ಇಂದು ಮುಂಜಾನೆ ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಶಾ ಅವರನ್ನು ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು.
ಲೋಕಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಆಯಾ ಪಕ್ಷದ ಅಭ್ಯರ್ಥಿಗಳು ಅಬ್ಬರದ ಪ್ರಚಾರದ ಕಾರ್ಯದಲ್ಲಿ ತೊಡಗಿದ್ದಾರೆ. ಅಭ್ಯರ್ಥಿ ಪರ ಪ್ರಚಾರ ಮಾಡಲು ಸ್ಟಾರ್ ಪ್ರಚಾರಕರೂ ಡೆಲ್ಲಿಯಿಂದ ಕರ್ನಾಟಕಕ್ಕೆ ಒಬ್ಬೊಬ್ಬರಾಗಿ ಆಗಮಿಸುತ್ತಿದ್ದಾರೆ. ಅದೇರೀತಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲು ಕೇಂದ್ರದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಮುಂಜಾನೆ ಬೆಂಗಳೂರಿಗೆ ಆಗಮಿಸಿದ್ದಾರೆ.
ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯ, ಅಸಮಾಧಾನ, ಬಂಡಾಯದಂತಹ ವಿಚಾರವನ್ನ ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಸಮಾಧಾನದ ಕಾವನ್ನು ತಣ್ಣಗಾಗಿಸಲು ಪ್ರಯತ್ನ ನಡೆಸಲಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಬಂಡಾಯ ಎದುರಿಸುತ್ತಿರುವ ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಬೀದರ್ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರಗಳ ಜಿಲ್ಲಾ ನಾಯಕರ ಕೋರ್ ಕಮಿಟಿ ಸದಸ್ಯರೊಂದಿಗೂ ಶಾ ಸಭೆ ನಡೆಸಲಿದ್ದಾರೆ.
ನಂತರ ಅಭ್ಯರ್ಥಿಗಳ ಪರ ಭರ್ಜರಿ ರೋಡ್ ಶೋ ಮೂಲಕ ಪ್ರಚಾರ ಮಾಡಲಿದ್ದಾರೆ.