ಬೆಂಗಳೂರಿನ ತ್ಯಾಜ್ಯ ನೀರು ನಮ್ಮೂರಿನ ಕೆರೆಗಳಿಗೆ ಹರಿಸುವ ಬಗ್ಗೆ ರೈತರು ಎಚ್ಚರಗೊಳ್ಳಬೇಕು- ಜಾನಪದ ವಿದ್ವಾಂಸ ಡಾ.ಟಿ.ಗೋವಿಂದರಾಜು

ಬೆಂಗಳೂರಿನ ತ್ಯಾಜ್ಯ ನೀರು ನಮ್ಮೂರಿನ ಕೆರೆಗಳಿಗೆ ಹರಿಸುವ ಬಗ್ಗೆ ರೈತರು ಎಚ್ಚರಗೊಳ್ಳಬೇಕು.  ಅವೈಜ್ಞಾನಿಕವಾಗಿ ತ್ಯಾಜ್ಯ ನೀರು ಕೆರೆಗಳು ತುಂಬಿದರೆ ಪರಿಸರಕ್ಕೆ ಮಾರಕವಾಗುತ್ತದೆ ಎಂದು ಜಾನಪದ ವಿದ್ವಾಂಸ ಡಾ.ಟಿ.ಗೋವಿಂದರಾಜು ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಕನಸವಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ‌ ನಡೆದ ಆಧುನಿಕ‌ ಆದಿಮ‌ ಪುಸ್ತಕ ಬಿಡುಗಡೆ ‌ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ  ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಮ್ಮೂರಿನ ಕೆರೆಗಳಿಗೆ ವಿದೇಶದ ಪಕ್ಷಿಗಳು ಪ್ರತಿ ವರ್ಷ  ಬರುತ್ತವೆ. ಕೆರೆಗಳು‌ ಕಲುಷಿತಗೊಂಡರೆ ವಿದೇಶದಿಂದ ಬರುವ ಪಕ್ಷಿಗಳಿಗೆ ನೆಲೆ ಇಲ್ಲದಂತೆ ಆಗುತ್ತದೆ. ಕೆರೆಗಳನ್ನು ಆಶ್ರಯಿಸಿಕೊಂಡಿರುವ ಜಲಚರಗಳು ನಾಶವಾಗುತ್ತವೆ. ಅಂತರ್ಜಲ ಕಲುಷಿತವಾಗುತ್ತದೆ. ರೋಗ ಹರಡುವ ಈ ತ್ಯಾಜ್ಯ ನೀರು ಜನರನ್ನು ಹಳ್ಳಿಗಳಿಂದ ಗೂಳೆ ಹೋಗುವ ಪರಿಸ್ಥಿತಿ ನಿರ್ಮಾಣ ಆಗುತ್ತದೆ ಎಂದರು.

ಭಾರತದ ದೇಶದಲ್ಲಿ ಸ್ವಾತಂತ್ರ್ಯ ಮತ್ತು ಮಹಾತ್ಮಗಾಂಧಿ  ಮುಂತಾದವರಿಂದ ತಳಸಮುದಾಯವರು ಶಿಕ್ಷಣ ಪಡೆಯುವಂತಾದರು. ಶಿಕ್ಷಣದಿಂದ ವಿವಿಧ ವರ್ಗಗಳ ಜನರು ಸಮಾಜದ ಮುಖ್ಯವಾಹಿನಿಯಲ್ಲಿ ಬರಲು‌ ಸಾಧ್ಯವಾಯಿತು. ಇಂದು ಎಲ್ಲರೂ ಧರ್ಮದ ಬಗ್ಗೆ  ಮಾತನಾಡುತ್ತಾ ಪರಸ್ಪರ ಧರ್ಮಗಳನ್ನು ದ್ವೇಷಿಸುತ್ತಿರುವುದು ವಿಷಾದನೀಯ ಸಂಗತಿಯಾಗಿದೆ. ಸತ್ಯದ ವಿಷಯಗಳನ್ನು ಪ್ರತಿಪಾದಿಸಲು ಹಿಂಜರಿಕೆಪಡುವ ಅಗತ್ಯವಿಲ್ಲ ಎಂದರು.

ಆಧುನಿಕ ಆದಿಮ ಕೃತಿ ಬಿಡುಗಡೆ ಮಾಡಿ ಮಾತನಾಡಿದ  ನಿವೃತ್ತ ಪ್ರಾಧ್ಯಾಪಕ ಡಾ.ಚಿಕ್ಕಣ್ಣಯಣಿಕಟ್ಟಿ,  ಆಧುನಿಕ ಆದಿಮ ಕೃತಿಯೂ ಸಾಮಾಜಿಕ, ಸಾಂಸ್ಕೃತಿಕ ಮತ್ತು ಜಾನಪದೀಯ ನೆಲೆಯಲ್ಲಿ ವಿವೇಚಿಸುವ ಮೂಲಕ   ಕರ್ನಾಟಕವನ್ನು ಅಕ್ಷರ ಸಂಸ್ಕೃತಿಯ ಮೂಲಕ ದಾಖಲೀಕರಣ ಮಾಡಲಾಗಿದೆ.

