Categories: ಕೋಲಾರ

ಬೆಂಗಳೂರು ಉತ್ತರ ವಿವಿಯ ಸಮಗ್ರ ಅಭಿವೃದ್ಧಿಗೆ ಪಕ್ಷಾತೀತವಾಗಿ ಬೆಂಬಲ-ಕೊತ್ತೂರು ಮಂಜುನಾಥ್

ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯವು ಹೊಸದಾಗಿ ರಚನೆಯಾಗಿದ್ದು ಇದರ ಸಮಗ್ರ ಅಭಿವೃದ್ಧಿಗೆ ಪಕ್ಷಾತೀತವಾಗಿ ಬೆಂಬಲಿಸಲು ಸದಾ ಸಿದ್ದವಿದ್ದು ಅಧಿಕಾರಿಗಳು ನಮ್ಮನ್ನು ಬಳಸಿಕೊಳ್ಳಬಹುದು ಎಂದ ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ನಗರದ ಹೊರವಲಯದ ಮಂಗಸಂದ್ರ ಬಳಿಯ ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದಲ್ಲಿ ಶನಿವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 207 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಬೆಂಗಳೂರು ಉತ್ತರ ವಿವಿ ವ್ಯಾಪ್ತಿಯಲ್ಲಿ ಬೇಕಾಗಿರುವ ಮೂಲಭೂತ ಸೌಕರ್ಯಗಳ ಪಟ್ಟಿ ಕೊಡಿ ಅನುದಾನ ಕೊಡಿಸುವ ಕೆಲಸವನ್ನು ಪಕ್ಷಾತೀತವಾಗಿ ನಾವು ಎಲ್ಲರೂ ಮಾಡತ್ತೇವೆ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಸಹ ಅವಿಭಜಿತ ಕೋಲಾರ ಜಿಲ್ಲೆಯ ಭಾಗವಾಗಿದ್ದಾರೆ ಅವರನ್ನು ಕೇಳಿದ ತಕ್ಷಣ ಅನುದಾನ ಕೊಡಲಿಕ್ಕೆ ಸಿದ್ದರಿದ್ದಾರೆ ಎಂದರು.

ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ಥಾಪನೆಗೆ ಸಾಕಷ್ಟು ಹೋರಾಟ ಮತ್ತು ಪರಿಶ್ರಮವಾಗಿದೆ ದೇಶದಲ್ಲಿ ಮಾದರಿಯ ವಿವಿಯಾಗಿ ಮಾಡಬೇಕು ಇದಕ್ಕೆ ಅಧಿಕಾರಿಗಳಿಂದ ಹಿಡಿದು ಜನಪ್ರತಿನಿಧಿಗಳು ಒಗ್ಗಟ್ಟಿನಿಂದ ಬೆಂಬಲಿಸಬೇಕ ಶಿಕ್ಷಣದಿಂದ ಮಾತ್ರವೇ ದೇಶದಲ್ಲಿ ಬದಲಾವಣೆ ತರಲು ಸಾಧ್ಯವಾಗುತ್ತದೆ ಇದನ್ನು ವಿಧ್ಯಾರ್ಥಿಗಳು ಅರ್ಥ ಮಾಡಿಕೊಳ್ಳಬೇಕು ಸರ್ಕಾರ ಮತ್ತು ವಿವಿಗಳಿಂದ ಸಿಗುವ ಸೌಲಭ್ಯಗಳನ್ನು ಸರಿಯಾಗಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಇಂಚರ ಗೋವಿಂದರಾಜು ಮಾತನಾಡಿ ಬೆಂಗಳೂರು ಉತ್ತರ ವಿವಿಯಲ್ಲಿ ಸುಮಾರು 13 ಕೋರ್ಸುಗಳು ಇದ್ದು ಬಹುತೇಕ ಅತಿಥಿ ಪ್ರಾಧ್ಯಾಪಕರು ಹೆಚ್ಚಾಗಿದ್ದು ಖಾಯಂ ಪ್ರಾಧ್ಯಾಪಕರ ನೇಮಕಕ್ಕೆ ಕ್ರಮ ವಹಿಸುತ್ತೇವೆ ವಿವಿಯಲ್ಲಿ ಸಂಶೋಧನಾ ಕೇಂದ್ರವನ್ನು ಪ್ರಾರಂಭಿಸಬೇಕು ಹೊಸ ಹೊಸ ವಿಷಯಗಳ ಬಗ್ಗೆ ವಿಧ್ಯಾರ್ಥಿಗಳು ಸಂಶೋಧನೆ ನಡೆಸಲು ಸಾಧ್ಯವಾಗುತ್ತದೆ ಸ್ನಾತಕೋತ್ತರ ಕೇಂದ್ರದಲ್ಲಿನ ಎಲ್ಲಾ ವಿಧ್ಯಾರ್ಥಿಗಳ ಶುಲ್ಕದಿಂದ ಎಸ್ಸಿ ಎಸ್ಟಿ ವಿಧ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಿದ್ದು ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ದಾರಿ ತಪ್ಪದೇ ಸರಿಯಾಗಿ ಬಳಕೆಯಾಗುವಂತೆ ನೋಡಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಬೆಂಗಳೂರು ವಿಶ್ವವಿದ್ಯಾಲಯದ ಒತ್ತಡವನ್ನು ಕಡಿಮೆ ಮಾಡಲು ಮೂರು ವಿವಿಗಳಾಗಿ ವಿಂಗಡಿಸಲಾಗಿದೆ ಅಗತ್ಯಕ್ಕೆ ತಕ್ಕಂತೆ ಅನುದಾನದ ಜೊತೆಗೆ ಸೌಲಭ್ಯಗಳನ್ನು ಒದಗಿಸುವ ಜವಾಬ್ದಾರಿ ನಮ್ಮ ಮೇಲೆ ಇದ್ದು ಪ್ರಾಮಾಣಿಕವಾಗಿ ಅ ಕೆಲಸವನ್ನು ಒಟ್ಟಾಗಿ ಮಾಡುತ್ತೇವೆ ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ದೃಷ್ಟಿಯಿಂದ ಬೆಂಗಳೂರು ಉತ್ತರ ವಿವಿಯಲ್ಲಿ ಕೌಶಲ್ಯ ತರಬೇತಿಗೆ ಅವಶ್ಯಕತೆ ಇರುವ ಕೋರ್ಸುಗಳಿಗೆ ಹೆಚ್ಚಿನ ಅಧ್ಯತೆ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಬೆಂಗಳೂರು ಉತ್ತರ ವಿವಿ ಕುಲಪತಿ ಪ್ರೊ ನಿರಂಜನ್ ವಾನಳ್ಳಿ ಮಾತನಾಡಿ ಈ ಬಾರಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಲು ಸರಕಾರದಿಂದ ಅನುದಾನ ಬಿಡುಗಡೆ ಮಾಡಿಲ್ಲ ಆದರೂ ವಿಧ್ಯಾರ್ಥಿಗಳ ಹಿತದೃಷ್ಟಿಯಿಂದ ಸುಮಾರು 1.12 ಕೋಟಿ ವೆಚ್ಚದಲ್ಲಿ ವಿವಿಯ ಹಣದಲ್ಲಿಯೇ 207 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಲಾಗುತ್ತಿದೆ ಹೆಚ್ ಕ್ರಾಸ್‌ ಬಳಿಯ ಅಮರಾವತಿಯಲ್ಲಿ ಹೊಸ ಕ್ಯಾಂಪಸ್ ಸಿದ್ದವಾಗುತ್ತಿದ್ದು ಇಲ್ಲಿರುವ ಜಾಗವನ್ನು ಕ್ರೀಡಾಂಗಣ, ಹಾಸ್ಟೆಲ್, ಸಭಾಂಗಣ ಸೇರಿದಂತೆ ಇತರೆ ಕಾಮಗಾರಿಗಳಿಗೆ ಬಳಸಿಕೊಳ್ಳಲು ಶಾಸಕರು ಎಂಎಲ್ಸಿಗಳು ವಿಶೇಷ ಗಮನ ಹರಿಸಬೇಕು ಎಂದರು.

ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ವಿವಿಯ ಹಣಕಾಸು ಅಧಿಕಾರಿ ಬಿ.ವಿ ವಸಂತಕುಮಾರ್, ಸ್ನಾತಕೋತ್ತರ ಕೇಂದ್ರದ ನಿರ್ದೇಶಕಿ ಹಾಗೂ ಪ್ರಭಾರಿ ಕುಲಸಚಿವರಾದ ಡಿ.ಕುಮುದಾ, ಡಾ ರಾಜಣ್ಣ ಇದ್ದರು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

13 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

23 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

2 days ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago