Categories: ಕೊಡಗು

ಬೃಹತ್ ನಕಲಿ ಸಿಮ್ ಜಾಲದ ದಂಧೆ ಬೆಳಕಿಗೆ: ಆನ್ ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸರಬರಾಜು: ಪೊಲೀಸರ ಬಲೆಗೆ ಬಿದ್ದ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ ಸಿಮ್ ಗಳನ್ನು ಸರಬರಾಜು ಮಾಡುತ್ತಿದ್ದ ಮಡಿಕೇರಿಯ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್ ಓರ್ವನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರೋಷನ್ ಬಂಧಿತ ಆರೋಪಿಯಾಗಿದ್ದಾನೆ.

2018ರಿಂದ 2023ರ ವರೆಗೆ ಏರ್ ಟೆಲ್ ಸಿಮ್ ಡಿಸ್ಟ್ರಿಬ್ಯುಟರ್ ಆಗಿದ್ದ ಈತ, ನಂತರ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್ ಆಗಿದ್ದಾನೆ.

ವಂಚನೆ ಬೆಳಕಿಗೆ ಬಂದಿದ್ದು ಹೇಗೆ?

ಇತ್ತೀಚಿಗೆ ಕೇರಳದ ವ್ಯಕ್ತಿಯೊಬ್ಬರು ಆನ್ ಲೈನ್ ವಂಚಕರಿಂದ ಬರೋಬರಿ 1 ಕೋಟಿಗಿಂತಲೂ ಹೆಚ್ಚಿನ ಹಣವನ್ನು ಕಳೆದುಕೊಂಡಿದ್ದರು. ಪ್ರಕರಣ ದಾಖಲಾಗಿ ತನಿಖೆ ಕೈಗೊಂಡಾಗ ಮಡಿಕೇರಿಯ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್ ಅಬ್ದುಲ್ ರೋಷನ್ ಅಲ್ಲಿನ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈತನಿಂದ ಸಾವಿರಾರು ಸಂಖ್ಯೆಯ ಸಿಮ್ ಗಳು ಸೇರಿದಂತೆ 150 ಚೈನಾ ಮೇಡ್ ಮೊಬೈಲ್ ಮತ್ತು ಆರು ಬಯೋಮೆಟ್ರಿಕ್ ಸ್ಕ್ಯಾನರ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈತ ಆನ್ ಲೈನ್ ದಗಾಕೋರರಿಗೆ ಗ್ರಾಹಕರ ಬದಲಿ ಸಿಮ್ ಗಳನ್ನು ಸರಬರಾಜು ಮಾಡುತ್ತಾ ಕೈತುಂಬಾ ದುಡ್ಡು ಎಣಿಸುತ್ತಿದ್ದ. ಇದೀಗ ತಗಲಾಕಿಕೊಂಡು ಕಂಬಿ ಎಣಿಸುತ್ತಿದ್ದಾನೆ.

ಈ ದಂಧೆಯ ಮೂಲಕ ಲಕ್ಷ ಲಕ್ಷ ಹಣ ಸಂಪಾದಿಸುತ್ತಿದ್ದ ಅಬ್ದುಲ್ ರೋಷನ್ ವಿರುದ್ಧ ಈಗಾಗಲೇ ಮಡಿಕೇರಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ.

ನಕಲಿ ಸಿಮ್ ಜಾಲವನ್ನು ಭೇದಿಸಿರುವ ಕೇರಳ ಪೊಲೀಸ್ ಅಧಿಕಾರಿಗಳು, ಇದೀಗ ಮಡಿಕೇರಿಯ ಆರೋಪಿಯನ್ನು ಬಂಧಿಸಿ ಮತ್ತಷ್ಟು ಮಾಹಿತಿಯನ್ನು ಕಲೆ ಹಾಕಿದ್ದಾರೆ. ಈತನಿಗೆ ಸಹಕಾರ ನೀಡಿದ ಇತರರ ಬಗ್ಗೆ ಕೂಡ ಮಾಹಿತಿ ಪಡೆದುಕೊಳ್ಳುತ್ತಿದ್ದು, ಹಲವರು ಬಂಧನ ಆಗುವ ಸಾಧ್ಯತೆ ಇದೆ. ಕೇರಳ ರಾಜ್ಯದಲ್ಲಿ ಇದೊಂದು ದೊಡ್ಡ ಅಕ್ರಮ ದಂದೆಯ ಪ್ರಕರಣವಾಗಿದ್ದು, ಕೇರಳ ಪೊಲೀಸರು ತೀವ್ರ ಸ್ವರೂಪದ ವಿಚಾರಣೆಯನ್ನು ಕೈಗೊಂಡಿದ್ದಾರೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

3 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

13 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago