‘ಬೆಂಗಳೂರಿನಲ್ಲಿ ಜನಸಂಖ್ಯೆ ವಾರ್ಷಿಕ ಬೆಳವಣಿಗೆ ದರ 3.7%, ವಾಹನ ಸಂಖ್ಯೆ ಬೆಳವಣಿಗೆ ದರ 10% ನಷ್ಟಿದೆ’

ಉದ್ಯೋಗ ಸೃಷ್ಟಿಯಲ್ಲಿ, ಆರ್ಥಿಕ ಚಟುವಟಿಕೆಗಳ ಬೆಳವಣಿಗೆಯಲ್ಲಿ ಮುಂಚೂಣಿ ನಗರವಾಗಿರುವ ಬೆಂಗಳೂರು ಪರಿಣಾಮಕಾರಿ ಟ್ರಾಫಿಕ್ ನಿರ್ವಹಣಾ ವ್ಯವಸ್ಥೆಯನ್ನು ಹೊಂದಿದೆ ಎಂದು ಗೃಹ ಸಚಿವ ಪ್ರಿಯಡಂಕ್ ಖರ್ಗೆ ಹೇಳಿದ್ದಾರೆ.

ಬೆಂಗಳೂರು ಸಂಚಾರ ಪೊಲೀಸ್ ನಿರ್ವಹಣಾ ಕೇಂದ್ರಕ್ಕೆ ಭೇಟಿ ನೀಡಿ ಬೆಂಗಳೂರಿನ ಟ್ರಾಫಿಕ್ ವ್ಯವಸ್ಥೆಯ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದು ಮಾತನಾಡಿದ ಅವರು, ನಾಲ್ಕು ವಿಭಾಗಗಳಲ್ಲಿ ಕಾರ್ಯಾಚರಿಸುತ್ತಿರುವ ಬೆಂಗಳೂರು ಟ್ರಾಫಿಕ್ ಪೊಲೀಸ್ 53 ಪೊಲೀಸ್ ಠಾಣೆಯನ್ನು ಹೊಂದಿದೆ. ಸುಮಾರು 1.25 ಕೋಟಿ ನೋಂದಾಯಿತ ವಾಹನಗಳಿರುವ ಬೆಂಗಳೂರು ನಗರದಲ್ಲಿ ಟ್ರಾಫಿಕ್ ಪೊಲೀಸ್ ವ್ಯವಸ್ಥೆಯು ಅಂದಾಜು 14,000 ಕಿಲೋಮೀಟರ್ ರಸ್ತೆ ಜಾಲದ ಟ್ರಾಫಿಕ್ ನಿರ್ವಹಿಸಬೇಕಾಗುತ್ತದೆ ಎಂದರು.

ಬೆಂಗಳೂರಿನಲ್ಲಿ ಜನಸಂಖ್ಯೆಯ ವಾರ್ಷಿಕ ಬೆಳವಣಿಗೆ ದರ 3.7% ನಷ್ಟಿದ್ದರೆ, ವಾಹನಸಂಖ್ಯೆಯ ಬೆಳವಣಿಗೆ ದರ 10%ನಷ್ಟಿದೆ. ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಪರಿಣಾಮಕಾರಿಯಾಗಿ ಟ್ರಾಫಿಕ್ ನಿರ್ವಹಣೆ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ಸಂಚಾರ ಸುರಕ್ಷತೆ, ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ ಮತ್ತು ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆ ವೃದ್ಧಿಗೆ ಒತ್ತು ನೀಡುವ ಕುರಿತು ಕಾರ್ಯಯೋಜನೆ ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ, ಸಂಚಾರ ಪೊಲೀಸ್‌ ವಸ್ತು ಸಂಗ್ರಹಾಲಯ ಹಾಗೂ ಕ್ಯಾಮೆರಾ ಟ್ರ್ಯಾಕಿಂಗ್‌ ವಿಭಾಗಕ್ಕೆ ಭೇಟಿ ನೀಡಿ ಕಾರ್ಯಾಚರಣೆಯನ್ನು ವೀಕ್ಷಿಸಿದೆ. ಮುಂದಿನ ದಿನಗಳಲ್ಲಿ ಬೆಂಗಳೂರು ಟ್ರಾಫಿಕ್ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

Leave a Reply

Your email address will not be published. Required fields are marked *

error: Content is protected !!