ಸಾಂಸ್ಕೃತಿಕ ನೆಲೆಗಳಲ್ಲಿ ವಿವಿಧ ರೀತಿಯ ಆಲೋಚನೆಗಳನ್ನು ಆಧುನಿಕ ಆದಿಮ ಕೃತಿ ವಿವರಿಸುತ್ತದೆ. ಪ್ರತಿ ಗ್ರಾಮಗಳು ಸಾಂಸ್ಕೃತಿಕ ಅಧ್ಯಯನಕ್ಕೆ ಒಳಗಾಗಬೇಕು. ಆಧುನಿಕ  ಆದಿಮ ಪುಸ್ತಕವನ್ನು ಮೈಸೂರು ವಿಶ್ವವಿದ್ಯಾನಿಲಯ ಪ್ರಕಟಿಸಿರುವುದು ಪುಸ್ತಕದ ಮಹತ್ವವನ್ನು ಹೇಳುತ್ತದೆ. ದಕ್ಷಿಣ ಭಾರತದಲ್ಲೇ ಮೈಸೂರು ವಿಶ್ವವಿದ್ಯಾನಿಲಯದಂತಹ ವಿಶ್ವವಿದ್ಯಾಲಯ ಮತ್ತೊಂದಿಲ್ಲ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ  ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ ಮಾತನಾಡಿ,  ದೊಡ್ಡಬಳ್ಳಾಪುರ ತಾಲ್ಲೂಕು ಹಲವಾರು ಪ್ರತಿಭಾವಂತರನ್ನು ಹೊಂದಿದೆ. ಕಲೆ, ಸಾಹಿತ್ಯ, ರಂಗಭೂಮಿ, ಸ್ವಾತಂತ್ರ್ಯ ಹೋರಾಟ ಮುಂತಾದ ಕ್ಷೇತ್ರದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರತಿಭಾವಂತರು ಮುಂದಿದ್ದಾರೆ. ಅವರ ಸಾಧನೆಯನ್ನು ಸ್ಮರಿಸುವ ಮತ್ತು ಪರಿಚಯಿಸುವ ಕಾರ್ಯವನ್ನು ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಿದೆ. ಜನಸಾಮಾನ್ಯರ ಪರಿಷತ್ತು ಆಗಿ ಕಾರ್ಯನಿರ್ವಹಿಸುವ ಮೂಲಕ‌ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಕಾರ್ಯಕ್ರಮಗಳನ್ನು ಕನ್ನಡ ಸಾಹಿತ್ಯ ಪರಿಷತ್ತು  ನಡೆಸಲಾಗುತ್ತಿದೆ. ಆಜೀವ ಸದಸ್ಯತ್ವ ಅಭಿಯಾನ ಮೂಲಕ‌ ಕನ್ನಡ ಸಾಹಿತ್ಯ ಪರಿಷತ್ತು ಕೋಟಿ ಸದಸ್ಯರನ್ನು‌  ಹೊಂದಲಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಚುಂಚೇಗೌಡ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಷ್ಮಿಪತಯ್ಯ, ಭಜನಾ ಮಂಡಲಿ ಅಧ್ಯಕ್ಷ ನಂಜೇಗೌಡ,  ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ಅಶ್ವತ್ಥಗೌಡ, ಸಂಘಟನಾ ಕಾರ್ಯದರ್ಶ ರಾಜಘಟ್ಟ ರವಿ, ವಿನೋದಗೌಡ,  ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ  ಪಿ.ಗೋವಿಂದರಾಜು, ಮಧುರೆ ಹೋಬಳಿ ಘಟಕದ ಅಧ್ಯಕ್ಷ ಜಿ.ಸುರೇಶ್, ಶಿಕ್ಷಕರ‌ ಸಂಘದ ಮಾಜಿ ಅಧ್ಯಕ್ಷ ಶಂಕರಪ್ಪ, ಭಾರತ ಸೇವಾದಳದ ಕೆಂಪೇಗೌಡ, ಸೇವಾ ಸಮಿತಿ ಅಧ್ಯಕ್ಷ ಮರಿಯಣ್ಣ, ಕಸಾಪ ಪದಾಧಿಕಾರಿಗಳಾದ ಶರಣಯ್ಯ ಹಿರೇಮಠ, ಪರಮೇಶ್, ಗಿರೀಶ್.ಎನ್.ಬರಗೂರು, ಜಿ.ಸುರೇಶ್, ಹೊಂಗಿರಣ    ಬಳಗದ ಅಧ್ಯಕ್ಷ  ಸಿ.ಗೋವಿಂದರಾಜು, ಟಿ.ಸಿ.ವೆಂಕಟಾಚಲಪತಿ, ಮುದ್ದುಗಂಗಯ್ಯ, ಚಂದ್ರಶೇಖರ್, ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ  ಬೀರೇಶ್, ನೆಲಮಂಗಲ ಕಸಾಪ ಅಧ್ಯಕ್ಷ ಪ್ರದೀಪಕುಮಾರ್  ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

13 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

13 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

18 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

20 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

23 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

24 hours ago