ಬೆಂಗಳೂರು: ಬೆಂಗಳೂರಿನ 10 ಗೋಡೆಗಳ ಮೇಲೆ ಪ್ರಸಿದ್ಧ ಕಲಾವಿದರಿಂದ ಚಿತ್ತಾರ ಮೂಡಿಸುವ ಕೆಲಸ ಪೂರ್ಣಗೊಂಡಿದೆ.
ಬಿಎಂಆರ್‌ಸಿಎಲ್ ಹಾಗೂ ಅನ್‌ಬಾಕ್ಸಿಂಗ್ ಬಿಎಲ್‌ಆರ್ ಸಹಯೋಗದೊಂದಿಗೆ ನಗರದ ಪ್ರಮುಖ 10 ಗೋಡೆಗಳ ಮೇಲೆ ಚಿತ್ರ ಬಿಡಿಸುವ “ಗೋಡೆ ಬೆಂಗಳೂರು” ಉಪಕ್ರಮವನ್ನು ಈ ಹಿಂದೆ ಘೋಷಿಸಲಾಗಿತ್ತು. ಇದೀಗ ಚಿತ್ರಬಿಡುಸವ ಕೆಲಸ ಪೂರ್ಣಗೊಂಡಿದ್ದು, ಬೆಂಗಳೂರಿನ ಈ 10 ಗೋಡೆಗಳು ಸುಂದರವಾಗಿ ಮೂಡಿ ಬಂದಿವೆ.
*ಎಲ್ಲೆಲ್ಲಿ ಚಿತ್ರ:*
ವಿಶ್ವೇಶ್ವರಯ್ಯ ಸೆಂಟ್ರಲ್ ಕಾಲೇಜ್ ಮೆಟ್ರೋ ಸ್ಟೇಷನ್‌ನ ಗೋಡೆಯ ಮೇಲೆ, “ಸ್ವಲ್ಪ ಅಡ್ಜೆಸ್ಟ್ ಮಾಡ್ಕೊಳಿ” ಎಂಬ ಶೀರ್ಷಿಕೆಯಡಿ ಬೆಂಗಳೂರಿನ ಜನದಟ್ಟಣೆಯ ಬಗ್ಗೆ ಕಲಾವಿದರಾದ ಅನಿಲ್‌ಕುಮಾರ್ ಸುಂದರವಾಗಿ ಚಿತ್ರಬಿಡಿಸಿದ್ದಾರೆ.
ಜಯನಗರ ಮೆಟ್ರೋ ನಿಲ್ದಾಣದ ಗೋಡೆ ಮೇಲೆ ಈ ಹಿಂದೆ ಇದ್ದ ಬೆಂಗಳೂರಿನ ನೈಜತೆಯ ಬಗ್ಗೆ ಚಿತ್ರಿಸಲಾಗಿದೆ, ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಮೆಟ್ರೋ ನಿಲ್ದಾಣದಲ್ಲಿ ಹಳೆಯ ವಿಂಟೇಜ್ ಪೋಸ್ಟರ್‌ಗಳು ಮತ್ತು ಮ್ಯಾಚ್‌ಬಾಕ್ಸ್ ಚಿತ್ರಗಳಿಂದ ಪ್ರೇರಿತವಾದ ಕಲಾಕೃತಿಯನ್ನು ಬಿಡಿಸಲಾಗಿದೆ. ಸೈನ್ಸ್ ಗ್ಯಾಲರಿ ರಸ್ತೆಯ ಗೋಡೆಗಳ ಮೇಲೆ ರಂಗೋಲಿ ಚಿತ್ತಾರ, ಯಶವಂತಪುರ ಮೆಟ್ರೋಸ್ಟೇಷನ್‌ನಲ್ಲಿ ದೇಹದ ಭಾಗಗಳ ಕುರಿತು ವಿವರಿಸುವ ಚಿತ್ರ, ಹಲಸೂರು ಮೆಟ್ರೋ ನಿಲ್ದಾಣದಲ್ಲಿ ಮಹಿಳೆಯೊಬ್ಬರು ತಳ್ಳೋಗಾಡಿ ತಳ್ಳುವ ಸಾಗುವ ಚಿತ್ರವನ್ನು ಬಿಡಿಸಲಾಗಿದೆ. ಒಟ್ಟಾರೆ 10 ಗೋಡೆಗಳ ಮೇಲೆ ವಿವಿಧ ವಿಷಯಗಳನ್ನಾಧರಿಸಿ, ಬೃಹತ್ ಗಾತ್ರದಲ್ಲಿ ಚಿತ್ರ ಬಿಡಿಸಿದ್ದು, ಈ ಚಿತ್ರಗಳು ನಗರದ ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸಿವೆ.
ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್…
ಕದನ ವಿರಾಮ...... ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ, ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ…
ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…
ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…
ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…
ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…