ಉದ್ಯೋಗ ಸೃಷ್ಟಿಯಲ್ಲಿ, ಆರ್ಥಿಕ ಚಟುವಟಿಕೆಗಳ ಬೆಳವಣಿಗೆಯಲ್ಲಿ ಮುಂಚೂಣಿ ನಗರವಾಗಿರುವ ಬೆಂಗಳೂರು ಪರಿಣಾಮಕಾರಿ ಟ್ರಾಫಿಕ್ ನಿರ್ವಹಣಾ ವ್ಯವಸ್ಥೆಯನ್ನು ಹೊಂದಿದೆ ಎಂದು ಗೃಹ ಸಚಿವ ಪ್ರಿಯಡಂಕ್ ಖರ್ಗೆ ಹೇಳಿದ್ದಾರೆ.
ಬೆಂಗಳೂರು ಸಂಚಾರ ಪೊಲೀಸ್ ನಿರ್ವಹಣಾ ಕೇಂದ್ರಕ್ಕೆ ಭೇಟಿ ನೀಡಿ ಬೆಂಗಳೂರಿನ ಟ್ರಾಫಿಕ್ ವ್ಯವಸ್ಥೆಯ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದು ಮಾತನಾಡಿದ ಅವರು, ನಾಲ್ಕು ವಿಭಾಗಗಳಲ್ಲಿ ಕಾರ್ಯಾಚರಿಸುತ್ತಿರುವ ಬೆಂಗಳೂರು ಟ್ರಾಫಿಕ್ ಪೊಲೀಸ್ 53 ಪೊಲೀಸ್ ಠಾಣೆಯನ್ನು ಹೊಂದಿದೆ. ಸುಮಾರು 1.25 ಕೋಟಿ ನೋಂದಾಯಿತ ವಾಹನಗಳಿರುವ ಬೆಂಗಳೂರು ನಗರದಲ್ಲಿ ಟ್ರಾಫಿಕ್ ಪೊಲೀಸ್ ವ್ಯವಸ್ಥೆಯು ಅಂದಾಜು 14,000 ಕಿಲೋಮೀಟರ್ ರಸ್ತೆ ಜಾಲದ ಟ್ರಾಫಿಕ್ ನಿರ್ವಹಿಸಬೇಕಾಗುತ್ತದೆ ಎಂದರು.
ಬೆಂಗಳೂರಿನಲ್ಲಿ ಜನಸಂಖ್ಯೆಯ ವಾರ್ಷಿಕ ಬೆಳವಣಿಗೆ ದರ 3.7% ನಷ್ಟಿದ್ದರೆ, ವಾಹನಸಂಖ್ಯೆಯ ಬೆಳವಣಿಗೆ ದರ 10%ನಷ್ಟಿದೆ. ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಪರಿಣಾಮಕಾರಿಯಾಗಿ ಟ್ರಾಫಿಕ್ ನಿರ್ವಹಣೆ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.
ಸಂಚಾರ ಸುರಕ್ಷತೆ, ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ ಮತ್ತು ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆ ವೃದ್ಧಿಗೆ ಒತ್ತು ನೀಡುವ ಕುರಿತು ಕಾರ್ಯಯೋಜನೆ ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ, ಸಂಚಾರ ಪೊಲೀಸ್ ವಸ್ತು ಸಂಗ್ರಹಾಲಯ ಹಾಗೂ ಕ್ಯಾಮೆರಾ ಟ್ರ್ಯಾಕಿಂಗ್ ವಿಭಾಗಕ್ಕೆ ಭೇಟಿ ನೀಡಿ ಕಾರ್ಯಾಚರಣೆಯನ್ನು ವೀಕ್ಷಿಸಿದೆ. ಮುಂದಿನ ದಿನಗಳಲ್ಲಿ ಬೆಂಗಳೂರು ಟ್ರಾಫಿಕ್ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…
ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…