ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ ಹಿನ್ನೆಲೆಯಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಎಸ್.ಎಂ. ಹರೀಶ್ ಗೌಡ ಅವರು ವಿದ್ಯಾರ್ಥಿಗಳನ್ನು ಅಭಿನಂದಿಸಿ ಪ್ರೋತ್ಸಾಹಧನ ನೀಡಿ ಪ್ರೋತ್ಸಾಹಿಸಿದರು.

ಎಂ.ಎ. ಇತಿಹಾಸ ವಿಭಾಗದಲ್ಲಿ ಮೂರನೇ ರ‍್ಯಾಂಕ್ ಪಡೆದ ಅರುಣ್ ಕುಮಾರ್ ಕೆ.ಎಂ., ನಾಲ್ಕನೇ ರ‍್ಯಾಂಕ್ ಪಡೆದ ಸೌಮ್ಯ ಬಿ., ಐದನೇ ರ‍್ಯಾಂಕ್ ಪಡೆದ ಲಕ್ಷ್ಮಿ ಆರ್.ಜಿ. ಹಾಗೂ ಎಂ.ಎ. ರಾಜ್ಯಶಾಸ್ತ್ರ ವಿಭಾಗದಲ್ಲಿ ನಾಲ್ಕನೇ ರ‍್ಯಾಂಕ್ ಪಡೆದ ನಾಗಭೂಷಣ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಎಸ್.ಎಂ. ಹರೀಶ್ ಗೌಡ, ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳೂ ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಮಾಜದಲ್ಲಿ ಹೆಸರು ಮಾಡಬಹುದು ಎಂಬುದಕ್ಕೆ ಈ ವಿದ್ಯಾರ್ಥಿಗಳ ಸಾಧನೆಯೇ ಸಾಕ್ಷಿಯಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಹುದ್ದೆಗಳನ್ನು ಪಡೆದು ಕಾಲೇಜು ಹಾಗೂ ತಾಲೂಕಿಗೆ ಕೀರ್ತಿ ತರಲಿ ಎಂದು ಹಾರೈಸಿದರು.

ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ವಿ. ಮಾತನಾಡಿ, ಸಂಘವು ಹಲವು ವರ್ಷಗಳಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಇತರೆ ಚಟುವಟಿಕೆಗಳಿಗೆ ಬೆಂಬಲ ನೀಡುತ್ತಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವನ್ನು ನಿರಂತರವಾಗಿ ನಡೆಸುತ್ತಿದೆ ಎಂದರು.

ವಿದ್ಯಾರ್ಥಿಗಳು ಈ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಮಾಜಕ್ಕೆ ಹಾಗೂ ತಾವು ವ್ಯಾಸಂಗ ಮಾಡಿದ ಕಾಲೇಜಿಗೆ ಉತ್ತಮ ಹೆಸರು ತರಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ ಡೊರೀನ್ ಸ್ನೇಹಲತಾ ಕೊಟಿಯನ್, ಉಪನ್ಯಾಸಕ ಶ್ರೀನಿವಾಸ್, ಹಳೆ ವಿದ್ಯಾರ್ಥಿಗಳ ಸಂಘದ ಖಜಾಂಚಿ ಮಹೇಶ್, ಸಂಘಟನಾ ಕಾರ್ಯದರ್ಶಿ ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Ramesh Babu

Journalist

Recent Posts

3.75 ಲಕ್ಷ ಪಡಿತರ ಚೀಟಿದಾರರ ಇ-ಕೆವೈಸಿ ಬಾಕಿ: ಇ-ಕೆವೈಸಿಗೆ ಅ.20ರ ಗಡುವು: ಗಡುವು ವಿಸ್ತರಣೆಯಿಂದ ಫಲಾನುಭವಿಗಳಿಗೆ ಕೊಂಚ ನಿರಾಳ

ಬೆಂಗಳೂರು ಗ್ರಾಮಾಂತರ: ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಗೆ ಸರ್ಕಾರ ಅ.20ರವರೆಗೆ ಗಡುವು ವಿಸ್ತರಿಸಿದ್ದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೆ ಶೇ.26.65ರಷ್ಟು…

5 hours ago

ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ: ದಂಪತಿ ಸಾವು

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

15 hours ago

ಬಿಗ್ ಬಾಸ್ ಮತ್ತು ಏಷ್ಯನ್ ಗೇಮ್ಸ್……

ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…

16 hours ago

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ- ಆರ್.ವಿ. ಮಹೇಶ್

ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…

1 day ago

ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ 18ರ ಹರೆಯದ ವಿದ್ಯಾರ್ಥಿ

ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…

1 day ago

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತೇಜಸ್ವಿನಿ.ಸಿ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…

1 day ago