Categories: Crime

ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ದರೋಡೆ ಭೇದಿಸಿದ ಖಾಕಿ ಪಡೆ​: ದಿಢೀರ್ ಶ್ರೀಮಂತರಾಗಲು ಹೋಗಿ ಜೈಲು ಪಾಲು.!

ಬೆಂಗಳೂರು ವಾಯುವ್ಯ ವಿಭಾಗದ ಮಾದನಾಯಕನಹಳ್ಳಿ ರಾಮ್ ದೇವ್ ಜ್ಯುವೆಲರ್ಸ್‌ನಲ್ಲಿ ಗನ್ ತೋರಿಸಿ ನಡೆದ ದರೋಡೆ ಪ್ರಕರಣವನ್ನು ಪೊಲೀಸರು ಕೇವಲ ಏಳು ದಿನಗಳಲ್ಲಿ ಭೇದಿಸಿದ್ದಾರೆ. ಚಿನ್ನದ ಬೆಲೆ ಹೆಚ್ಚಳದ ಹಿನ್ನೆಲೆಯಲ್ಲಿ ದರೋಡೆಗೆ ಸಂಚು ರೂಪಿಸಿದ್ದ ರಾಜಸ್ಥಾನ ಮೂಲದ ಐವರನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ನೆಲಮಂಗಲ, ಫೆಬ್ರವರಿ 09: ಅದು ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ದರೋಡೆ ಗನ್ ಹಿಡಿದು ಚಿನ್ನಾಭರಣದ ಅಂಗಡಿಗೆ ನುಗಿದ್ದ ಗ್ಯಾಂಗ್ ಸಿಕ್ಕಸಿಕ್ಕ ಒಡವೆಗಳನ್ನ ದೋಚಿ ಪರಾರಿಯಾಗಿದ್ದರು. ಆರೋಪಿಗಳ ಬೆನ್ನತ್ತಿದ್ದ ಮಾದನಾಯಕನಹಳ್ಳಿ ಪೊಲೀಸರು ಘಟನೆ ನಡೆದ ಕೇವಲ ಏಳು ದಿನದಲ್ಲಿ ಹೆಡೆಮುರಿ ಕಟ್ಟಿದ್ದಾರೆ.

ಬಂಧಿತ ಆರೋಪಿಗಳು

ಅನೂಪ್ ಸಿಂಗ್, ರವಿ, ಅಂಕಿತ್, ಅರುಣ್, ಅನೂಪ್ ರಾಮ್​​ ಬಂಧಿತರು. ಬಂಧಿತರೆಲ್ಲಾ ರಾಜಸ್ತಾನಿ ಮೂಲದವರು. ದರೋಡೆ ನಂತರ ರಾಜಸ್ಥಾನಕ್ಕೆ ತೆರಳಿದ ಆರೋಪಿಗಳನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ.

ಕಳೆದ ವಾರವಷ್ಟೇ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದಾಸಪುರದ ರಾಮ್ ದೇವ್ ಜ್ಯವೆಲರ್ಸ್​​ನಲ್ಲಿ ಈ ಭಯಾನಕ ದರೋಡೆ ನಡೆದಿತ್ತು. ದರೋಡೆಕೋರರು ಗನ್ ತೋರಿಸಿ 30 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಸದ್ಯ ಐವರು ಆರೋಪಿಗಳನ್ನ ಮಾದನಾಯಕನಹಳ್ಳಿ ಪೊಲಿಸರು ಬಂಧಿಸಿದ್ದಾರೆ.

ದರೋಡೆಗೆ ಪಕ್ಕಾ ಸ್ಕೆಚ್​​

ಇನ್ನು ಈ ಆರೋಪಿಗಳಲ್ಲಿ ಅಂಕಿತ್ ಮಾದನಾಯಕನಹಳ್ಳಿ ವಾಸವಿದ್ದ. ಕಚೋರಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ. ಎಷ್ಟು ದಿನ ಈ ರೀತಿ ಜೀವನ ಸಾಗಿಸುವುದು ಎಂದು ನಿರ್ಧರಿಸಿದ್ದ ಆತ ದರೋಡೆ ಪ್ಲ್ಯಾನ್​​ ಮಾಡಿದ್ದ. ಇತನಿಗೆ ರವಿ ಎಂಬಾತ ಸಾಥ್​ ನೀಡಿದ್ದ. ರವಿ ರಾಜಸ್ಥಾನದಲ್ಲಿದ್ದು, ಆತನ ಬಳಿ ಪಿಸ್ತೂಲ್ ಕೂಡ ಇತ್ತು. ಇದನ್ನೇ ಬಂಡವಾಳ‌ ಮಾಡಿಕೊಂಡಿದ್ದ ಆರೋಪಿಗಳು ದರೋಡೆ ಮಾಡಲು ಪ್ಲ್ಯಾನ್ ಮಾಡಿದ್ದರು.

ಪ್ಲ್ಯಾನ ಪ್ರಕಾರ ಜನವರಿ 27ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿರುವ ರಾಮ್ ದೇವ್ ಜ್ಯುವೆಲರ್ಸ್​​​ಗೆ ನುಗಿದ್ದ ದರೋಡೆಕೋರರು ಗನ್ ತೋರಿಸಿ ಜ್ಯುವೆಲ್ಲರಿ ಅಂಗಡಿಯಲ್ಲಿದ್ದ ಚಿನ್ನಾಭರಣಗಳನ್ನು ಕದ್ದು ಪರಾರಿ ಆಗಿದ್ದರು. ಖದೀಮರ ಕೈಚಳಕ ಸಿಸಿಟಿ ಟಿವಿಯಲ್ಲಿ ಸೆರೆ ಆಗಿತ್ತು. ಇನ್ನು ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಕೂಡ ಮಾಡಿದ್ದರು.

ಒಟ್ಟಿನಲ್ಲಿ ಆರೋಪಿಗಳ ಬೆನ್ನತ್ತಿದ್ದ ಮಾದನಾಯಕನಹಳ್ಳಿ ಪೊಲೀಸರು ಇದೀಗ ಎಲ್ಲರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಆರೋಪಿಗಳನ್ನ ಕಸ್ಟಡಿಗೆ ಪಡೆದಿರುವ ಮಾದನಾಯಕಹಳ್ಳಿ ಪೊಲಿಸರು ವಿಚಾರಣೆ ನಡೆಸಿದ್ದಾರೆ.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

1 hour ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

5 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

6 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

10 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

22 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

23 hours ago