ಮನೆಯ ಯಜಮಾನ ಗಾರೆ ಕೆಲಸ ಮಾಡುವ ಕೂಲಿ ಕಾರ್ಮಿಕ, ಬರುವ ದಿನಗೂಲಿಯಲ್ಲಿ ನೆಮ್ಮದಿಯ ಜೀವನ ಕಟ್ಟಿಕೊಂಡಿದ್ದರು, ಕಷ್ಟದ ದುಡಿಮೆಯಲ್ಲಿ ಇಬ್ಬರು ಮಕ್ಕಳ ವಿದ್ಯಾಭ್ಯಾಸ ಮಾಡಿಸುತ್ತಾ ಭವಿಷ್ಯದ ಕನಸು ಕಂಡಿದ್ದರು, ರಾತ್ರಿ ನಡೆದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಇಡೀ ಮನೆ ಹೊತ್ತಿ ಉರಿದಿದೆ, ಅಡುಗೆ ಮಾಡಲು ಸಂಗ್ರಹಿಸಿದ ರೇಷನ್, ಧರಿಸಲು ಇಟ್ಟಿದ ಬಟ್ಟೆಗಳ ಜೊತೆ ದಾಖಲೆ ಪತ್ರಗಳು ಸುಟ್ಟು ಭಸ್ಮವಾಗಿದೆ, ಇಡೀ ಕುಟುಂಬ ಊಟಕ್ಕೂ ಹಣವಿಲ್ಲದೆ ಅಕ್ಷರಶಃ ಬೀದಿಗೆ ಬಿದ್ದಿದೆ.
ದೊಡ್ಡಬಳ್ಳಾಪುರ ನಗರದ ರಾಜೀವ್ ಗಾಂಧಿ ಬಡಾವಣೆಯ ಒಂದನೇ ಹಂತದಲ್ಲಿ ಘಟನೆ ನಡೆದಿದೆ. ವಿದ್ಯುತ್ ಅವಘಡದಲ್ಲಿ ಅಂಬಿಕಾ ಮತ್ತು ಸೋಮಶೇಖರ್ ದಂಪತಿ ವಾಸವಾಗಿದ್ದ ಮನೆ ಸಂಪೂರ್ಣವಾಗಿ ಸುಟ್ಟು ಬೂದಿಯಾಗಿದೆ, ಅದೃಷ್ಟವಶಾತ್ ಗಂಡ, ಹೆಂಡತಿ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿ ಅವಘಡದಲ್ಲಿ ಮನೆಯಲ್ಲಿದ್ದ ರೇಷನ್, ಬಟ್ಟೆಗಳು, ದಾಖಲೆಗಳಾದ ಆಧಾರ್ ಕಾರ್ಡ್, ವೋಟರ್ ಐಡಿ, ಬ್ಯಾಂಕ್ ಪಾಸ್ ಸಹ ಬೆಂಕಿಯಲ್ಲಿ ಸುಟ್ಟು ಬೂದಿಯಾಗಿದೆ.
ಮಕ್ಕಳ ಪಠ್ಯ ಪುಸ್ತಕ ಸಹ ಬೆಂಕಿಯ ಜ್ವಾಲೆಯಲ್ಲಿ ಸುಟ್ಟು ಬೂದಿಯಾಗಿದೆ, ಸದ್ಯ ಆ ಕುಟುಂಬದವರಿಗೆ ತಿನ್ನಲು ಒಂದು ಕಾಳು ಅಕ್ಕಿ ಸಹ ಇಲ್ಲದೆ ಭಿಕ್ಷೆ ಬೇಡುವ ಪರಿಸ್ಥಿತಿಯಲ್ಲಿದೆ ಎಂದು ಅಂಬಿಕಾ ತಿಳಿಸಿದ್ದಾರೆ.
ಮನೆಯಲ್ಲಿದ್ದ ಪ್ರತಿಯೊಂದು ವಸ್ತುಗಳನ್ನ ಕಳೆದುಕೊಂಡಿರುವ ಕುಟುಂಬ ಅಕ್ಷರಶಃ ಬೀದಿಗೆ ಬಂದಿದೆ, ದಾನಿಗಳ ಸಹಾಯದ ನಿರೀಕ್ಷೆಯಲ್ಲಿರುವ ಕುಟುಂಬಕ್ಕೆ ನೆರವಿನ ಅಗತ್ಯವಿದೆ.
ಅಂಬಿಕಾ
ಪೋನ್ ಪೇ ನಂಬರ್ – 9591585143
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…