ವಿವಾಹಿತ ಮಹಿಳೆ ಮತ್ತು ಆಕೆಯ ಪ್ರೇಮಿಯು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿಗಾಹುತಿಯಾಗಿರುವ ಘಟನೆ ಕೊತ್ತನೂರಿನ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡ ಗುಬ್ಬಿ ನಿವಾಸದ ಡಿ ಮ್ಯಾಕ್ಸ್ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.
ಬಂಗಾಳ ಮೂಲದ ಸೌಮಿನಿ ದಾಸ್ ಮತ್ತು ಕೇರಳ ಮೂಲದ ಅಭಿಲ್ ಅಬ್ರಾಹಂ ಮೃತ ದುರ್ದೈವಿಗಳು.
ಸೌಮಿನಿ ದಾಸ್ ಗೆ ಕಳೆದ ಎರಡು ವರ್ಷಗಳ ಹಿಂದೆಯೇ ವಿವಾಹವಾಗಿತ್ತು, ಬೆಂಗಳೂರಿಗೆ ಬಂದು ಎರಡನೇ ವರ್ಷದ ನರ್ಸಿಂಗ್ ಮಾಡುತ್ತಿದ್ದಳು.
ಸೌಮಿನಿ ಅವರಿಗೆ ರಜೆ ಇದ್ದಂತಹ ಸಂದರ್ಭದಲ್ಲಿ ಮತ್ತು ಬಿಡುವಿನಲ್ಲಿ ನರ್ಸಿಂಗ್ ಏಜನ್ಸಿ ನಡೆಸುತ್ತಿದ್ದ ಅಬ್ರಾಹಂ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದರು. ಆಗ ನರ್ಸಿಂಗ್ ಏಜನ್ಸಿ ನಡೆಸುತ್ತಿದ್ದ ಅಬ್ರಾಹಂ ಪರಿಚಯವಾಗಿ ಪರಿಚಯ ಪ್ರೇಮಕ್ಕೆ ತಿರುಗಿತ್ತು.
ಸೌಮಿನಿ ಅವರು ಕೆಲ ದಿನಗಳ ಹಿಂದೆ ಕೊಲ್ಕತ್ತಾಗೆ ಹೋಗಿದ್ದರು. ಕೊಲ್ಕತ್ತಾದಿಂದ ಬೆಂಗಳೂರಿಗೆ ಬಂದಿದ್ದಳು, ಬೆಂಗಳೂರಿಗೆ ಬಂದು 14 ದಿನಕ್ಕೆ ಫ್ಲ್ಯಾಟ್ ಬಾಡಿಗೆ ಪಡೆದಿದ್ದರು. ನಂತರ ಸೌಮಿನಿ ತನ್ನ ಪತಿಗೆ ಪ್ರೇಮದ ವಿಚಾರ ತಿಳಿಸಿದಳು. ಈ ವಿಚಾರವಾಗಿ ಗಲಾಟೆಯಾಗಿದೆ ಎನ್ನಾಲಾಗಿದೆ. ಈ ವಿಚಾರಕ್ಕೆ ಗಲಾಟೆಯಾದ ನಂತರ ಇಬ್ಬರು ಸಾಯಲು ತೀರ್ಮಾನ ಮಾಡಿದ್ದಾರೆ.
ಭಾನುವಾರ ಮಧ್ಯಾಹ್ನ ವೇಳೆಗೆ ಬಾಡಿಗೆ ಪಡೆದಿದ್ದ ಅಪಾರ್ಟ್ಮೆಂಟ್ ನಲ್ಲಿ ಇಬ್ಬರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…