ ಘಟಕಕ್ಕೆ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ ಭೇಟಿ, ಪರಿಶೀಲನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ ಅವರು ನಗರದ ಹೊರವಲಯದಲ್ಲಿರುವ ವಡ್ಡರಪಾಳ್ಯದ ಸಮೀಪದ ನಗರಸಭೆ ತ್ಯಾಜ್ಯ ವಿಲೇವಾರಿ ಹಾಗೂ ಸಂಗ್ರಹಣಾ ಘಟಕಕ್ಕೆ ಭೇಟಿ ನೀಡಿ ಕಸ ವಿಲೇವಾರಿ ಹಾಗೂ ವಿವಿಧ ಹಂತಗಳಲ್ಲಿ ಸಂಗ್ರಹಿಸಿದ ಕಸವನ್ನು ಸಂಸ್ಕರಣೆ ಮಾಡುವುದನ್ನು ಪರಿವೀಕ್ಷಿಸಿದರು.

ನಂತರ ಜಾಲಿಗೆ ಗ್ರಾಮ ಪಂಚಾಯಿತಿ ಅರದೇಶನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಭೇಟಿ ನೀಡಿ ಗ್ರಂಥಾಲಯ, ಕಂಪ್ಯೂಟರ್ ವಿಭಾಗಗಳನ್ನು ವೀಕ್ಷಿಸಿ, ಶಾಲೆ ಗುಣಮಟ್ಟ ಹಾಗೂ ಅಭಿವೃದ್ಧಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಜಿಲ್ಲಾಧಿಕಾರಿ ಡಾ. ಶಿವಶಂಕರ್ ಎನ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್, ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್‌ ವಿಭಾ ವಿದ್ಯಾ ರಾಥೋಡ್ ಹಾಗೂ ನಗರಸಭೆ ಪೌರಾಯುಕ್ತ ಕೆ.ಪರಮೇಶ್ ಸೇರಿದಂತೆ ಇತರೆ ಅಧಿಕಾರಿಗಳು
ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *